ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ – ವಯನಾಡ್‌ಗೆ ತೆರಳಿದ ರಾಹುಲ್‌ ಗಾಂಧಿ; ನ್ಯಾಯ್ ಯಾತ್ರೆಗೆ ಬ್ರೇಕ್

Date:

ಕೇರಳದ ವಯನಾಡ್‌ನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ರಾಹುಲ್‌ ಗಾಂಧಿ ತಾವು ಪ್ರತಿನಿಧಿಸುವ ವಯನಾಡ್‌ ಕ್ಷೇತ್ರಕ್ಕೆ ತೆರಳಿದ್ದಾರೆ. ಸದ್ಯ, ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯುತ್ತಿದ್ದ ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಇಂದು ಸ್ಥಗಿತಗೊಂಡಿದ್ದು, ಭಾನುವಾರ ಮಧ್ಯಾಹ್ನ ಪ್ರಯಾಗರಾಜ್‌ನಿಂದ ಪುನಾರರಂಭವಾಗಲಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಶನಿವಾರ ಮೃತಪಟ್ಟಿದ್ದಾರೆ. ರೈತನ ಸಾವಿನ ಸುದ್ದಿ ತಿಳಿದ ರಾಹುಲ್‌ ಗಾಂಧಿ, ವಯನಾಡ್‌ಗೆ ತೆರಳಿದ್ದಾರೆ.

ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿಯು ಅರಣ್ಯ ಇಲಾಖೆಯ ಪರಿಸರ ಪ್ರವಾಸೋದ್ಯಮ ಮಾರ್ಗದರ್ಶಿಯಾಗಿದ್ದರು. ಅವರು ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಕುರುವ ದ್ವೀಪದಲ್ಲಿ ನೆಲೆಸಿದ್ದರು ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ಗಾಂಧಿ ವಯನಾಡ್‌ಗೆ ತೆರಳಿರುವ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ವಯನಾಡ್‌ನಲ್ಲಿ ರಾಹುಲ್ ಗಾಂಧಿಯವರ ತುರ್ತು ಉಪಸ್ಥಿತಿಯ ಅಗತ್ಯವಿದೆ. ಹೀಗಾಗಿ, ಅವರು ಶನಿವಾ ಸಂಜೆ ವಾರಣಾಸಿಯಿಂದ ವಯನಾಡ್‌ಗೆ ಹೊರಟಿದ್ದಾರೆ. ಭಾರತ್ ಜೋಡೋ ನ್ಯಾಯ್‌ ಯಾತ್ರೆಯು ಭಾನುವಾರ ಮಧ್ಯಾಹ್ನ 3 ಗಂಟೆಗೆ ಪ್ರಯಾಗರಾಜ್‌ನಲ್ಲಿ ಪುನರಾರಂಭವಾಗಲಿದೆ” ಎಂದು ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...