ನಾಸಿಕ್ ಅಪಾರ್ಟ್‌ಮೆಂಟ್ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿರುವ ಮಹಾರಾಷ್ಟ್ರ ಕ್ರೀಡಾ ಸಚಿವ ಮಾಣಿಕ್ರಾವ್ ಕೊಕಾಟೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
1995ರಲ್ಲಿ ನಡೆದಿದ್ದ ಹಗರಣವಿದು. ಪ್ರಕರಣದಲ್ಲಿ ಕೋಕಾಟೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಮಾತ್ರವಲ್ಲದೆ, ನಾಸಿಕ್ ಸೆಷನ್ಸ್ ನ್ಯಾಯಾಲಯವು ಸಚಿವ ಮಾಣಿಕ್ರಾವ್ ಕೊಕಾಟೆ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಈ ಬೆನ್ನಲ್ಲೇ ಕೊಕಾಟೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಅವರ ಬಂಧನವಾಗಬಹುದು.
ಸದ್ಯ ನಾಸಿಕ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನೀಡಿದ ಆದೇಶಗಳ ವಿರುದ್ಧ ಕೊಕಾಟೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಶುಕ್ರವಾರ ತೀರ್ಪು ನೀಡಲಿದೆ. ಹೈಕೋರ್ಟ್ ಆದೇಶದ ನಂತರ ಅಧಿಕಾರಿಗಳು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.




