ಮಂಕಾಳ್ ವೈದ್ಯ ಕೋಮುವಾದಿ ಹೇಳಿಕೆ: ‘ಏನೋ ಹೇಳಿರುತ್ತಾರೆ’ ಎಂದು ಜಾರಿಕೊಂಡ ಗೃಹ ಸಚಿವ ಪರಮೇಶ್ವರ್

Date:

ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಸೋಮವಾರ ಕೋಮುವಾದಿ ಹೇಳಿಕೆ ನೀಡಿದ್ದು, ‘ಗೋ ಕಳ್ಳತನ ಮಾಡುವವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ’ ಎಂದಿದ್ದಾರೆ. ಅವರ ಕೋಮುವಾದಿ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್, ‘ವೈಯಕ್ತಿಕವಾಗಿ ಏನೋ ಹೇಳಿರುತ್ತಾರೆ’ ಎಂದು ಜಾರಿಕೊಂಡಿದ್ದಾರೆ.

ಮಂಕಾಳ್ ವೈದ್ಯ ಅವರ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ, ಅವರ ಹೇಳಿಕೆಯ ಬಗ್ಗೆ ಪರಮೇಶ್ವರ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ವೈಯಕ್ತಿಕವಾಗಿ ಏನೋ ಹೇಳಿರುತ್ತಾರೆ. ಸ್ಪಾರ್‌ ಆಫ್‌ ದಿ ಮೂಮೆಂಟ್‌ನಲ್ಲಿ’ ಎಂದು ಮೌನಕ್ಕೆ ಜಾರಿದ್ದಾರೆ.

ಸೋಮವಾರ, ಕಾರವಾರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದ ಮಂಕಾಳ್ ವೈದ್ಯ, “ಗೋ ಕಳ್ಳತನವನ್ನು ತಡೆಯಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಹಸುವಿನ ಮೇಲೆ ದೌರ್ಜನ್ಯ ನಡೆಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿ. ಅವರು ಯಾರೇ ಆಗಲಿ ಕ್ರಮ ಕೈಗೊಳ್ಳಲಿ. ಇನ್ನೂ ಹೆಚ್ಚಾಗಿ ಹೇಳಬೇಕು ಅಂದ್ರೆ ಗೋ ಕಳ್ಳರ ವಿರುದ್ಧ ಅಥವಾ ಗೋವಿನ ಮೇಲೆ ದೌರ್ಜನ್ಯ ನಡೆಸುವವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ” ಎಂದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...