ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ: ರೈತರಿಗೆ ಭರವಸೆ ನೀಡಿದ ಸಚಿವ ಚಲುವರಾಯಸ್ವಾಮಿ

Date:

ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೆಆರ್‌ಎಸ್ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಟ್ರಯಲ್ ಬ್ಲಾಸ್ಟ್‌ಗೆ ಸಂಬಂಧಿಸಿ ರೈತ ನಾಯಕರೊಂದಿಗೆ ಸಂವಾದ ನಡೆಸಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ‘ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ’ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇಂದು(ಶನಿವಾರ) ಮಂಡ್ಯ ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಸಂವಾದ ನಡೆಸಿದ ಅವರು, “ಹೈಕೋರ್ಟಿನಲ್ಲಿ ಮುಂದಿನ ಆದೇಶ ಬರುವವರೆಗೂ ಟ್ರಯಲ್ ಬ್ಲಾಸ್ಟ್ ಸ್ಥಗಿತಗೊಳಿಸುತ್ತೇವೆ. ಹೈಕೋರ್ಟಿನ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ” ಎಂದು ಹೇಳಿದರು.

“ಯಾವುದೇ ಟ್ರಯಲ್ ಬ್ಲಾಸ್ಟ್ ಬೇಡ. ಕೆಆರ್‌ಎಸ್ ಉಳಿವಿಗಾಗಿ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಸುಗ್ರೀವಾಜ್ಞೆಯನ್ನು ತನ್ನಿ” ಎಂದು ರೈತ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರಯಲ್ ಬ್ಲಾಸ್ಟ್ ಸಭೆ

ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಕೊನೆಯಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, “ಜುಲೈ 15ಕ್ಕೆ ಹೈಕೋರ್ಟಿನಲ್ಲಿ ವಿಚಾರಣೆಗೆ ಬರಲಿದೆ. ಮುಖ್ಯಮಂತ್ರಿಗಳು, ಸರಕಾರಿ ವಕೀಲರು, ಅಧಿಕಾರಿಗಳೊಂದಿಗೆ ನಿಮ್ಮೆಲ್ಲರ ಅಭಿಪ್ರಾಯಗಳನ್ನು ತಿಳಿಸುತ್ತೇನೆ. ಕೆಆರ್‌ಎಸ್ ಉಳಿವಿಗಾಗಿ ವಾದ ಮಂಡಿಸಲಾಗುವುದು. ನ್ಯಾಯಾಲಯದ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ” ಎಂದು ತಿಳಿಸಿದರು.

ಮಂಡ್ಯ ಜಿಲ್ಲಾಡಳಿತವು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂಲಕ ಪರೀಕ್ಷಾರ್ಥ ಬ್ಲಾಸ್ಟ್‌ (ಟ್ರಯಲ್ ಬ್ಲಾಸ್ಟ್) ನಡೆಸುವ ಸಲುವಾಗಿ ಜುಲೈ 3, 4, ಮತ್ತು 5ರಂದು ಕುಳಿ ಕೊರೆಯುವ ಕಾರ್ಯ ನಡೆಸಿದೆ. ಜೊತೆಗೆ ಜು. 6 ಮತ್ತು 7ರಂದು ಪರೀಕ್ಷಾರ್ಥ ಸಿಡಿತ ನಡೆಸಲು ಸಿದ್ಧತೆ ನಡೆಸಿತ್ತು.

ಇದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿದ ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಧರಣಿ ನಡೆಸಿದ್ದರು. ಈ ವೇಳೆ ರೈತರನ್ನು ಭೇಟಿ ಮಾಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು, ಜು.6 (ಶನಿವಾರ) ರಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮುಂದಾಳತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ರೈತರನ್ನು ಆಹ್ವಾನಿಸಿದ್ದರು. ಆ ಬಳಿಕ ಧರಣಿ ಕೈಬಿಟ್ಟು, ಸಭೆಯಲ್ಲಿ ರೈತರು ಭಾಗವಹಿಸಿದ್ದರು.

ಈ ಸಭೆಯಲ್ಲಿ ಶಾಸಕರಾದ ಬಾಬು ಬಂಡಿಸಿದ್ದೇಗೌಡ, ರವಿ ಗಣಿಗ, ಜಿಲ್ಲಾಧಿಕಾರಿ ಕುಮಾರ್, ರೈತ ಮುಖಂಡರಾದ ಎ ಎಸ್ ಕೆಂಪೂಗೌಡ, ಲಿಂಗಪ್ಪಾಜಿ, ಸುನಂದಮ್ಮ, ಮಹಿಳಾ ಮುನ್ನಡೆಯ ಪೂರ್ಣಿಮಾ, ಪ್ರಸನ್ನಗೌಡ, ಕೆ ಆರ್ ರವೀಂದ್ರ, ಗೆಜ್ಜಲಗೆರೆ ಶಂಕರಯ್ಯ ಇನ್ನೂ ಮುಂತಾದ ಮುಖಂಡರು ಭಾಗವಹಿಸಿದ್ದರು.

ಸಭೆ 4

ಟ್ರಯಲ್ ಬ್ಲಾಸ್ಟ್ ಸಭೆ 1

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...