ಮಂಡ್ಯ | ಕ್ಷೇತ್ರ ಬಿಟ್ಟುಕೊಡುವ ಮಾತೇ ಇಲ್ಲ; ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಸುಮಲತಾ ಅಪಸ್ವರ

Date:

ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ಕೋಮುವಾದಿ ಪಕ್ಷದೊಂದಿಗೆ ಜೆಡಿಎಸ್‌ ಮೈತ್ರಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಹಲವಾರು ಜೆಡಿಎಸ್ ಮುಖಂಡರು ಪಕ್ಷ ತೊರೆದಿದ್ದಾರೆ. ಕೆಲ ಜೆಡಿಎಸ್ ಶಾಸಕರೂ ಕೂಡ ಮೈತ್ರಿಯನ್ನು ವಿರೋಧಿಸಿದ್ದಾರೆ. ಈ ನಡುವೆ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸಂಸದೆ ಸುಮಲತಾ ಅಂಬರೀಶ್ ಕೂಡ ಮೈತ್ರಿಯನ್ನು ವಿರೋಧಿಸಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ. ಯಾರಿಗೂ ಬಿಟ್ಟುಕೊಡುವುದೂ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ನಡುವೆ ಕ್ಷೇತ್ರ ಹಂಚಿಕೆ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಬಿಜೆಪಿ ಎದುರು ಜೆಡಿಎಸ್ ನಾಯಕರು ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ, ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜೆಡಿಎಸ್‌ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಗೆಲುವು ಸಾಧಿಸಿದ್ದರು. ಆ ಸಮಯದಲ್ಲಿ ಸುಮಲತಾ ವಿರುದ್ಧ ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನ ಹಲವು ನಾಯಕರು ನಿಂದನಾತ್ಮಕವಾಗಿ ಮಾತನಾಡಿದ್ದರು. ಇದೀಗ, ಮಂಡ್ಯ ಕ್ಷೇತ್ರಕ್ಕಾಗಿ ಜೆಡಿಎಸ್‌ ಪಟ್ಟು ಹಿಡಿದಿದೆ. ಸುಮಲತಾ ಅವರು ಯಾವುದೇ ಕಾರಣಕ್ಕೂ ಕ್ಷೇತ್ರ ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಮಲತಾ, “ನಾನು ಮಂಡ್ಯದ ಸೊಸೆ. ಯಾವತ್ತೂ ನಾನು ಮಂಡ್ಯ ಬಿಡುವುದಿಲ್ಲ. ರಾಜಕಾರಣ ಬಿಟ್ಟರೂ ಸ್ವಾಭಿಮಾನ, ಸಿದ್ದಾಂತ ಬಿಡಲ್ಲ. ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜಿಲ್ಲೆಯ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ನಾನು ಮಂಡ್ಯ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ಆದರೆ, ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಹೀಗಾಗಿ, ನಾನು ದುಡುಕಿನ ನಿರ್ಧಾರ ಮಾಡುವುದಿಲ್ಲ. ಮಂಡ್ಯ ಜನರು ನನ್ನೊಂದಿಗಿದ್ದಾರೆ. ಕಳೆದ ಚುನಾವಣೆಯಲ್ಲೇ ಬೆಂಗಳೂರು ಉತ್ತರ ಕ್ಷೇತ್ರದ ಆಫರ್ ಬಂದಿತ್ತು. ಅದನ್ನು ನಾನು ತಿರಸ್ಕರಿಸಿದ್ದೆ. ನನಗೆ ಮಂಡ್ಯದ ಜನರು ಸ್ಥಾನಮಾನ ಕೊಟ್ಟಿದ್ದಾರೆ. ನಾನು ಮಂಡ್ಯವನ್ನು ಬಿಟ್ಟು ಹೋಗುವುದಿಲ್ಲ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...