ಪಥಸಂಚಲನ ಪಾಲಿಟಿಕ್ಸ್‌ | ಕಲಬುರಗಿಯಲ್ಲಿ ನಡೆಯುವುದೇ RSS-DSS ನೇರ ಹಣಾಹಣಿ?

Date:

ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿಈಗ ಆರೆಸ್ಸೆಸ್‌ ‘ಪಥ ಸಂಚಲನ’ ಮೂಲಕ ‘ಶಕ್ತಿ’ ಪ್ರದರ್ಶಿಸಲು ಪೈಪೋಟಿಗೆ ಸಿದ್ಧವಾಗಿದೆ. ನವೆಂಬರ್‌ ಎರಡರಂದೇ ಪಥಸಂಚಲನಕ್ಕೆ ತಮಗೂ ಅವಕಾಶ ನೀಡುವಂತೆ ಭೀಮ್‌ ಆರ್ಮಿ ಹಾಗೂ ದಲಿತ ಪ್ಯಾಂಥರ್ಸ್‌ ಸಂಘಟನೆ ಜಿಲ್ಲಾಡಳಿತವನ್ನು ಕೋರಿವೆ.

ಖಾಸಗಿ ಸಂಘ-ಸಂಸ್ಥೆಗಳು ಅಥವಾ ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದನ್ನು ನಿಯಂತ್ರಿಸಲು ಸರ್ಕಾರ ಹೊರಡಿಸಿದ್ದ ಸರ್ಕಾರದ ಆದೇಶಕ್ಕೆ ಆರೆಸ್ಸೆಸ್‌ ನೇರ ಸೆಡ್ಡು ಹೊಡೆದಿದೆ.

ಸಾರ್ವಜನಿಕ ಸ್ಥಳದಲ್ಲಿ ಆರೆಸ್ಸೆಸ್‌ ಚಟುವಟಿಕೆ ನಿಷೇಧಿಸುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬಳಿಕ ಸಿದ್ದರಾಮಯ್ಯ ಅವರು ಖರ್ಗೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, ಖಾಸಗಿ ಸಂಘ-ಸಂಸ್ಥೆಗಳು ಅಥವಾ ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಕಡ್ಡಾಯ ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಸಂಪುಟದ ನಿರ್ಧಾರವನ್ನು ತಿರುಚಿದ ಬಿಜೆಪಿಗರು ರಾಜ್ಯದಲ್ಲಿ ಆರೆಸ್ಸೆಸ್‌ ಅನ್ನು ಸರ್ಕಾರ ನಿಷೇಧಿಸಲು ಹೊರಟಿದೆ ಎನ್ನುವ ನರೇಷನ್‌ ಅನ್ನು ಜನರಲ್ಲಿ ತೇಲಿಬಿಡುವ ದೊಡ್ಡ ಪ್ರಯತ್ನ ಮಾಡಿದರು. ಅದರ ಮುಂದುವರಿಕೆಯಾಗಿ ಕಲಬುರಗಿ ನೆಲದಲ್ಲೇ ಸರ್ಕಾರ ಆದೇಶವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಆರೆಸ್ಸೆಸ್‌ ಅ. 19ರಂದು ಪಥಸಂಚಲನ ನಡೆಸಿತು.

ಅದೇ ದಿನ ಮೆರವಣಿಗೆ ನಡೆಸಲು ಭೀಮ್‌ ಆರ್ಮಿ ಮತ್ತು ದಲಿತ ಪ್ಯಾಂಥರ್ಸ್‌ ಸಂಘಟನೆಗಳೂ ಅವಕಾಶ ಕೋರಿದ್ದವು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಕಾರಣ ನೀಡಿ, ತಹಶೀಲ್ದಾರರು ಮೂರೂ ಸಂಘಟನೆಗಳಿಗೆ ಅಕ್ಟೋಬರ್ 18ರಂದೇ ಅನುಮತಿ ನಿರಾಕರಿಸಿದರು.

ಕೊನೆಯ ಕ್ಷಣದಲ್ಲಿ ನಿರ್ಬಂಧ ಹೇರಿದರೆ ಹೇಗೆ, ಅನುಮತಿಯನ್ನು ನೀಡಿ ಎಂದು ಆರೆಸ್ಸೆಸ್‌ ಮನವಿಯನ್ನು ಮಾಡಿತು. ಇದಕ್ಕೆ ತಹಶೀಲ್ದಾರ್ ಒಪ್ಪದೇ ಇದ್ದಾಗ, ಆರೆಸ್ಸೆಸ್‌, ನರ್ಮದಾ ಕಾಲೇಜು ಆವರಣದಿಂದ ಪಥಸಂಚಲನವನ್ನು ಆರಂಭಿಸಿತು. ಸುಮಾರು ಅರ್ಧ ಕಿಲೋಮೀಟರ್ ಹೋಗವಷ್ಟರಲ್ಲಿ ಪೊಲೀಸರು ಅವರನ್ನು ತಡೆದು ಬಂಧಿಸಿದರು.

ಆರೆಸ್ಸೆಸ್‌ ಮುಖಂಡ ಅಶೋಕ ಪಾಟೀಲ ಎಂಬುವರು ಈಗ ಪಥಸಂಚಲನಕ್ಕೆ ಅನುಮತಿ ನಿರಾಕರಣೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ಕಲಬುರಗಿ ಪೀಠ, ನ.2ರಂದು ಪಥಸಂಚಲನ ನಡೆಸುವುದಾದರೆ ಹೊಸದಾಗಿ ಅರ್ಜಿ ಸಲ್ಲಿಸಲು ಸೂಚಿಸಿ, ಈ ಕುರಿತ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಅ.24ಕ್ಕೆ ಮುಂದೂಡಿದೆ.

ಹೈಕೋರ್ಟ್ ಸೂಚನೆಯಂತೆ ಆರ್‌ಎಸ್‌ಎಸ್ ಮುಖಂಡರು ನ.2ರ ಪಥಸಂಚಲನಕ್ಕೆ ಅನುಮತಿ ಕೋರಿ ಅ.19ರಂದೇ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಮುಂದಾದರು. ಜಿಲ್ಲಾಧಿಕಾರಿ ಲಭ್ಯವಾಗದೇ ಇದ್ದಾಗ ಅವರ ವಾಟ್ಸ್ಯಾಪ್‌ ಹಾಗೂ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಅದೇ ಮನವಿಯನ್ನು ಆರೆಸ್ಸೆಸ್‌ ಮುಖಂಡರು ಮಂಗಳವಾರ ಲಿಖಿತವಾಗಿ ಜಿಲ್ಲಾಧಿಕಾರಿ ಕಚೇರಿಗೂ ಸಲ್ಲಿಸಿದ್ದಾರೆ. ಸುಮಾರು 600 ಸ್ವಯಂ ಸೇವಕರು ಲಾಠಿಯೊಂದಿಗೆ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಪ್ರಿಯಾಂಕ್‌ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿಈಗ ಆರೆಸ್ಸೆಸ್‌ ‘ಪಥ ಸಂಚಲನ’ ಮೂಲಕ ‘ಶಕ್ತಿ’ ಪ್ರದರ್ಶಿಸಲು ಪೈಪೋಟಿಗೆ ಸಿದ್ಧವಾಗಿದೆ. ನವೆಂಬರ್‌ ಎರಡರಂದೇ ಪಥಸಂಚಲನಕ್ಕೆ ತಮಗೂ ಅವಕಾಶ ನೀಡುವಂತೆ ಭೀಮ್‌ ಆರ್ಮಿ ಹಾಗೂ ದಲಿತ ಪ್ಯಾಂಥರ್ಸ್‌ ಸಂಘಟನೆಗಳೂ ಜಿಲ್ಲಾಡಳಿತವನ್ನು ಕೋರಿವೆ. ಈಗ ಒಂದು ರೀತಿಯಲ್ಲಿ ಕಲಬುರಗಿಯಲ್ಲಿ ಪಥಸಂಚಲನಕ್ಕೆ ತ್ರಿಕೋನ ಸ್ಪರ್ಧೆ ಉಂಟಾಗಿದೆ. ತೀವ್ರ ಕುತೂಹಲವೂ ಸೃಷ್ಟಿಯಾಗಿದೆ.

ಚಿತ್ತಾಪುರ ಪಟ್ಟಣದಲ್ಲಿ ಆರೆಸ್ಸೆಸ್‌, ಭೀಮ್ ಆರ್ಮಿ ಹಾಗೂ ದಲಿತ ಪ್ಯಾಂಥರ್ಸ್ ಸಂಘಟನೆಗಳಿಂದ ಪಥಸಂಚಲನಕ್ಕಾಗಿ ಅನುಮತಿಗೆ ಹಗ್ಗಜಗ್ಗಾಟ ನಡೆಯುತ್ತಿರುವ ನಡುವೆಯೇ ಇದೀಗ ಅದೇ ಸ್ಥಳದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದು, ನಮಗೂ ಹೋರಾಟಕ್ಕೆ ಅವಕಾಶ ಕೊಡಬೇಕೆಂದು ಗೊಂಡ-ಕುರುಬ ಎಸ್ಟಿ ಹೋರಾಟ ಸಮಿತಿ ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.

ಕುರುಬ ಸಮಾಜವನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಚಿತ್ತಾಪುರ ಪಟ್ಟಣದಲ್ಲಿ ಕನಕ ಭವನದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದ್ದು, 5 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ಈ ಹೋರಾಟಕ್ಕೆ ಅನುಮತಿ ನೀಡಬೇಕೆಂದು ಗೊಂಡ-ಕುರುಬ ಎಸ್ಟಿ ಹೋರಾಟ ಸಮಿತಿ ಒತ್ತಾಯಿಸಿದೆ.

ಗೊಂಡ-ಕುರುಬ ಎಸ್ಟಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ ಅವರು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, “ನ.2 ರಂದು ಆರೆಸ್ಸೆಸ್‌ನವರಿಗೆ ಅನುಮತಿ ಕೊಡುವುದಾದರೆ ನಮಗೂ ಅನುಮತಿ ಕೊಡಿ, ನಮ್ಮದೂ ದೊಡ್ಡ ಸಂಘಟನೆ. ಅವರು ಕೇವಲ ಮೆರವಣಿಗೆ ಮಾಡುತ್ತಾರೆ ಅಷ್ಟೇ, ನಮ್ಮದು 30 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ದೊಡ್ಡ ಮಟ್ಟದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ನಮಗೂ ಅವಕಾಶ ಕೊಡಲಿ” ಎಂದು ಆಗ್ರಹಿಸಿದ್ದಾರೆ.

ನ.2ರಂದು ಪಥಸಂಚಲನಕ್ಕೆ ಅನುಮತಿ ಕೋರಿ ಆರೆಸ್ಸೆಸ್‌ ಮತ್ತೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ‘ಎಲ್ಲರ ದೃಷ್ಟಿ ಚಿತ್ತಾಪುರದತ್ತ’ ಎನ್ನುವ ಪೋಸ್ಟರ್‌ಗಳನ್ನು ಎಲ್ಲಡೆ ವೈರಲ್‌ ಮಾಡಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಆರೆಸ್ಸೆಸ್‌ ಕಾರ್ಯಕರ್ತರು ವಾಟ್ಸ್ಯಾಪ್‌ ಸ್ಟೇಟಸ್‌ಗಳಲ್ಲೂ ಈ ಫೋಟೊ, ಸಂದೇಶಗಳನ್ನು ಹಾಕಿಕೊಳ್ಳುತ್ತಿದ್ದಾರೆ.

ಭೀಮ್‌ ಆರ್ಮಿ ನಿಲವುವೇನು?

‘ಭೀಮ್‌ ಆರ್ಮಿ’ ಭಾರತ ಏಕತಾ ಮಿಷನ್‌ನ ರಾಜ್ಯ ಯುವ ಘಟಕವೂ ನ.2ರಂದು ಭೀಮ ಪಥ ಸಂಚಲನ ಜಾಥಾಕ್ಕೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ‘ಜಾಥಾದಲ್ಲಿ ಬಿದಿರಿನ ಕೋಲು, ರಾಷ್ಟ್ರಧ್ವಜದೊಂದಿಗೆ ಬೌದ್ಧಧರ್ಮದ ಪಂಚಶೀಲ ಧ್ವಜ ಹಾಗೂ ಸಂವಿಧಾನ ಪೀಠಿಕೆಯೊಂದಿಗೆ ಮೆರವಣಿಗೆ ನಡೆಸಲಾಗುವುದು’ ಎಂದು ಮನವಿಯಲ್ಲಿ ಹೇಳಲಾಗಿದೆ.

ದಲಿತ ಪ್ಯಾಂಥರ್ಸ್‌ ಹೇಳುವುದೇನು?

ಭಾರತೀಯ ದಲಿತ ಪ್ಯಾಂಥರ್ಸ್‌ ರಾಜ್ಯ ಸಮಿತಿ ಮುಖಂಡರು ಚಿತ್ತಾಪುರದಲ್ಲಿ ನ.2ರಂದು ಸಂವಿಧಾನದ ಪೀಠಿಕೆ ಹಾಗೂ ನೀಲಿ ಧ್ವಜದೊಂದಿಗೆ ಪಥ ಸಂಚಲನ ನಡೆಸಲು ಅನುಮತಿ ನೀಡಬೇಕು ಎಂದು ಕೋರಿ ಮಂಗಳವಾರ ಡಿಸಿಗೆ ಮನವಿ ಸಲ್ಲಿಸಿದ್ದಾರೆ.

“ಆರೆಸ್ಸೆಸ್‌ ಕೈಯಲ್ಲಿ ಲಾಠಿ ಹಿಡಿದು ನಡೆಸುವ ಆಕ್ರಮಣಕಾರಿ ಪ್ರದರ್ಶನದ ಮೂಲಕ ಯುವಜನರು, ಮುಗ್ಧ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ ನೀಡಿದರೆ, ನಾವೂ ಸಂವಿಧಾನ ಪ್ರತಿ ಹಾಗೂ ಲಾಠಿ ಹಿಡಿದು ಪಥಸಂಚಲನ ನಡೆಸುತ್ತೇವೆ” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆರ್‌ಎಸ್‌ಎಸ್‌ ಸೇರಿ ಮೂರು ಸಂಘಟನೆಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ. ಆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಎಸ್‌ಪಿ, ಎಸಿ ಹಾಗೂ ತಹಶೀಲ್ದಾರ್‌ಗೆ ಅವರಿಗೆ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ರವಾನಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ, “ಈ ಬಗ್ಗೆ ಸಭೆ ನಡೆಯುತ್ತಿದೆ. ಪರಿಶೀಲನೆಗಾಗಿ ಒಂದಿಷ್ಟು ಮಾಹಿತಿ ಕೇಳಿದ್ದೇವೆ. ಆ ಎಲ್ಲ ಮಾಹಿತಿ ಲಭ್ಯವಾದ ಬಳಿಕ ಅನುಮತಿ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಪ್ರಕಟಿಸಲಿದೆ. ನಾಳೆ ಕೋರ್ಟ್‌ನಲ್ಲಿ ವಿಚಾರಣೆ ಸಹ ಇದೆ. ಕೋರ್ಟ್‌ ತೀರ್ಮಾನ ನೋಡಿಕೊಂಡು ಅಂತಿಮ ನಿರ್ಧಾರ ಮಾಡಲಾಗುವುದು” ಎಂದು ಸ್ಪಷ್ಟನೆ ನೀಡಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಚಿತ್ತಾಪುರ ತಹಶೀಲ್ದಾರ್ ಅವರು ಆರೆಸ್ಸೆಸ್‌ ಸಲ್ಲಿಸಿದ ಮನವಿ ಸ್ವೀಕರಿಸಿ ಅವರಿಗೂ ವಿವಿಧ ದಾಖಲೆಗಳನ್ನು ಸಲ್ಲಿಸುವಂತೆ ಹಿಂಬರಹ ನೀಡಲಾಗಿದೆ. ಅವರೀಗ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ. ಹಾಗೆಯೇ ‘ಭೀಮ್‌ ಆರ್ಮಿ’ ಮತ್ತು ದಲಿತ ಪ್ಯಾಂಥರ್ಸ್‌ಗೆ ತಹಶೀಲ್ದಾರ್ ಅವರು ಎಂಟು ದಾಖಲೆಗಳನ್ನು ಕೇಳಿದ್ದಾರೆ.

ಸದರಿ ಪಥ ಸಂಚಲನದಲ್ಲಿ ಎಷ್ಟು ಜನ ಭಾಗವಿಸಿರುತ್ತಿರಿ ಎಂಬ ಮಾಹಿತಿ ನೀಡಿರುವುದಿಲ್ಲ. ಸದರಿ ಪಥ ಸಂಚಲನದಲ್ಲಿ ಚಿತ್ತಾಪೂರ ತಾಲೂಕು ಹೊರತುಪಡಿಸಿ ಬೇರೆ ತಾಲ್ಲೂಕು ಅಥವಾ ಬೇರೆ ಜಿಲ್ಲೆಯ ಎಷ್ಟು ಜನರು ಭಾಗವಹಿಸುತ್ತಾರೆ ಎಂಬ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ್ ಹಿಂಬರಹ ನೀಡಿದ್ದಾರೆ.

ಶಹಬಾದ್‌ ಡಿವೈಎಸ್‌ಪಿಯೊಬ್ಬರು ಈ ದಿನ.ಕಾಮ್‌ ಜೊತೆ ಮಾತನಾಡಿ, “ಕಾನೂನು ಸುರಕ್ಷತೆ ದೃಷ್ಟಿಯಿಂದ ನಾವೂ ಸಹ ಪರಿಶೀಲನೆ ನಡೆಸುತ್ತಿದ್ದೇವೆ. ಅನುಮತಿ ನೀಡಬೇಕೋ ಬೇಡವೋ ಎನ್ನುವುದು ನಾಳೆ ಕೋರ್ಟ್‌ ಹೇಳಲಿದೆ. ಕೋರ್ಟ್‌ ಸೂಚನೆ ಮೇರೆಗೆ ಎಲ್ಲವೂ ನಿರ್ಧಾರವಾಗಲಿದೆ” ಎಂದು ಹೇಳಿದರು.

ಒಟ್ಟಾರೆ ಕಲಬುರಗಿ ನೆಲದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನದ ಕಾವು ಜೋರಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಯೋಜಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು. ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ ಎಂದು ಸೌಹಾರ್ದ ಕರ್ನಾಟಕ ಸಂಘಟನೆ ಒಕ್ಕೊರಲಿನಿಂದ ಒತ್ತಾಯಿಸಿದೆ.

ಈ ದಿನ ಸಂಪಾದಕೀಯ | ಬಡ ಕಾರ್ಮಿಕರ ಹೊಟ್ಟೆಯ ಮೇಲೆ ಮತ್ತೆ ಮೋದಿ ಹೊಡೆತ – ಇನ್ನು ಕಡುಕಠಿಣ ಪಿಎಫ್ ಹಿಂಪಡೆತ

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರೊ. ಆರ್.ಕೆ. ಹುಡಗಿ, ಮೀನಾಕ್ಷಿ ಬಾಳಿ, ಕೆ. ನೀಲಾ, ಪ್ರಭು ಖಾನಾಪುರೆ ಸೇರಿದಂತೆ ಇತರರು, “ಕರ್ನಾಟಕದಾದ್ಯಂತ ಜನರು ಚಿತ್ತಾಪುರದಲ್ಲಿ ಸೇರುವಂತೆ ಒತ್ತಾಯಿಸುವ ಕರೆಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ. ಒಂದು ಲಕ್ಷ ಜನರು ಸೇರಬಹುದು ಎಂಬ ಹೇಳಿಕೆಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ‘ಹಿಂದೂಗಳ ಈ ಮೌನ ಯಾತಕ್ಕಾಗಿ?’ಯಂತಹ ಪ್ರಚೋದನಕಾರಿ ಸಾಲುಗಳು ಸೇರಿವೆ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಏನಾದರೂ ಸಂಭವಿಸಬಹುದಾದ ಅಪಾಯದ ಮುನ್ಸೂಚನೆಯನ್ನು ನೀಡುತ್ತವೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಆರೆಸ್ಸೆಸ್‌ ಮಾಜಿ ಮುಖಂಡ ಎನ್‌ ಹನುಮೇಗೌಡ ಅವರು ಕಲಬುರಗಿ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ, ಚಿತ್ತಾಪುರ ತಹಶೀಲ್ದಾರ್‌, ಚಿತ್ತಾಪುರ ನಗರ ಗ್ರಾಮೀಣ ಠಾಣಾಧಿಕಾರಿಗಳಿಗೆ ಪತ್ರ ಬರೆದು ಆರೆಸ್ಸೆಸ್‌ ಪಥಸಂಚಲನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

೦೦೦೦

ಒಟ್ಟಾರೆ ಕಲಬುರಗಿ ಅದರಲ್ಲೂ ಮುಖ್ಯವಾಗಿ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲೇ ಆರೆಸ್ಸೆಸ್‌ ದೊಡ್ಡ ಪ್ರಮಾಣದಲ್ಲಿ ಪಥಸಂಚನಕ್ಕೆ ಮುಂದಾಗಿರುವುದು ಒಂದು ರಾಜಕೀಯ ಷಡ್ಯಂತ್ರ ಎಂದೇ ಕಾಂಗ್ರೆಸ್ಸಿಗರು ಮಾತನಾಡುತ್ತಿದ್ದಾರೆ.

ಮೋದಿ ಶಪತದ ಮುಂದುವರಿಕೆಯೇ?

“ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮನೆಗೆ ಕಳುಹಿಸಲಾಗುವುದು” ಎಂದು 2019ರ ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲೇ ಬಹಿರಂಗವಾಗಿ ಘೋಷಿಸಿದ್ದರು. ಷಡ್ಯಂತ್ರದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೊನೆಗೂ ಸೋಲಿಸಲಾಯಿತು.

ಪ್ರಿಯಾಂಕ್ ಪರ ಕೆಬಿಜಿ ಪೋಸ್ಟ್: ಬಲಪಂಥೀಯ ಟೂಲ್‌ಕಿಟ್ ಪ್ರತಿಕ್ರಿಯೆ ಏನಿತ್ತು? – ತನಿಖಾ ವರದಿ

ಈಗ ಆರೆಸ್ಸೆಸ್‌ ವಿರುದ್ಧ ಸೈದ್ಧಾಂತಿಕವಾಗಿ ಸ್ಪಷ್ಟ ನಿಲುವಿನೊಂದಿಗೆ ಮಾತನಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಟಾರ್ಗೆಟ್‌ ಮಾಡಿರುವ ಆರೆಸ್ಸೆಸ್‌ ಮತ್ತು ಮೋದಿ ಅವರು ರಾಜಕೀಯವಾಗಿ ಪ್ರಿಯಾಂಕ್‌ ಖರ್ಗೆ ಅವರನ್ನು ಮುಗಿಸಲು ಸುಪಾರಿ ಕೊಟ್ಟಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ ಎಂದು ಕಾಂಗ್ರೆಸ್‌ ಪಾಳಯದಲ್ಲಿ ಮಾತುಗಳು ಕೇಳಿಬರುತ್ತಿವೆ. ಆರೆಸ್ಸೆಸ್‌ ಷಡ್ಯಂತ್ರವನ್ನು ಪ್ರಿಯಾಂಕ್‌ ಖರ್ಗೆ ಹೇಗೆ ಎದುರಿಸಿ ನಿಲ್ಲುತ್ತಾರೆ ಮತ್ತು ಕಾಂಗ್ರೆಸ್‌ ಇವರ ಹೆಗಲಿಗೆ ಹೇಗೆ ನಿಲ್ಲಲಿದೆ ಎಂಬುದು ಕುತೂಹಲ ಮೂಡಿಸಿದೆ.

RSS ನಿಷೇಧಕ್ಕೆ ನಿಮ್ಮ ಸಹಮತವಿದೆಯೇ?
WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...