ಖರ್ಗೆ, ವೇಣು, ಡಿಕೆ ರಹಸ್ಯ ಮಾತುಕತೆ : ಯಾರಿಗೆ ಏನು ಉತ್ತರ ಕೊಡಬೇಕೋ ಖಂಡಿತ ಕೊಡುವೆ ಎಂದ ಡಿಕೆ

Date:

  • ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಬೆಳಗ್ಗೆ ತೆರಳಿ ಸಮಾಲೋಚನೆ
  • ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಕುರಿತು ಚರ್ಚೆ!

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆದ  ಡಿಸಿಎಂ ಡಿಕೆ ಶಿವಕುಮಾರ್ ಅವರು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಬೆಳಗ್ಗೆ ತೆರಳಿ ಸಮಾಲೋಚನೆ ನಡೆಸಿದ್ದಾರೆ.

ಭಾನುವಾರ ತಡರಾತ್ರಿ ಬೆಂಗಳೂರಿಗೆ ಬಂದಿರುವ ವೇಣುಗೋಪಾಲ್ ಅವರು ಬೆಳಗಿನ ಉಪಾಹಾರ ನೆಪದಲ್ಲಿ ಎಐಸಿಸಿ ಅಧ್ಯಕ್ಷರ ಮನೆಗೆ ತೆರಳಿ ರಾಜಕೀಯ ಚರ್ಚೆ ನಡೆಸಿದರು. ಈ ಚರ್ಚೆಯಲ್ಲಿ ರಾಜ್ಯದಲ್ಲಿ ಆಗಿರುವ ಬಿಜೆಪಿ- ಜೆಡಿಎಸ್ ಮೈತ್ರಿಯ ಪರಿಣಾಮಗಳು ಹಾಗೂ ಪಂಚರಾಜ್ಯಗಳ ಚುನಾವಣೆ ಸುತ್ತ ಚರ್ಚೆ ನಡೆದಿದೆ ಎನ್ನಲಾಗಿದೆ.

ರಾಜಕೀಯವಾಗಿ ಈ ಮೂವರೂ ನಾಯಕರು ಕೆಲಹೊತ್ತು ರಹಸ್ಯವಾಗಿ ಮಾತುಕತೆ ನಡೆಸಿರುವುದು ಈಗ ಕುತೂಹಲ ಮೂಡಿಸಿದೆ. ಮೂವರು ನಾಯಕರು ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, “ಯಾರಿಗೆ ಏನು ಉತ್ತರ ಕೊಡಬೇಕೋ ಖಂಡಿತ ಕೊಡುವೆ. ಹೈ ವೋಲ್ಟೇಜ್‌ಗೂ ಕೊಡ್ತೀನಿ, ಲೋ ವೋಲ್ಟೇಜ್‌ಗೂ ಕೊಡ್ತೀನಿ. ನಕಲಿಗಳಿಗೂ ಕೊಡ್ತೀನಿ, ಲೂಟಿಗಳಿಗೂ ಕೊಡ್ತೀನಿ, ಎಲ್ಲರಿಗೂ ಕೊಡ್ತೀನಿ. ಸ್ವಲ್ಪ ಕಾಯಿರಿ” ಎಂದು ಸೂಚ್ಯವಾಗಿ ಹೇಳಿದರು.

ಬಿಜೆಪಿಯವರು ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಬಿಜೆಪಿಯವರು ಪ್ರತಿಭಟನೆ ಮಾಡಲಿ. ಅವರು ಪ್ರತಿಭಟನೆ ಮಾಡಿದರೆ ಮಾತ್ರ ಅವರ ಲೂಟಿ ಜನರಿಗೆ ತಿಳಿಯುವುದು. ಎಲ್ಲ ಬಿಚ್ಚಿಡುತ್ತೇನೆ” ಎಂದು ಹೇಳಿ ವೇಣುಗೋಪಾಲ್ ಜೊತೆ ಮುಂದೆ ಸಾಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...