ಮಲ್ಲಿಕಾರ್ಜುನ ಖರ್ಗೆ ನನಗೆ ಹಿರಿಯ ಅಣ್ಣ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಪರಮೇಶ್ವರ್

Date:

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಮತ್ತು ನಮ್ಮ ಕುಟುಂಬ ಒಂದೇ. ರಾಜಕೀಯವನ್ನು ಹೊರತುಪಡಿಸಿ ನನಗೆ ಅವರು ಹಿರಿಯ ಅಣ್ಣ ಇದ್ದ ಹಾಗೇ. ನಾನು ಆಗಾಗ್ಗೆ ಅವರನ್ನು ಭೇಟಿ ಮಾಡುತ್ತಿರುತ್ತೇನೆ. ಈ ವೇಳೆ ಕುಟುಂಬದ ವಿಚಾರಗಳನ್ನು ಮಾತಾಡುತ್ತೇವೆ. ಭೇಟಿಯಾದಾಗಲೆಲ್ಲ ರಾಜಕೀಯ ವಿಚಾರಗಳನ್ನು ಮಾತನಾಡಲು ಹೋಗುವುದಿಲ್ಲ” ಎಂದರು.

“ನಿನ್ನೆ ಭೇಟಿ ವೇಳೆಯು ಸಹ ಯಾವುದೇ ರಾಜಕೀಯ ಚರ್ಚೆಯನ್ನು ಮಾಡಿಲ್ಲ. ಕುಟುಂಬದ ಅನೇಕ ವಿಚಾರಗಳನ್ನು ಮಾತಾಡಿಕೊಂಡಿದ್ದೇವೆ. ಅದಕ್ಕೆ ಹೆಚ್ಚು ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ. ಒಂದೇ ಒಂದು ಶಬ್ದವನ್ನು ರಾಜಕೀಯದ ಬಗ್ಗೆ ಮಾತಾಡಿಲ್ಲ. ದೆಹಲಿಗೆ ಹೋಗುತ್ತೇನೆ. ಅದರಲ್ಲಿ ಏನು ತೊಂದರೆ ಇದೆ. ನಮ್ಮ ನಾಯಕರುಗಳನ್ನು ಭೇಟಿ ಮಾಡಿಕೊಂಡು ಬರುತ್ತೇನೆ. ಅದಕ್ಕೆ ಬೇರೆಬೇರೆ ಕಲ್ಪನೆಗಳನ್ನು ಮಾಡಿಕೊಳ್ಳುವ ಅಗತ್ಯವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ವಿಚಾರದಲ್ಲಿ ಮುಚ್ಚುಮರೆ ಏನಿದೆ? ರಾಜಕೀಯ ಚರ್ಚೆ ಮಾಡಿದ್ದರೆ, ಮಾಡಿರುವುದಾಗಿ ಹೇಳುತ್ತಿದ್ದೆ. ಏನು ಚರ್ಚೆ ಮಾಡಿದ್ದೇನೆ ಅಂತ ಹೇಳುತ್ತಿದ್ದೆನೇ? ನಾನು ರಾಜಕೀಯ ಚರ್ಚೆ ಮಾಡಿಲ್ಲ. ಒಂದು ವೇಳೆ ಚರ್ಚೆ ಮಾಡಿದ್ದರೆ ಏನು ಎಂಬುದನ್ನು ನಿಮ್ಮ ಮುಂದೆ ಹೇಳುತ್ತಿರಲಿಲ್ಲ” ಎಂದರು.

“ರಾಜ್ಯದ ತೆರಿಗೆ ಪಾಲು ಕೇಳಿದರೆ ಸಣ್ಣತನ ಎಂದಿರುವ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರಿಗೆ ನಾಚಿಕೆಯಾಗಬೇಕು. ಈ ದೇಶದಲ್ಲಿ ಯಾವ ರೀತಿಯ ಆಡಳಿತ ನಡೆಯುತ್ತಿದೆ. ಸ್ವಲ್ಪ ಅರ್ಥ ಮಾಡಿಕೊಂಡು ವಿಶ್ಲೇಷಣೆ ಮಾಡಿಕೊಂಡರೆ ಒಳ್ಳೆಯದು. ಫೆಡರಲ್ ವ್ಯವಸ್ಥೆಯಲ್ಲಿ ತೆರಿಗೆ ಪಾಲು ಯಾವ ರೀತಿ ಹಂಚಿಕೆಯಾಗಬೇಕು ಎಂಬುದರ ಬಗ್ಗೆ ನಿಯಮ ಮಾಡಿಟ್ಟಿದ್ದಾರೆ. ಹೆಚ್ಚು ತೆರಿಗೆ ಕಟ್ಟುತ್ತಿರುವ ಕರ್ನಾಟಕದವರಿಗೆ ಹೆಚ್ಚು ಪಾಲು ನೀಡುವಂತೆ ಕೇಳುತ್ತಿದ್ದೇವೆ” ಎಂದರು.

“ನಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ದಿವಾಳಿ ಆಗಿದೆ ಎಂದು ಹೇಳುತ್ತಾರೆ. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಆ ರೀತಿ ಮಾತನಾಡಬಾರದು. ಇದೆಲ್ಲ ರಾಜಕಾರಣದಲ್ಲಿ ಸರಿಯಲ್ಲ. ಒಂದು ವ್ಯವಸ್ಥೆ ಮಾಡಿಟ್ಟಿದ್ದಾರೆ. ಆ ವ್ಯವಸ್ಥೆಯಲ್ಲಿ ನಾವೆಲ್ಲ ಹೋಗಬೇಕು. ವ್ಯವಸ್ಥೆ ಬದಲಾವಣೆ ಮಾಡಿಕೊಳ್ಳಲಿ. ಕೇಂದ್ರಕ್ಕೆ ಬಂದಿರುವ ತೆರಿಗೆ ಯಾರಿಗು ಕೊಡುವುದಿಲ್ಲ ಎಂದು ನಿಯಮ ಮಾಡಿಕೊಳ್ಳಲಿ” ಎಂದು ಹೇಳಿದರು.

“ಜಾತಿಗಣತಿ ವರದಿ ಜಾರಿಗೆ ಯಾರು ಅಡ್ಡಿಪಡಿಸಿಲ್ಲ. ಆಂತರಿಕವಾಗಿ ಇನ್ನೂ ಚರ್ಚೆಯಾಗಬೇಕಿದೆ. ನಂತರ ಹೊರಗೆ ತರಬೇಕು. ಮುಖ್ಯಮಂತ್ರಿಗಳು ಆರೋಗ್ಯದ ದೃಷ್ಟಿಯಿಂದ ಸಚಿವ ಸಂಪುಟ ಸಭೆಯನ್ನು ಮುಂದೂಡಿದ್ದಾರೆ. ಫೆ.17ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ ನಡೆಸಲು ನಿರ್ಧರಿಸಿದ್ದಾರೆ. ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಕುರಿತು ಹೇಳಿದ್ದಾರೆ‌” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...