ಮಾಧ್ಯಮದವರಿಗೆ ಪ್ರಿಯಾಂಕ್ ಖರ್ಗೆ ಮಾರ್ಮಿಕ ಪ್ರಶ್ನೆಗಳು

Date:

ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ ‘ಪಾಕಿಸ್ತಾನ್ ಜಿಂದಾಬಾದ್’ ಎನ್ನುವ ಶಬ್ದ ಸದ್ದು ಮಾಡುತ್ತದೆ. ಮಾಧ್ಯಮಗಳು ಅದನ್ನೇ ದೊಡ್ಡ ಸುದ್ದಿ ಮಾಡುತ್ತಿವೆ. ಮಾಧ್ಯಮ ಜಾಗೃತವಾಗಬೇಕು. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಬೇಕು. ಅದನ್ನು ಬಿಟ್ಟು, ಈ ರೀತಿ ಭಜನೆಗೆ ಸೀಮಿತವಾಗಬಾರದು ಎಂದು ಬಿಜೆಪಿ ಮತ್ತು ಮಾಧ್ಯಮಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್ ಹುಸೇನ್ ಅವರು ಗೆಲುವು ಸಾಧಿಸಿದ್ದಾರೆ. ಅವರ ಗೆಲುವಿನ ಸಂಭ್ರದ ವೇಳೆ ಬೆಂಬಲಿಗರು ‘ನಾಸಿರ್ ಸಾಬ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ. ಆದರೆ, ಅದನ್ನ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆಂದು ಕೆಲ ಮಾಧ್ಯಮಗಳು ಮತ್ತು ಬಿಜೆಪಿ ಅಪಪ್ರಚಾರ ಮಾಡಿದ್ದು, ವಿವಾದ ಸೃಷ್ಠಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, “ಅಕಸ್ಮಾತ್ ಅಲ್ಲಿ ‘ಪಾಕಿಸ್ತಾನ್’ ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ? ಹಾಗೆ ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ, ಆತನತ್ತ ಗಮನ ಹರಿಸುತ್ತಿದ್ದರು. ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು. ಆತನ ಮೇಲೆ ಮುಗಿಬೀಳುತ್ತಿದ್ದರು. ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸಲಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ‘ನಾಸೀರ್ ಸಾಬ್ ಝಿಂದಾಬಾದ್’ ಘೋಷಣೆಯನ್ನು ‘ಪಾಕಿಸ್ತಾನ್ ಝಿಂದಾಬಾದ್’ ಎಂದು ತಿರುಚಿದ ಮಾಧ್ಯಮಗಳು

“ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ. ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು. ಆದರೆ, ಆ ಘೋಷಣೆ ಕೂಗವ ವೇಳೆ ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಗಿಲ್ಲ. ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ, ಅಲ್ಲಿನ ಪತ್ರಕರ್ತರ ‘ದೇಶಭಕ್ತಿ’ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...