ಬಂದೂಕು, ಚಾಕುವಿನೊಂದಿಗೆ ಮಮತಾ ಬ್ಯಾನರ್ಜಿ ನಿವಾಸದ ಬಳಿ ಸಾಗುತ್ತಿದ್ದ ವ್ಯಕ್ತಿಯ ಬಂಧನ

Date:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸಕ್ಕೆ ತನ್ನ ಕಾರಿನಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಕೋಲ್ಕತ್ತಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಆರೋಪಿಯನ್ನು ಶೇಖ್ ನೂರ್ ಆಲಂ ಎಂದು ಗುರುತಿಸಲಾಗಿದೆ. ಆತನ ಬಳಿ ಬಂದೂಕು, ಚಾಕು ಮತ್ತು ಕೆಲವು ಅಕ್ರಮ ವಸ್ತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿಯ ನಿವಾಸಕ್ಕೆ ಪ್ರವೇಶಿಸಲು ಬಳಸಿದ ಆರೋಪಿಯ ಕಾರಿನ ಮೇಲೆ ‘ಪೊಲೀಸ್’ ಸ್ಟಿಕ್ಕರ್ ಇತ್ತು ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹೇಳಿದ್ದಾರೆ. ಘಟನೆ ನಡೆದಾಗ ಮಮತಾ ಬ್ಯಾನರ್ಜಿ ಅವರ ಮನೆಯಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ವ್ಯಕ್ತಿಯ ಕಾರಿನಲ್ಲಿ ಬಂದೂಕು, ಒಂದು ಚಾಕು, ಗಾಂಜಾ ಮತ್ತು ಬಿಎಸ್‌ಎಫ್‌ನಂತಹ ವಿವಿಧ ಏಜೆನ್ಸಿಗಳ ಹಲವಾರು ಗುರುತಿನ ಚೀಟಿಗಳನ್ನು ಹೊಂದಿದ್ದನು. ಆತ ಸಿಎಂ ಅವರನ್ನು ಭೇಟಿಯಾಗಲು ಬಯಸಿದ್ದರು. ಆರೋಪಿಯು ಹರೀಶ್ ಚಟರ್ಜಿ ಸ್ಟ್ರೀಟ್‌ಗೆ ಪ್ರವೇಶಿಸಲು ಪ್ರಯತ್ನಿಸಿದಾಗ ನಮ್ಮ ಅಧಿಕಾರಿಗಳು ಅವರನ್ನು ತಡೆದರು. ಮುಖ್ಯಮಂತ್ರಿಯವರ ಝಡ್-ಕೆಟಗರಿ ಭದ್ರತೆಯನ್ನು ಪರಿಗಣಿಸಿದರೆ ಇದೊಂದು ಗಂಭೀರವಾದ ವಿಷಯವಾಗಿದೆ. ಆರೋಪಿಯ ಉದ್ದೇಶವೇನೆಂಬುದನ್ನು ನಾವು ಪತ್ತೆ ಹಚ್ಚುತ್ತೇವೆ ಎಂದು ಆಯುಕ್ತರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇಶವನ್ನು ರಕ್ಷಿಸಿದರೂ ಹೆಂಡತಿ, ಗ್ರಾಮವನ್ನು ಕಾಪಾಡಲಾಗಲಿಲ್ಲ: ಬೆತ್ತಲಾದ ಮಹಿಳೆಯ ಪತಿಯ ದುಃಖ

“ಆರೋಪಿಯಿಂದ ವಿವಿಧ ಏಜೆನ್ಸಿಗಳಿಗೆ ಸೇರಿದ ಹಲವು ಗುರುತಿನ ಚೀಟಿಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾನು ಆನಂದಪುರದವನು ಎಂದು ಹೇಳುತ್ತಿದ್ದಾನೆ, ನಂತರ ನಾನು ಪಶ್ಚಿಮ ಮೇದಿನಿಪುರದವನು ಎಂದು ಹೇಳಿಕೊಳ್ಳುತ್ತಿದ್ದಾನೆ. ನಾವು ಸತ್ಯ ಏನೆಂದು ಪರಿಶೀಲಿಸುತ್ತಿದ್ದೇವೆ” ಎಂದು ಆಯುಕ್ತರು ಹೇಳಿದರು.

ವ್ಯಕ್ತಿ ಪ್ರಸ್ತುತ ಪೊಲೀಸ್ ವಶದಲ್ಲಿದ್ದು, ಕೋಲ್ಕತ್ತಾ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ವಿಶೇಷ ಶಾಖೆ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಕಾಳಿಘಾಟ್ ಪೊಲೀಸ್ ಠಾಣೆಯಲ್ಲಿ ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಇನ್ನೊಬ್ಬ ಅಧಿಕಾರಿ ಮಾಹಿತಿ ನೀಡಿದ್ದಾರೆ. ಅವರ ಕಪ್ಪು ಹ್ಯಾಚ್‌ಬ್ಯಾಕ್ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಮುಖ್ಯಮಂತ್ರಿಯವರು ತಮ್ಮ ಕಾಲಿಘಾಟ್ ನಿವಾಸದಿಂದ ಸೆಂಟ್ರಲ್ ಕೋಲ್ಕತ್ತಾದ ‘ಹುತಾತ್ಮರ ದಿನಾಚರಣೆ’ ರ್‍ಯಾಲಿ ಸ್ಥಳಕ್ಕೆ ತೆರಳುವ ಕೆಲವು ಗಂಟೆಗಳ ಮೊದಲು ಈ ಘಟನೆ ನಡೆದಿದೆ.

ಬಿಜೆಪಿಯ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಬ್ಯಾನರ್ಜಿಯ ಭದ್ರತಾ ವ್ಯವಸ್ಥೆಗಳನ್ನು ಪ್ರಶ್ನಿಸಿದ್ದಾರೆ ಮತ್ತು ಘಟನೆಗೆ ಪ್ರತಿಕ್ರಿಯೆಯಾಗಿ ಕಾಳಿಘಾಟ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್ ಮತ್ತು ನಗರ ಪೊಲೀಸ್ ಕಮಿಷನರ್ ಗೋಯಲ್ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...