ಟಿಎಂಸಿ ಕೌನ್ಸಿಲರ್, ಮಮತಾ ಬ್ಯಾನರ್ಜಿ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ

Date:

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಗುರುವಾರ ಬೆಳಗ್ಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೌನ್ಸಿಲರ್ ದುಲಾಲ್ ಸರ್ಕಾರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ “ನನ್ನ ಆಪ್ತ ಸಹಾಯಕನ ಹತ್ಯೆಯಾಗಿದೆ” ಎಂದು ಹೇಳಿದ್ದಾರೆ.

ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಬ್ಬರು ದುಷ್ಕರ್ಮಿಗಳು ಸರ್ಕಾರ್ ಕಚೇರಿಯೊಳಗೆ ನುಗ್ಗಿ ಅನೇಕ ಬಾರಿ ಗುಂಡು ಹಾರಿಸುವುದು ವಿಡಿಯೋದಲ್ಲಿ ಕಾಣಬಹುದು. ಮಾಲ್ಡಾದ ಜಲ್ಜಾಲಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅವಕಾಶ ಸಿಕ್ಕರೆ ‘ಇಂಡಿಯಾ ಒಕ್ಕೂಟ’ವನ್ನು ಮುನ್ನಡೆಸಲು ಸಿದ್ಧ: ಮಮತಾ ಬ್ಯಾನರ್ಜಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಗುಂಡು ಮಾಲ್ಡಾ ಕೌನ್ಸಿಲರ್‌ನ ತಲೆಗೆ ತಗುಲಿದರೆ, ಇನ್ನೆರಡು ದೇಹದ ಇತರೆ ಭಾಗಕ್ಕೆ ತಗುಲಿದೆ. ಕೂಡಲೇ ದುಲಾಲ್ ಸರ್ಕಾರ್ ಅವರನ್ನು ಮಾಲ್ಡಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

ಈ ಹತ್ಯೆ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮಾಲ್ಡಾ ಪೊಲೀಸ್ ವರಿಷ್ಠಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರಿಯನ್ನು ‘ನಿಷ್ಪ್ರಯೋಜಕ’ ಎಂದು ಕರೆದಿದರುವ ಮಮತಾ ಬ್ಯಾನರ್ಜಿ ಅವರು, ದುಲಾಲ್ ಸರ್ಕಾರ್ ಅವರ ಭದ್ರತೆಯನ್ನು ಇತ್ತೀಚೆಗೆ ಹಿಂಪಡೆಯಲಾಗಿದೆ ಎಂದಿದ್ದಾರೆ. ಹಾಗೆಯೇ ಬಾಬ್ಲಾ ಎಂದೂ ಕರೆಯಲ್ಪಡುವ ಸರ್ಕಾರ್ ಸಾವಿಗೆ ಬಂಗಾಳ ಸಿಎಂ ಸಂತಾಪ ಸೂಚಿಸಿದರು.

“ನನ್ನ ನಿಕಟವರ್ತಿ ಮತ್ತು ಅತ್ಯಂತ ಜನಪ್ರಿಯ ನಾಯಕ, ಬಾಬ್ಲಾ ಸರ್ಕಾರ್ ಇಂದು ಕೊಲೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಆರಂಭದಿಂದಲೂ ಅವರು (ಮತ್ತು ಅವರ ಪತ್ನಿ ಚೈತಾಲಿ ಸರ್ಕಾರ್) ಪಕ್ಷಕ್ಕಾಗಿ ಶ್ರಮಿಸಿದರು. ಬಾಬ್ಲಾ ಕೌನ್ಸಿಲರ್ ಆಗಿ ಆಯ್ಕೆಯಾದರು” ಎಂದು ಎಕ್ಸ್‌ನಲ್ಲಿ ಮಮತಾ ಬ್ಯಾನರ್ಜಿ ಪೋಸ್ಟ್ ಮಾಡಿದ್ದಾರೆ.

“ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು. ಕುಟುಂಬಕ್ಕೆ ನನ್ನ ಸಂತಾಪವನ್ನು ಹೇಗೆ ತಿಳಿಸಬೇಕೆಂದು ನನಗೆ ತಿಳಿಯುತ್ತಿಲ್ಲ. ನನಗೆ ಆಘಾತವಾಗಿದೆ ಮತ್ತು ದುಃಖವಾಗಿದೆ. ದೇವರು ಚೈತಾಳಿಗೆ ಈ ನೋವನ್ನು ತಡೆಯುವ ಶಕ್ತಿ ನೀಡಲಿ” ಎಂದು ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇನ್ನು “ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ನಾವು ಅಪರಾಧಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...