ಮಂಗಳೂರು ಘಟನೆ | ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್: ಆರ್.ಅಶೋಕ್ ಆರೋಪ

Date:

ಮಂಗಳೂರಿನ ಜೆರೋಸಾ ಶಾಲೆಯಲ್ಲಿನ ಘಟನೆಗೆ ಸಂಬಂಧಿಸಿ ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಹೊತ್ತಿರುವ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭಾ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು, ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ, ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ, ಬಳೆ ತೊಡುವುದರಲ್ಲಿ ಪವಿತ್ರತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು, ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ” ಎಂದು ಅಶೋಕ್ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೃಹ ಸಚಿವರು ಹೇಳುವಂತೆ, ದೂರು ಬಂದಿರುವುದರಿಂದ ಎಫ್ಐಆರ್ ದಾಖಲಾಗಿದೆ. ಇದಕ್ಕೂ ಎರಡು-ಮೂರು ದಿನಗಳ ಮುನ್ನವೇ ಪೋಷಕರು ದೂರು ನೀಡಿದ್ದರೂ ಅದು ದಾಖಲಾಗಿಲ್ಲ. ಆ ದೂರಿನ ಬಗ್ಗೆ ಪೊಲೀಸರು ಕ್ಯಾರೇ ಎನ್ನಲಿಲ್ಲ” ಎಂದು ದೂರಿದ್ದಾರೆ.

“ಕೋಮುಗಲಭೆ, ಪ್ರಧಾನಿಯವರನ್ನು ಹೀಯಾಳಿಸಿರುವುದಕ್ಕೆ ಯಾವುದೇ ಸೆಕ್ಷನ್ ದಾಖಲಿಸಿಲ್ಲ. ಆ ದೂರು ಬಾಕಿ ಇಟ್ಟು, ಒತ್ತಡದಿಂದ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ” ಎಂದು ಆರ್ ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಹಿಂದು ಭಾವನೆಗೆ ಶಿಕ್ಷಕಿ ಧಕ್ಕೆ ತಂದಿಲ್ಲ; ಬಿಜೆಪಿ ಶಾಸಕನ ಒತ್ತಡದಿಂದ ಅಮಾನತು: ಜೆರೋಸಾ ಶಾಲೆ ಮುಖ್ಯಶಿಕ್ಷಕಿ

“ಕರ್ನಾಟಕವು ಈಗ ಪೊಲೀಸರ ಗೂಂಡಾಗಿರಿ ಹಾಗೂ ದೌರ್ಜನ್ಯದ ರಾಜ್ಯವಾಗಿದೆ. ನಾನು ಹುಬ್ಬಳ್ಳಿಗೆ ಹೋದಾಗಲೂ ಅವಾಚ್ಯ ಪದ ಬಳಸಿದ್ದೇನೆಂದು ಪ್ರಕರಣ ದಾಖಲಾಗಿದೆ. ಹಿಂದೂಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸದನದಲ್ಲಿ ಖಂಡಿಸಲಾಗಿದೆ. ಕೂಡಲೇ ಸಿಸ್ಟರ್ ಪ್ರಭಾ ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...