ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಮಾಯಾವತಿ ವಾಗ್ದಾಳಿ

Date:

ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ. “ದಲಿತರು ಮತ್ತು ಒಬಿಸಿಗಳಿಗೆ ಮೀಸಲಾತಿ ಸೇರಿದಂತೆ ಅವರ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸುವ ಕರಾಳ ಇತಿಹಾಸವನ್ನು ಕಾಂಗ್ರೆಸ್ ಮರೆತಿದೆ” ಎಂದು ಆರೋಪಿಸಿದ್ದಾರೆ.

ಮುಂಬರುವ ಜನಗಣತಿ ಕಾರ್ಯದಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ. ಈ ವಿಚಾರದಲ್ಲಿ ಬಿಜೆಪಿ ವಿರುದ್ಧವೂ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಕೂಡ ಅಷ್ಟೇನೂ ಕಡಿಮೆಯಲ್ಲ. ಜಾತಿ ಜನಗಣತಿ ನಡೆಸುವ ಬಗ್ಗೆ ಸಾರ್ವಜನಿಕ ಒತ್ತಡಕ್ಕೆ ಮಣಿಯಬೇಕಾಯಿತು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಂವಿಧಾನ ಬದಲಾವಣೆಯ ಆತಂಕ; ‘ಬಿಜೆಪಿ-ಎನ್‌ಡಿಎ’ಯಿಂದ ದೂರ ಸರಿಯುತ್ತಿದೆ ದಲಿತ ಸಮುದಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಯಾವತಿ ತನ್ನ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿದ್ದಾರೆ. “1931 ರ ನಂತರ ಮತ್ತು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮನ್ನಣೆ ಪಡೆಯುವ ಆತುರದಲ್ಲಿ, ಕಾಂಗ್ರೆಸ್ ಕೋಟ್ಯಂತರ ದಲಿತರು ಮತ್ತು ಒಬಿಸಿಗಳ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಂಡ ಇತಿಹಾಸದಲ್ಲಿ ತನ್ನ ಒಂದು ಕರಾಳ ಅಧ್ಯಾಯವಿದೆ ಎಂಬುದನ್ನು ಮರೆತಿದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಅಧಿಕಾರ ಕಳೆದುಕೊಂಡ ನಂತರ ದಲಿತರು ಮತ್ತು ಒಬಿಸಿಗಳ ಬಗ್ಗೆ ಕಾಂಗ್ರೆಸ್‌ಗೆ ಹೊಸದಾಗಿ ಕಂಡುಬಂದಿರುವ ಪ್ರೀತಿಯು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ. ಇದು ಅವಕಾಶವಾದಿ ರಾಜಕೀಯವೇ ಹೊರತು ಬೇರೇನೂ ಅಲ್ಲ” ಎಂದು ಆರೋಪಿಸಿದ್ದಾರೆ.

“ದಲಿತರು ಮತ್ತು ಒಬಿಸಿಗಳ ಮೇಲಿನ ಈ ಪ್ರೀತಿ ನಿಜವಾದದ್ದಲ್ಲ, ಬದಲಾಗಿ ಮತದಾರರನ್ನು ಓಲೈಸಲು ಉದ್ದೇಶದಿಂದ ಮಾಡುವ ರಾಜಕೀಯ ವಂಚನೆಯಾಗಿದೆ. ಮೀಸಲಾತಿಯನ್ನು ನಿಷ್ಪರಿಣಾಮಕಾರಿಯನ್ನಾಗಿ ಮಾಡುವ ಮೂಲಕ ಅಂತಿಮವಾಗಿ ದುರ್ಬಲಗೊಳಿಸುವ ಮತ್ತು ಕೊನೆಗೊಳಿಸುವ ಅವರ ದುಷ್ಟ ಉದ್ದೇಶವನ್ನು ಯಾರು ಮರೆಯಲು ಸಾಧ್ಯ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ಮೀಸಲಾತಿಯ ಸಾಂವಿಧಾನಿಕ ಉದ್ದೇಶಗಳನ್ನು ದುರ್ಬಲಗೊಳಿಸುವ ವಿಷಯದಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಕಡಿಮೆಯೇನಿಲ್ಲ ಎಂದು ಬಿಎಸ್‌ಪಿ ನಾಯಕಿ ಹೇಳಿದ್ದಾರೆ. “ವಾಸ್ತವವಾಗಿ, ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಬದಿಗಳಾಗಿವೆ. ಜನರ ಒತ್ತಡ ಮತ್ತು ಮತ ರಾಜಕೀಯದಿಂದಾಗಿ, ಬಿಜೆಪಿಯು ಜಾತಿ ಜನಗಣತಿ ನಡೆಸುವ ಜನರ ಬೇಡಿಕೆಯ ಮುಂದೆ ತಲೆಬಾಗಬೇಕಾಯಿತು. ಇದು ಸ್ವಾಗತಾರ್ಹ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಬಾಬಾಸಾಹೇಬ್ ಡಾ.ಭೀಮ್‌ರಾವ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡುವುದನ್ನು ವಿಳಂಬ ಮಾಡುವುದರಿಂದ ಹಿಡಿದು 340ನೇ ವಿಧಿಯ ಅಡಿಯಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುವ ಬಗ್ಗೆ ಅವರ ಜಾತಿವಾದಿ ಮತ್ತು ಪ್ರತಿಕೂಲ ನಿಲುವಿನವರೆಗೆ, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ವಿಧಾನವು ತಾರತಮ್ಯದಿಂದ ಕೂಡಿದೆ. ಆದರೆ ಮತ ರಾಜಕೀಯವು ಮುಂದುವರೆದಿದೆ. ಜನರು ಜಾಗರೂಕರಾಗಿರಬೇಕು” ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...