ಮುಂಗಾರು ಸಂದರ್ಭದಲ್ಲಿ ಕಡಲ ಕೊರೆತ ಆಗದಂತೆ ಕ್ರಮ: ಸಚಿವ ಮಂಕಾಳ ವೈದ್ಯ

Date:

  • ಮೀನುಗಾರಿಕೆ ಹಾಗೂ ಬಂದರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ
  • ವಿಧಾನಸೌಧದಲ್ಲಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ

ಮಂಗಾರು ಸಂದರ್ಭದಲ್ಲಾಗುವ ಕಡಲ ಕೊರೆತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.

ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಂದರು ಪ್ರದೇಶಗಳಲ್ಲಿ ಕಡಲ ಕೊರೆತ ಹೆಚ್ಚಾಗುತ್ತಿದೆ. ಆ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“ಇಂದು (ಜೂನ್ 12) ಮೀನುಗಾರಿಕೆ ಮತ್ತು ಬಂದರು ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ಇಲಾಖೆ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಮುಂದೆ ಮೀನುಗಾರರು ಹಾಗೂ ಸಮಸ್ಯೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೀನುಗಾರರ ಸಮಸ್ಯೆ ಬಗೆಹರಿಸೋ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುತ್ತೇವೆ. ರಾಜ್ಯದಲ್ಲಿ 300 ಕಿ.ಮೀ ದೂರ ಕಡಲ ತೀರ ವಿಸ್ತರಿಸಿದೆ. ಎಲ್ಲೆಲ್ಲಿ ಹೆಚ್ಚು ಕಡಲ ಕೊರೆತ ಇದೆಯೋ ಆ ಜಾಗಗಳನ್ನು ಗುರುತಿಸುವ ಕೆಲಸವಾಗುತ್ತಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಸಣ್ಣ ನೀರಾವರಿ ಇಲಾಖೆಯಲ್ಲಿ ಅಕ್ರಮದ ಆರೋಪ; ವರದಿ ಕೇಳಿದ ಸಚಿವ ಬೋಸರಾಜು

ಕಾರವಾರ, ಮಲ್ಪೆ, ಬಂದರಿನ ಕಾರ್ಯ ಅರ್ಧಕ್ಕೆ ನಿಂತಿದೆ. ಹೀಗೆ ಪೂರ್ತಿ ಆಗದೆ ಇರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವ ಕೆಲಸ ಮಾಡುತ್ತೇವೆ” ಎಂದ ಅವರು, ಕಡಲ ತಡಿಗಳಲ್ಲಿ ಪ್ರವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಇನ್ನು ಈ ಬಾರಿ ತಮ್ಮ ಇಲಾಖೆಗೆ ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇದೆ ಎಂದ ಸಚಿವರು, 500 ಕೋಟಿ ತಮ್ಮ ಇಲಾಖೆಗೆ ಬರಬಹುದು ಎಂದು ಅಂದಾಜಿಸಿದರು. ಮುಂದುವರೆದು ಮಾತನಾಡಿದ ಅವರು, “ಉತ್ತರ ಕನ್ನಡದಲ್ಲಿ ಮೊದಲ ಸಭೆ ಮಾಡಿದ್ದೇನೆ. ಇಲ್ಲಿನ ಜನರ ಬೇಡಿಕೆಯಂತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿಕೊಡುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...