ಮಧ್ಯಪ್ರದೇಶ: ಆದಿವಾಸಿ ಯುವಕನ ಮೇಲೆ ಬಿಜೆಪಿ ಶಾಸಕನ ಬೆಂಬಲಿಗನಿಂದ ಮೂತ್ರ ವಿಸರ್ಜನೆ

Date:

ಬಿಜೆಪಿ ಶಾಸಕನ ಬೆಂಬಲಿಗನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶ ಸಿಧಿ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯಪ್ರದೇಶ ರಾಜ್ಯದಲ್ಲಿ ನಡೆದಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯಾಗಿದ್ದು, ಅದರ ವಿಡಿಯೋ ವೈರಲ್ ಆಗಿದೆ. ಆರೋಪಿ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಒತ್ತಾಯಿಸಿವೆ.

ಆರೋಪಿಯನ್ನು ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಸಿಸಿಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಆ ವೀಡಿಯೊವನ್ನು ಹಂಚಿಕೊಂಡಿದ್ದು, “ಈ ಅಮಾನವೀಯ ವಿಡಿಯೋ ಬಿಜೆಪಿ ಶಾಸಕ ಕೇದಾರ್ ಶುಕ್ಲಾ ಅವರ ಪ್ರತಿನಿಧಿ ಪ್ರವೇಶ್ ಶುಕ್ಲಾ ಅವರದ್ದು. ಈ ವಿಡಿಯೋ ನೋಡಿದ ನಂತರ ಆಕ್ರೋಶವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಅವರೇ, ನಿಮಗೆ ಸ್ವಲ್ಪವಾದರೂ ನಾಚಿಕೆ ಮತ್ತು ಮಾನವೀಯತೆ ಉಳಿದಿದ್ದರೆ, ಬಡವರ ಮೇಲೆ ಬಳಸುವ ಬುಲ್ಡೋಜರ್ ಅನ್ನು ಈ ಬಿಜೆಪಿ ವ್ಯಕ್ತಿಯ ಮೇಲೆ ಪ್ರಯೋಗಿಸಿ”ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ಉಪನಾಮ ಪ್ರಕರಣ: ರಾಹುಲ್‌ ಗಾಂಧಿ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಜಾರ್ಖಂಡ್ ಹೈಕೋರ್ಟ್

ಮಧ್ಯಪ್ರದೇಶ ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಕೂಡ ಘಟನೆಯನ್ನು ಟ್ವಿಟರ್‌ನಲ್ಲಿ ಖಂಡಿಸಿದ್ದು, “ಆದಿವಾಸಿಗಳ ಹಿತಾಸಕ್ತಿಗಳ ಬಗ್ಗೆ ಸುಳ್ಳು ಮಾತನಾಡುವ ಬಿಜೆಪಿ ನಾಯಕರು ಬುಡಕಟ್ಟು ಜನಾಂಗದ ಬಡವರ ಮೇಲೆ ಈ ರೀತಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಟ್ಯಾಗ್ ಮಾಡಿರುವ ಅವರು “ಇದು ನಿಮ್ಮ ಬುಡಕಟ್ಟು ಪ್ರೀತಿಯೇ? ಇದನ್ನು ಜಂಗಲ್ ರಾಜ್ ಎನ್ನದೇ ಮತ್ತೆ ಏನೆಂದು ಕರೆಯಬೇಕು? ಈ ದುಷ್ಕೃತ್ಯ ಎಸಗಿದ ಬಿಜೆಪಿ ನಾಯಕನನ್ನು ಏಕೆ ಬಂಧಿಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಆರೋಪಿ ಪ್ರವೇಶ್ ಶುಕ್ಲಾ ಹಿರಿಯ ಬಿಜೆಪಿ ನಾಯಕರೊಂದಿಗೆ ತೆಗೆಸಿಕೊಂಡಿರುವ ಫೋಟೊಗಳು ಎಲ್ಲೆಡೆ ವೈರಲ್‌ ಆಗಿವೆ.

ಯಾವ ಕಾರಣಕ್ಕಾಗಿ ಈ ಅಮಾನುಷ ಕೃತ್ಯ ಎಸಗಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೂಡಲೇ ಆರೋಪಿಯನ್ನು ಬಂಧಸಬೇಕೆಂದು ನೆಟ್ಟಿಗರು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...