ಮೀನು ಮಾರಾಟದ ‘ಮತ್ಸ್ಯ ವಾಹನ’ಗಳಿಗೆ ನ.21ರಂದು ಚಾಲನೆ: ಸಚಿವ ಮಂಕಾಳ್ ವೈದ್ಯ

Date:

ಬೆಂಗಳೂರಿನಲ್ಲಿ ನವೆಂಬರ್ 21ರಂದು ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಂದು 8 ಲಕ್ಷ ಮೌಲ್ಯದ ಮೀನು ಮಾರಾಟ ಮಾಡುವ ‘ಮತ್ಸ್ಯ ವಾಹನ’ಗಳನ್ನು ವಿತರಿಸಲಿದ್ದೇವೆ. ಒಟ್ಟು 300 ವಾಹನಗಳನ್ನು ವಿತರಿಸುವ ಉದ್ದೇಶವಿದ್ದು, ಈ ಪೈಕಿ ಬೆಂಗಳೂರಿಗೆ 150 ವಾಹನ ನೀಡುತ್ತಿದ್ದೇವೆ ಎಂದು ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ್ ವೈದ್ಯ ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಮತ್ತು ಇಲಾಖಾ ಅಧಿಕಾರಿಗಳ ಜೊತೆ ಸಮಾಲೋಚನೆ ಸಭೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ನ.21ರಂದು ವಿಶ್ವ ‘ಮತ್ಸ್ಯ ದಿನ’ ಪ್ರಯುಕ್ತ ಬೆಂಗಳೂರಿನಲ್ಲಿ ‘ಮತ್ಸ್ಯ ವಾಹನ’ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಮೂಲಕ ಬೆಂಗಳೂರಿನ ಮೀನು ಖಾದ್ಯ ಪ್ರಿಯರ ಮನೆಗೆ ಬಾಗಿಲಿಗೆ ಕರಾವಳಿ ಮೀನು ಮಾರಾಟ ಮಾಡಲಾಗುವುದು. ಫ್ರಿಜ್, ತೂಕದ ಯಂತ್ರ, ಕಟ್ಟಿಂಗ್ ಮೆಷಿನ್ ಸಹಿತ ಮತ್ತಿತರ ಅನುಕೂಲತೆಯುಳ್ಳ ಸುಸಜ್ಜಿತವಾದ ಎಂಟು ಲಕ್ಷ ರೂ. ವೆಚ್ಚದ ವಾಹನಗಳಲ್ಲಿ ಕರಾವಳಿಯ ತರಹೇವಾರಿ ಮೀನುಗಳ ಮಾರಾಟದ ವ್ಯವಸ್ಥೆಯಿರುತ್ತದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸಕ್ತರು ಅರ್ಜಿ ಸಲ್ಲಿಸಿದರೆ ಎರಡು ಲಕ್ಷ ರೂ. ಭದ್ರತಾ ಠೇವಣಿ, ಮಾಸಿಕ ಮೂರು ಸಾವಿರ ರೂ. ನಿರ್ವಹಣಾ ವೆಚ್ಚ ಭರಿಸುವ ಷರತ್ತಿನ ಮೇಲೆ ಈ ವಾಹನಗಳನ್ನು ವಿತರಿಸಲಾಗುತ್ತದೆ. ಬೇಡವೆಂದಾಗ ವಾಹನಗಳನ್ನು ಹಿಂದಿರುಗಿಸಿ, ಭದ್ರತಾ ಠೇವಣಿ ವಾಪಸ್ ಪಡೆಯಲು ಅವಕಾಶವಿದೆ. ಮೊದಲ ಹಂತದಲ್ಲಿ 150 ಮತ್ಸ್ಯ ವಾಹನಗಳು ಬೆಂಗಳೂರಿನಲ್ಲಿ ಸಂಚರಿಸಿ ಮೀನುಗಳನ್ನು ಮಾರಾಟ ಮಾಡಲಿದೆ ಎಂದರು.

ಈ ಯೋಜನೆಯ ಭಾಗವಾಗಿ ಸರ್ಕಾರ ಭದ್ರತಾ ಠೇವಣಿಯ ಹೆಸರಿನಲ್ಲಿ ಫಲಾನುಭವಿಗಳಿಂದ 2 ಲಕ್ಷ ರೂ. ಮುಂಗಡ ಹಣ ಪಡೆದುಕೊಳ್ಳುತ್ತದೆ. ಎಸ್‌ಸಿ-ಎಸ್‌ಟಿ ಫಲಾನುಭವಿಗಳಿಂದ ಒಂದೂವರೆ ಲಕ್ಷ ರೂ. ಡೆಪಾಸಿಟ್‌ ತೆಗೆದುಕೊಳ್ಳುತ್ತೇವೆ ಎಂದರು.

ಕಾರವಾರ, ಮಂಗಳೂರಲ್ಲಿ ಹೊಸ ಬಂದರು ನಿರ್ಮಾಣ
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಮೀನುಗಾರಿಕೆ, ಒಳನಾಡು ಜಲಸಾರಿಗೆ ಮತ್ತು ಬಂದರುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಇದೇ ವೇಳೆ ಸಚಿವ ಮಂಕಾಳ್‌ ವೈದ್ಯ ಹೇಳಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳ ಒಳನಾಡು ಜಲಸಾರಿಗೆ, ಮೀನುಗಾರಿಕೆ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಚರ್ಚೆ ಮಾಡಲಾಗಿದೆ. ಇದೇ ವೇಳೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೋಟ್‌ಗಳ ನಿಲುಗಡೆಗೆ ಅವಕಾಶ ಸೇರಿದಂತೆ ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡುವ ಕುರಿತು ಸಮಾಲೋಚನೆ ನಡೆಸಲಾಗಿದೆ. ಕಾರವಾರ ಮತ್ತು ಮಂಗಳೂರಿನಲ್ಲಿ ಹೊಸದಾಗಿ ಬಂದರು ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ವಿಸ್ತೃತ ಯೋಜನಾ ವರದಿ ಸಿದ್ಧವಾದ ನಂತರ ಅಂದಾಜು ವೆಚ್ಚದ ಬಗ್ಗೆ ತಿಳಿಯಲಿದೆ. ಒಂದು ಕೋಟಿ ರೂ. ನಿಂದ ಸಾವಿರ ಕೋಟಿ ರೂ. ವೆಚ್ಚ ಗಾತ್ರದ ಬಂದರುಗಳಿವೆ. ಮೂರು ಜಿಲ್ಲೆಗಳಲ್ಲಿ ಒಟ್ಟು 13 ದ್ವೀಪ ಗುರುತಿಸಲಾಗಿದೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ಬಳಸಿಕೊಳ್ಳಲು ಖಾಸಗಿ ಸಾರ್ವಜನಿಕ ಸಹಭಾಗಿತ್ವದ ಚಿಂತನೆ ಇದೆ ಎಂದು ಮಾಹಿತಿ ನೀಡಿದರು.

ಮೀನುಗಾರರಿಗೆ ನೀಡಲಾಗುತ್ತಿದ್ದ ವಾರ್ಷಿಕ ಡಿಸೇಲ್‌ ಪ್ರಮಾಣವು 1.50 ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗೆ ಹೆಚ್ಚಳ ಮಾಡುವ ಬಗ್ಗೆ ಬಜೆಟ್‌ನಲ್ಲಿ ತಿಳಿಸಲಾಗಿದೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು. ಇನ್ನು, ನಿರಂತರ ಮನವಿ ಮಾಡಿದರೂ ಕೇಂದ್ರ ಸರ್ಕಾರ ವಾರ್ಷಿಕ ಸೀಮೆ ಎಣ್ಣೆ ಹಂಚಿಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮಾಸಿಕ 200 ಲೀಟರ್ ವೈಟ್ ಪೆಟ್ರೋಲ್‌ ಅನ್ನು ಲೀಟರ್‌ಗೆ 35 ರೂ. ನಂತೆ ಸಬ್ಸಿಡಿ ದರದಲ್ಲಿ 10 ತಿಂಗಳ ಕಾಲ ವಿತರಿಸಲಿದ್ದು, 300 ಲೀಟರ್ ವರೆಗೆ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...