ಮಣಿಪುರ | ಇಂಟರ್ನೆಟ್ ಸೇವೆ ಮರು ಆರಂಭಕ್ಕೆ ಕಾರ್ಯವಿಧಾನ ರೂಪಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Date:

ಜನರಿಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮತ್ತೆ ಒದಗಿಸಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕಾರ್ಯವಿಧಾನಗಳನ್ನು ರಚಿಸುವಂತೆ ಮಣಿಪುರ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್‌ ಸೂಚನೆ ನೀಡಿದೆ.

ಮಣಿಪುರದಲ್ಲಿ ಮೇ 3ರಿಂದ ಹಿಂಸಾಚಾರ ನಡೆಯುತ್ತಿದ್ದು, ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ, ಇಂಟರ್‌ನೆಟ್‌ ಇಲ್ಲದೆ ಯಾವ ಕೆಲಸಗಳೂ ನಡೆಯುತ್ತಿಲ್ಲ. ಇಂಟರ್‌ನೆಟ್‌ ಸೇವೆಯನ್ನು ಮರು ಆರಂಭಿಸಲು ನಿರ್ದೇಶಿಸುವಂತೆ ಹಲವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಅಹಂತೇಮ್ ಬಿಮೋಲ್ ಸಿಂಗ್ ಮತ್ತು ನ್ಯಾಯಮೂರ್ತಿ ಎ ಗುಣೇಶ್ವರ್ ಶರ್ಮಾ ಅವರ ಪೀಠವು, “ರಾಜ್ಯ ಅಧಿಕಾರಿಗಳು, ವಿಶೇಷವಾಗಿ ಗೃಹ ಇಲಾಖೆಯು ಮೊಬೈಲ್ ಫೋನ್‌ಗಳ ಇಂಟರ್ನೆಟ್ ಸೇವೆಗಳನ್ನು ಮರುಆರಂಭಿಸಲು ಕಾರ್ಯವಿಧಾನವನ್ನು ರೂಪಿಸಬೇಕು. ಅದಕ್ಕಾಗಿ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಪರಿಶೀಲಿಸಬೆಕು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, “ಕೆಲವು ಅಧಿಕಾರಿಗಳ ಮೊಬೈಲ್‌ಗಳು ಶ್ವೇತಪಟ್ಟಿಯಲ್ಲಿವೆ, ಅಂತಹ ಮೊಬೈಲ್ ಫೋನ್‌ಗಳಿಂದ ಯಾವುದೇ ಡೇಟಾ ಸೋರಿಕೆಯಾಗಿಲ್ಲ. ಹೀಗಾಗಿ, ಎಲ್ಲ ಮೊಬೈಲ್ ಫೋನ್‌ಗಳನ್ನು ಹಂತಹಂತವಾಗಿ ಶ್ವೇತಪಟ್ಟಿಗೆ ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೆಕು” ಎಂದು ಮನವಿ ಮಾಡಿದರು.

“ಸೇವಾ ಪೂರೈಕೆದಾರರು ಸಲ್ಲಿಸಿದ ವರದಿಯ ಪ್ರಕಾರ, ಶ್ವೇತಪಟ್ಟಿ ಮಾಡದ ಯಾವುದೇ ಇತರ ಸಂಖ್ಯೆಗಳಿಗೆ ಯಾವುದೇ ಡೇಟಾ ಸೋರಿಕೆಯಾಗಿಲ್ಲ” ಎಂದು ವಕೀಲರು ಮನವರಿಕೆ ಮಾಡಿಕೊಟ್ಟರು.

ಕಾರ್ಯವಿಧಾನಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್‌, ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...