ಮನಮೋಹನ ಸಿಂಗ್ ಬುದ್ಧನ ಸಂದೇಶ ಅರ್ಥ ಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ: ಅಮರ್ತ್ಯ ಸೇನ್

Date:

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಮತ್ತು ಉತ್ತಮ ರಾಜಕೀಯ ನಾಯಕ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯ ಶಾಂತಿನಿಕೇತನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಂಗ್ ಅವರು ಗೌತಮ ಬುದ್ಧನ ‘ವಜ್ರಚ್ಛೇದಿಕ ಪ್ರಜ್ಞಾಪರಮಿತಾ’ ಸೂತ್ರ ಅಥವಾ ‘ವಜ್ರ ಸೂತ್ರ’ದಲ್ಲಿ ಮನುಷ್ಯರ ವಿಭಿನ್ನ ನಂಬಿಕೆಗಳ ಅಸ್ತಿತ್ವವನ್ನು ಗುರುತಿಸುವುದು ಮುಖ್ಯ ಎಂಬ ಸಂದೇಶವನ್ನು ಅರ್ಥಮಾಡಿಕೊಂಡಿದ್ದರು.

ಅವರಿಗೆ ‘ವಜ್ರ ಸೂತ್ರ’ದಲ್ಲಿ ವಿವರಿಸಲಾದ ಗೌತಮ ಬುದ್ಧನ ಸಂದೇಶ ಚೆನ್ನಾಗಿ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ. ನಾವು ಒಟ್ಟಿಗೆ ವಿದ್ಯಾರ್ಥಿಗಳಾಗಿದ್ದಾಗ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಸಹೋದ್ಯೋಗಿಗಳಾಗಿದ್ದಾಗ ನಾನು ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ ಎಂದು ಅಮರ್ತ್ಯ ಸೇನ್ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನಮೋಹನ ಸಿಂಗ್ ಮತ್ತು ನಾನು ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಒಟ್ಟಿಗೆ ವ್ಯಾಸಂಗ ಮಾಡುವುದರ ಜತೆಗೆ ಉತ್ತಮ ಸ್ನೇಹಿತರಾಗಿದ್ದೆವು. ಬುದ್ಧಿವಂತಿಕೆಯ ಪರಿಪೂರ್ಣತೆ ಸೂತ್ರದಲ್ಲಿ ಗೌತಮ ಬುದ್ಧ ವಿವರಿಸಿದ ಸಂದೇಶದ ಸಾರವನ್ನು ಮನಮೋಹನ ಸಿಂಗ್ ಅಳವಡಿಸಿಕೊಂಡಿದ್ದರು. ಹಾಗಾಗಿ ಭಾರತದ ನೆಲದಲ್ಲಿ ಪಾಕಿಸ್ತಾನದ ಭಯೋತ್ಪಾದನೆಯ ಪುರಾವೆಗಳು ಕಂಡುಬಂದಾಗ ಪ್ರಜ್ಞಾಪೂರ್ವಕವಾಗಿ ಹೀಗೆ ಪ್ರತಿಕ್ರಿಯಿಸಬೇಕು ಎಂಬುದು ಅವರಿಗೆ ತಿಳಿದಿತ್ತು ಎಂದು ಸೇನ್ ವಿವರಿಸಿದ್ದಾರೆ.

ಮನಮೋಹನ ಅವರು ಸಿಖ್ ಸಮುದಾಯಕ್ಕೆ ಸೇರಿದವರಾಗಿದ್ದರೂ ಸಹ ಗೌತಮ ಬುದ್ಧನ ಸಂದೇಶವನ್ನು ಇತರ ಧರ್ಮಗಳು ಮತ್ತು ಸಮುದಾಯಗಳ ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ನಾನು, ಮನಮೋಹನ ಸಿಂಗ್ ಅವರನ್ನು ತುಂಬಾ ಇಷ್ಟಪಟ್ಟಿದ್ದೇನೆ. ಸ್ನೇಹಿತ ಎಂಬ ಕಾರಣಕ್ಕಾಗಿ ಅಲ್ಲ ಎಂದು ಸೇನ್ ಪ್ರತಿಪಾದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...