ಮಂಗಳೂರು | ಬಿಜೆಪಿ ಕಾರ್ಯಕರ್ತರಿಗೆ ದುಷ್ಕರ್ಮಿಗಳಿಂದ ಚಾಕು ಇರಿತ, ಮೂವರು ವಶಕ್ಕೆ

Date:

ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಾನುವಾರ ರಾತ್ರಿ ಬಿಜೆಪಿ ವಿಜಯೋತ್ಸವ ವೇಳೆ ದುಷ್ಕರ್ಮಿಗಳ ಗುಂಪೊಂದು ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ್ದರು. ಈ ಘಟನೆ ಸಂಬಂಧ ಕೊಣಾಜೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದ್ದಾರೆ.

ಹರೀಶ್(41), ನಂದಕುಮಾರ್(24)ಗೆ ಚಾಕು ಇರಿಯಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಕೃಷ್ಣ ಕುಮಾರ್ ಎಂಬಾತನ ಮೇಲೆ ಹಲ್ಲೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರೇಂದ್ರ ಮೋದಿ ಸತತ ಮೂರನೇ ಸಲ ದೇಶದ ಪ್ರಧಾನಿಯಾಗಿ ಪದಗ್ರಹಣದ ನಡೆಸಿದ್ದಕ್ಕೆ ಬೋಳಿಯಾರ್ ನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆಯನ್ನು ನಡೆಸಿತ್ತು. ಈ ವೇಳೆ ಅಲ್ಲಿನ ಮಸೀದಿ ಬಳಿ ಕಾರ್ಯಕರ್ತರು ಕೆಲಹೊತ್ತು ಘೋಷಣೆ ಕೂಗಿದ್ದರು. ಬಳಿಕ ಮುಸ್ಲಿಂ ಯುವಕರ ತಂಡವು ಬೋಳಿಯಾರ್ ಸಮಾಧಾನ್ ಬಾರ್ ಬಳಿ ಮೂವರು ಕಾರ್ಯಕರ್ತರನ್ನು ಅಡ್ಡಗಟ್ಟಿತ್ತು. ಇಬ್ಬರಿಗೆ ಚೂರಿಯಿಂದ ಇರಿದು, ಒಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಇರಿತಕ್ಕೊಳಗಾದ ಹರೀಶ್ ಹಾಗೂ ನಂದ ಕುಮಾರ ಅವರನ್ನು ಕೂಡಲೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸಿಸಿ ಟಿವಿ ಕ್ಯಾಮೆರಾದಲ್ಲಿ‌ ದಾಖಲಾದ‌ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದಾರೆ.

ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಶಾಂತಿ-ನೆಮ್ಮದಿ-ಸಮೃದ್ಧಿಗೆ ಸುದ್ದಿಯಾಗುತ್ತಿದ್ದ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ದುರಾಡಳಿತದಲ್ಲಿ ಅರಾಜಕತೆ-ಅತ್ಯಾಚಾರ-ಕೊಲೆ-ಸುಲಿಗೆಗಳಿಗೆ ಸುದ್ದಿಯಾಗುತ್ತಿರುವುದು ದುರಂತ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದನ್ನು ಸಂಭ್ರಮಿಸಿದರೆ, ಅದನ್ನೂ ಸಹಿಸದ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿದ್ದಾರೆ ಎಂದು ಬಿಜೆಪಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಆರೋಪಿಸಿದೆ.

“ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಸ್ವಯಂಘೋಷಿತ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಹಿಂದೂಗಳಿಗೆ ಶಾಂತಿಗಿಂತ ಅಶಾಂತಿ ಒಲಿದಿದ್ದೇ ಹೆಚ್ಚು. ದ್ವೇಷವನ್ನೇ ಉಸಿರಾಗಿಸಿಕೊಂಡಿರುವ ನಿಮ್ಮ ಅಮಾಯಕ ಬ್ರದರ್ಸ್‌ಗಳ ವಿರುದ್ಧ ಕ್ರಮ ಯಾವಾಗ ಎಂಬುದನ್ನು ತಿಳಿಸಿ” ಎಂದು ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...