ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರಾಗಿ ಸೋದರಳಿಯ ಆಕಾಶ್ ಆನಂದ್‌ರನ್ನು ಮೂರನೇ ಬಾರಿಗೆ ನೇಮಿಸಿದ ಮಾಯಾವತಿ

Date:

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿದ ತಿಂಗಳುಗಳ ನಂತರ ಮತ್ತೆ ಅವರನ್ನು ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಿದ್ದಾರೆ. ಇಂದು (ಮೇ 18) ದೆಹಲಿಯ ಲೋಧಿ ರಸ್ತೆಯಲ್ಲಿರುವ ಬಿಎಸ್‌ಪಿ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪ್ರಮುಖ ರಾಷ್ಟ್ರೀಯ ಸಮಸ್ಯೆಗಳು ಮತ್ತು ಸಾಂಸ್ಥಿಕ ವಿಷಯಗಳ ಬಗ್ಗೆ ಚರ್ಚಿಸಲು ಹಿರಿಯ ನಾಯಕರು, ರಾಜ್ಯ ಪ್ರತಿನಿಧಿಗಳು ಮತ್ತು ಸಂಯೋಜಕರು ಸೇರಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಆಕಾಶ್ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಾರೆ ಎಂದು ನಿರ್ಧರಿಸಲಾಗಿದೆ.

ಇದನ್ನು ಓದಿದ್ದೀರಾ? ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಆಕಾಶ್ ಆನಂದ್ ವಜಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಾರಿ ಆಕಾಶ್ ಆನಂದ್ ಪಕ್ಷದ ಮತ್ತು ಪಕ್ಷದ ಸೈದ್ಧಾಂತಿಕ ಅಡಿಪಾಯವನ್ನು ಬಲಪಡಿಸುವ ಚಳುವಳಿಯ ಹಿತದೃಷ್ಟಿಯಿಂದ ಎಚ್ಚರಿಕೆಯಿಂದ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಆಶಿಸಲಾಗಿದೆ” ಎಂದು ಬಿಎಸ್‌ಪಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಾರಿ ಮಾಯಾವತಿ ಅವರು ಮೂವರು ರಾಷ್ಟ್ರೀಯ ಸಂಯೋಜಕರನ್ನು ನೇಮಿಸಿದ್ದಾರೆ. ರಾಮ್ ಜಿ ಗೌತಮ್, ರಣಧೀರ್ ಬೆನಿವಾಲ್ ಮತ್ತು ರಾಜಾ ರಾಮ್ ವರದಿಯಾಗಿದೆ.

ಇನ್ನು ಈ ಹಿಂದೆ ಮಾರ್ಚ್ 3ರಂದು ಮಾಯಾವತಿ, ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಹೊರಹಾಕಿದ್ದರು. ಅದಾದ ಕೇವಲ ನಲವತ್ತು ದಿನಗಳಲ್ಲಿ, ಏಪ್ರಿಲ್ 13ರಂದು ಆಕಾಶ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಳಿಕ ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿದ್ದರು.

ಆಕಾಶ್ ಅವರನ್ನು ಯಾರಿಂದಲೂ ಪ್ರಭಾವಿತರಾಗದಂತೆ ಎಚ್ಚರಿಸಿ ಪಕ್ಷಕ್ಕೆ ಸೇರಿಸಿದ್ದರು. ಆಕಾಶ್ ಆನಂದ್ ತನ್ನ ಮಾವನ ಮಾತುಗಳಿಗೆ ಮಣಿಯುತ್ತಿಲ್ಲ ಎಂದು ಭರವಸೆ ನೀಡಿದ ಬಳಿಕ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ” ಎಂದು ಹೇಳಿದ್ದರು.

ಹಾಗೆಯೇ ಅದಾದ ಬಳಿಕ ಮಾಯಾವತಿ 2023ರಲ್ಲಿ ಆಕಾಶ್ ಆನಂದ್ ಅವರನ್ನು ತನ್ನ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದರು. ಇದಾದ ಒಂದು ವರ್ಷದ ನಂತರ ಮಾಯಾವತಿ, ಆಕಾಶ್ ಅವರನ್ನು ಪಕ್ಷದಿಂದ ಹೊರಹಾಕಿದರು. ಪ್ರಬುದ್ಧತೆ ಇಲ್ಲ ಎಂದು ಕಾರಣ ನೀಡಿದ್ದರು.

“ನಾನು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕರು ಮತ್ತು ಅವರ ಉತ್ತರಾಧಿಕಾರಿ ಎಂದು ಘೋಷಿಸಿದ್ದೆ. ಆದರೆ ಪಕ್ಷ ಮತ್ತು ಚಳವಳಿಯ ಹಿತದೃಷ್ಟಿಯಿಂದ ಅವರು ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ಅವರನ್ನು ವಜಾಗೊಳಿಸಲಾಗುತ್ತಿದೆ” ಎಂದು ಹೇಳಿದ್ದರು. ಒಂದು ತಿಂಗಳ ನಂತರ ಆಂತರಿಕ ಹೊಂದಾಣಿಕೆ ಬಳಿಕ ಆಕಾಶ್ ಅವರನ್ನು ಮತ್ತೆ ಸೇರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...