ಮಣಿಪುರ | ಸರ್ಕಾರ ಮರುಸ್ಥಾಪಿಸುವ ಮುನ್ನ ರಾಜಕೀಯ ಪರಿಹಾರ ಕಂಡುಕೊಳ್ಳಿ: ಬಿಜೆಪಿಗೆ ಕುಕಿ ಗುಂಪು ಸಲಹೆ

Date:

ಮಣಿಪುರದಲ್ಲಿ ಸರ್ಕಾರ ಮರುಸ್ಥಾಪಿಸುವುದಕ್ಕೂ ಮುನ್ನ ರಾಜಕೀಯ ಪರಿಹಾರ ಕಂಡುಕೊಳ್ಳಿ ಎಂದು ಬಿಜೆಪಿಗೆ ಕುಕಿ ಗುಂಪು ಸಲಹೆ ನೀಡಿದೆ. ಮೊದಲು ಸಂಘರ್ಷಕ್ಕೆ ರಾಜಕೀಯ ಇತ್ಯರ್ಥ ಕೊಂಡುಕೊಳ್ಳಿ, ಬಳಿಕ ಸರ್ಕಾರವನ್ನು ಮತ್ತೆ ರಚಿಸಿ ಎಂದು ಕುಕಿ ಗುಂಪು ಹೇಳಿದೆ. ಈ ಹಿಂದೆ ಮೈತೇಯಿ ಶಾಸಕರು ಇದೇ ಒತ್ತಾಯ ಮಾಡಿದ್ದರು.

ಕುಕಿ-ಝೋ ಸಂಘಟನೆಗಳ ಒಂದು ಸಮೂಹ ಸಂಸ್ಥೆಯಾದ ಕುಕಿ ಝೋ ಕೌನ್ಸಿಲ್ (ಕೆಜೆಡ್‌ಸಿ) ಕುಕಿ ಪ್ರಾಬಲ್ಯದ ಚುರಾಚಂದ್‌ಪುರದಲ್ಲಿ ಸಭೆ ನಡೆಸಿದ ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ಬಿಜೆಪಿ ಈಶಾನ್ಯ ರಾಜ್ಯಗಳ ಉಸ್ತುವಾರಿ ಸಂಬಿತಾ ಪಾತ್ರಾ ಅವರಿಗೆ ಈ ಸಲಹೆಯನ್ನು ನೀಡಿದ್ದಾರೆ. ಇಬ್ಬರೂ ಬುಧವಾರ ಇಂಫಾಲ್‌ನಲ್ಲಿ ಬಿಜೆಪಿ ಶಾಸಕರು ಮತ್ತು ಇತರ ನಾಯಕರುಗಳನ್ನು ಭೇಟಿ ಮಾಡಿದ್ದಾರೆ. ಅದಾದ ಬಳಿಕ ಕೆಜೆಡಿಯಿ ನಿಯೋಗವನ್ನು ಭೇಟಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ | ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧ: ಬಿಜೆಪಿ ಶಾಸಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು ಈವರೆಗೆ 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 60 ಸಾವಿರಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಫೆಬ್ರವರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಘೋಷಿಸಿದೆ. ಇದೀಗ ಮತ್ತೆ ಸರ್ಕಾರ ರಚಿಸುವಂತೆ ಮೈತೇಯಿ ಶಾಸಕರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, “ಸಂವಾದದ ಸಮಯದಲ್ಲಿ, ಕೆಜೆಡ್‌ಸಿ ನಿಯೋಗವು ಭೇಟಿ ನೀಡಿದ ನಾಯಕರಿಗೆ ನಮ್ಮ ಸಾಮೂಹಿಕ ನಿಲುವನ್ನು ತಿಳಿಸಿದ್ದೇವೆ. ಬಫರ್ ವಲಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಅಗತ್ಯವನ್ನೂ ಒತ್ತಿ ಹೇಳಿದ್ದೇವೆ. ನಾವು ಬಿಜೆಪಿ ಸರ್ಕಾರವನ್ನು ವಿರೋಧಿಸುವುದಿಲ್ಲ ಎಂದು ಕೆಜೆಡ್‌ಸಿ ನಿಯೋಗ ಸ್ಪಷ್ಟವಾಗಿ ಸ್ಪಷ್ಟಪಡಿಸಿದೆ. ಆದರೆ ವಾಸ್ತವ ತಿಳಿಯಬೇಕು” ಎಂದು ಹೇಳಿದ್ದಾರೆ.

60 ಸದಸ್ಯ ಬಲದ ಮಣಿಪುರದಲ್ಲಿ ಬಿಜೆಪಿ 37 ಶಾಸಕರನ್ನು ಹೊಂದಿದೆ. ಆದರೆ ಬಿಜೆಪಿಯ ಏಳು ಮಂದಿ ಸೇರಿದಂತೆ ಕುಕಿ-ಝೋ ಸಮುದಾಯಗಳನ್ನು ಪ್ರತಿನಿಧಿಸುವ 10 ಶಾಸಕರು ಮಣಿಪುರ ಹಿಂಸಾಚಾರದ ಬಳಿಕ ಇಂಫಾಲ್‌ನಿಂದ ದೂರು ಉಳಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...