ಮಣಿಪುರ ವಿಧಾನಸಭೆ ಅಧಿವೇಶನ ಪ್ರಾರಂಭ; ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು

Date:

ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ ನೀಡಬೇಕು ಎಂದು ಶಾಸಕರು ಹಲವು ದಿನಗಳಿಂದ ಆಗ್ರಹಿಸುತ್ತಿದ್ದಾರೆ.

ಕಳೆದ ವರ್ಷ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದೆ. ಇದಾದ ಬಳಿಕ ಮೂರನೇ ಬಾರಿಗೆ ಅಧಿವೇಶನ ನಡೆಯುತ್ತಿದ್ದು ಆಗಸ್ಟ್ 12ರವರೆಗೆ ಕಲಾಪ ನಡೆಯಲಿದೆ. ಕಳೆದ ಅಧಿವೇಶನದಲ್ಲಿಯೂ ತಮ್ಮ ಭದ್ರತೆಯ ಕಾರಣಕ್ಕೆ ಅಧಿವೇಶನಕ್ಕೆ ಹಾಜರಾಗಿಲ್ಲ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಅಧಿವೇಶನಕ್ಕೆ ಹಾಜರಾಗುವಂತೆ ಮನವಿ ಮಾಡಿದರೂ ಕೂಡಾ ಇಬ್ಬರು ಕುಕಿ ಪೀಪಲ್ಸ್ ಅಲಯನ್ಸ್‌ಗೆ ಸೇರಿದ ಸಚಿವರು ಮತ್ತು ಒಬ್ಬ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿರುವ ಶಾಸಕ, ಏಳು ಬಿಜೆಪಿ ಶಾಸಕರು ಅಧಿವೇಶನಕ್ಕೆ ಹಾಜರಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಅವರೂ ಕೂಡಾ 10 ಕುಕಿ ಶಾಸಕರು ವಿಧಾನಸಭೆ ಅಧಿವೇಶನಕ್ಕೆ ಹಾಜರಾಗುವಂತೆ ತಿಳಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ಮತ್ತು ಸಹಜ ಸ್ಥಿತಿಗೆ ಮರುಳಲು ನಮಗೆ ಇದು ಉತ್ತಮ ದಾರಿಯಾಗಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳುವ 10 ಕುಕಿ ಶಾಸಕರಿಗೆ ಭದ್ರತೆಯನ್ನು ಕೇಂದ್ರ ಗೃಹ ಸಚಿವಾಲಯದ ಮೂಲಕ ಪಡೆಯಬಹುದು” ಎಂದು ಸಲಹೆ ನೀಡಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ, ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಚುರಚಂದಪುರ ಜಿಲ್ಲೆಯ ಸೈಕೋಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಅವರು ಅಧಿವೇಶನಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದರು.

ಇದನ್ನು ಒದಿದ್ದೀರಾ? ಮಣಿಪುರ ಹಿಂಸಾಚಾರ | ಮೊದಲ ಬಾರಿ ಸಿಎಂ ಬಿರೇನ್ ಸಿಂಗ್ ಭೇಟಿ ಮಾಡಿದ ಮೋದಿ

“ನನ್ನ ಜನರು ಇಂಫಾಲ್‌ಗೆ ಕಾಲಿಡಲು ಸಾಧ್ಯವಾಗದಿದ್ದಾಗ, ರಾಜ್ಯದ ರಾಜಧಾನಿಯಲ್ಲಿ ನಡೆಯುವ ವಿಧಾನಸಭೆಯಲ್ಲಿ ನಾನು ಹೇಗೆ ಭಾಗವಹಿಸಲಿ” ಎಂದು ಹಾಕಿಪ್ ಪ್ರಶ್ನಿಸಿದ್ದಾರೆ. ಹಾಗೆಯೇ “ತಮ್ಮ ಸಮುದಾಯದವರು ವಾಸಿಸುವ ಗುಡ್ಡಗಾಡು ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವಿಲ್ಲದೆ ಜನಾಂಗೀಯ ಕಲಹಕ್ಕೆ ಶಾಶ್ವತ ಪರಿಹಾರವಿಲ್ಲ” ಎಂದು ಅಭಿಪ್ರಾಯಿಸಿದರು.

ಕಳೆದ ವರ್ಷ ಆರಂಭವಾದ ಜನಾಂಗೀಯ ಹಿಂಸಾಚಾರದಿಂದಾಗಿ ಒಟ್ಟಾಗಿ 226 ಜನರು ಸಾವನ್ನಪ್ಪಿದು ಕುಕಿ ಮತ್ತು ಮೈತಿ ಸಮುದಾಯವು ಪ್ರತ್ಯೇಕವಾಗಿದೆ. ಇಂಫಾಲ್‌ನಲ್ಲಿ ಯಾವುದೇ ಕುಕಿ ಸಮುದಾಯದವರಿಗೆ ವಾಸ ಸುರಕ್ಷಿತವಾಗಿಲ್ಲ. ಈ ಕಾರಣದಿಂದಾಗಿ ಕುಕಿ ಸಮುದಾಯದ ಜನರು ಪ್ರತ್ಯೇಕವಾಗಿದ್ದಾರೆ.

ಇನ್ನು ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಸುಮಾರು ಎರಡಕ್ಕೂ ಅಧಿಕ ತಿಂಗಳುಗಳ ಕಾಲ ಮಣಿಪುರದ ಬಗ್ಗೆ ಪ್ರಸ್ತಾಪ ಮಾಡದ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವಿಪಕ್ಷಗಳ ಒತ್ತಡದ ಮೇರೆಗೆ ಮಣಿಪುರ ಹಿಂಸಾಚಾರ ಬಗ್ಗೆ ಮಾತನಾಡಿದ್ದಾರೆ. ಆದರೆ ಈವರೆಗೂ ದೇಶ ವಿದೇಶ ಸುತ್ತಾಡುವ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿಲ್ಲ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...