ಮಧ್ಯಂತರ ಜಾಮೀನು ಮುಗಿದ ನಂತರ ತಿಹಾರ್ ಜೈಲಿಗೆ ಮರಳಿದ ಅರವಿಂದ್ ಕೇಜ್ರಿವಾಲ್

Date:

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ನೀಡಿದ್ದ 21 ದಿನಗಳ ಮಧ್ಯಂತರ ಜಾಮೀನು ಅಂತ್ಯಗೊಂಡ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂನ್ 1ರಂದು ತಿಹಾರ್ ಜೈಲಿಗೆ ಮರಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಮೇ 10ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಕೊನೆಯ ಹಂತದ ಮತದಾನದ ದಿನ ಅಂದರೆ, ಜೂನ್ 1ರಂದು ಅವರ ಜಾಮೀನು ಅವಧಿ ಮುಗಿದಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮೇ 10 ರಂದು ಮಧ್ಯಂತರ ಜಾಮೀನು ನೀಡಿ, ಜೂನ್ 2ರಂದು ಶರಣಾಗುವಂತೆ ಸೂಚಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಮತ್ತೆ ಜೈಲಿಗೆ ಹೋಗುತ್ತಿರುವುದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಅಲ್ಲ. ಆದರೆ, ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ ಕಾರಣ ಹೋಗಿದ್ದೇನೆ. ಈ ಬಾರಿ ಜೈಲಿಗೆ ಹೋಗಿ ಯಾವಾಗ ವಾಪಸ್ ಬರುತ್ತೇನೋ ಗೊತ್ತಿಲ್ಲ. ಅವರು ನನ್ನೊಂದಿಗೆ ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ. ಆದರೆ ನಾನು ಹೆದರುವುದಿಲ್ಲ. ಅವರು ಏನು ಬೇಕಾದರೂ ಮಾಡಬಹುದು. ನನ್ನ ಪ್ರತಿ ಹನಿ ರಕ್ತವೂ ದೇಶಕ್ಕಾಗಿ” ಎಂದು ಜೈಲಿಗೆ ತೆರಳುವ ಮೊದಲು ಕೇಜ್ರಿವಾಲ್ ಹೇಳಿದರು.

“ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಜಾಮೀನು ನೀಡಿತ್ತು. ಅದಕ್ಕಾಗಿ ನಾನು ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇಂದು ಮತ್ತೆ ತಿಹಾರ್ ಜೈಲಿಗೆ ಹೋಗುತ್ತಿದ್ದೇನೆ. ಈ 21 ದಿನಗಳಲ್ಲಿ ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ನಾನು ಕೇವಲ ಎಎಪಿ ಪರ ಪ್ರಚಾರ ಮಾಡಿಲ್ಲ. ನಾನಾ ಪಕ್ಷಗಳ ಪರ ಪ್ರಚಾರ ಮಾಡಿದ್ದೇನೆ. ನಮಗೆ ದೇಶ ಮುಖ್ಯ. ಪ್ರಕರಣದಲ್ಲಿ ನನ್ನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದು ತಿಳಿಸಿದರು.

ರಾಜ್ ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಕೇಜ್ರಿವಾಲ್ ನಮನ ಸಲ್ಲಿಸಿದರು. ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೂ ಭೇಟಿ ನೀಡಿದರು.

ಯಾವುದೇ ಪುರಾವೆ ಇಲ್ಲದೇ ಯಾರನ್ನು ಬೇಕಾದರೂ ಜೈಲಿಗೆ ಹಾಕಬಹುದು ಎಂದು ಬಿಜೆಪಿಯವರು ಕಾನೂನು ತಿದ್ದುಪಡಿ ಮಾಡಿದ್ದರಿಂದ ನಮ್ಮ ನಾಯಕರು ಜೈಲು ಪಾಲಾಗಿದ್ದಾರೆ. ನಮಗೆ ಜೈಲಿಗೆ ಹೋಗಲು ಭಯವಿಲ್ಲ. ಸುಪ್ರೀಂ ಕೋರ್ಟ್‌ನಿಂದ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ.ನ್ಯಾಯಾಲಯ ಮತ್ತು ಸಂವಿಧಾನವನ್ನು ಗೌರವಿಸಿ, ಜಾಮೀನು ಅವಧಿ ಮುಗಿದ ನಂತರ ಅರವಿಂದ್ ಕೇಜ್ರಿವಾಲ್ ಅವರು ಶರಣಾಗಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭವಾನಿ ರೇವಣ್ಣ ಬಂಧನಕ್ಕೆ ಪೊಲೀಸರ ಹುಡುಕಾಟ : ಗೃಹ ಸಚಿವ ಪರಮೇಶ್ವರ್

ಕೇಜ್ರೀವಾಲ್ ಅವರ ಮಧ್ಯಂತರ ಜಾಮೀನಿನ ಆದೇಶವನ್ನು ಕಾಯ್ದಿರಿಸಲಾಗಿದೆ. ಕೇಜ್ರಿವಾಲ್ ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ದೆಹಲಿ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಶನಿವಾರ ಮಧ್ಯಂತರ ಜಾಮೀನು ವಾದ ನಡೆದಿದ್ದು, ನ್ಯಾಯಾಲಯವು ಜೂನ್ 5ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

ಇನ್ನು ಜಾರಿ ನಿರ್ದೇಶನಾಲಯವು(ಇ.ಡಿ)  ಆರೋಗ್ಯದ ಆಧಾರದ ಮೇಲೆ ಜಾಮೀನು ಅರ್ಜಿಯನ್ನು ವಿರೋಧಿಸಿದೆ. ಕೇಜ್ರಿವಾಲ್ ಅವರು ಪರೀಕ್ಷೆಯ ಸ್ವರೂಪವನ್ನು ಹತ್ತಿಕ್ಕಿದ್ದಾರೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ನಾನಾ ರಾಜ್ಯಗಳಲ್ಲಿ ಪ್ರಚಾರ ನಡೆಸಿದ್ದಾರೆ ಎಂದು ಇಡಿ ವಾದಿಸಿದೆ. ಆದಾಗ್ಯೂ, ಶರಣಾಗತಿಯ ಸಮಯದಲ್ಲಿ ಅವರು ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿದ್ದಾರೆ. ಕೇಜ್ರಿವಾಲ್ ಪರೀಕ್ಷೆಗಳನ್ನು ವಿಳಂಬಗೊಳಿಸುವ ಮೂಲಕ ನ್ಯಾಯಾಲಯವನ್ನು ವಂಚಿಸಲು ಬಯಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...