ಮೋದಿಗೆ ಭಾರತದಲ್ಲಿ ಪತ್ರಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸಲು ಹೇಳಿ: ಬೈಡನ್‌ಗೆ ಸಿಪಿಜೆ ಒತ್ತಾಯ

Date:

ಭಾರತದಲ್ಲಿ ಪತ್ರಕರ್ತರ ಮೇಲಿನ ಬೆದರಿಕೆ, ದಬ್ಬಾಳಿಕೆಗಳನ್ನು ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೆ ಅಮೆರಿಕದ ಮಾಧ್ಯಮ ವೀಕ್ಷಣಾ ಸಂಸ್ಥೆ (ಸಿಪಿಜೆ) ಒತ್ತಾಯಿಸಿದೆ.

ಮೋದಿಯವರ ಅಧಿಕೃತ ಅಮೆರಿಕ ಭೇಟಿಯ ಮೊದಲು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸಿಪಿಜೆ, “ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಆದರೂ ಇದು ಮಾಧ್ಯಮಗಳಿಗೆ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದಾಗಿದೆ” ಎಂದು ಮಾಧ್ಯಮ ವೀಕ್ಷಣಾ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ಬುಧವಾರ (ಜೂನ್‌ 21) ವಾಷಿಂಗ್ಟನ್ ಪೋಸ್ಟ್‌ ಪತ್ರಿಕೆಯಲ್ಲಿ ಸಿಪಿಜೆ ಮತ್ತು ಅದರ ಪಾಲುದಾರ ಸಂಸ್ಥೆಗಳು ಪ್ರಕಟಿಸಿದ ಪೂರ್ಣ ಪುಟದ ಜಾಹೀರಾತಿನಲ್ಲಿ, ಭಾರತದಲ್ಲಿ ಪತ್ರಕರ್ತರು ದೈಹಿಕ ಹಿಂಸೆ, ಕಿರುಕುಳ, ಸುಳ್ಳು ಮೊಕದ್ದಮೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ದ್ವೇಷದ ಪ್ರಚಾರಗಳನ್ನು ಹೇಗೆ ಎದುರಿಸುತ್ತಿದ್ದಾರೆ ಎಂಬುದನ್ನು ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲಿ ಮಾಧ್ಯಮಗಳನ್ನು ದಮನಗೊಳಿಸಲಾಗುತ್ತಿದೆ. ವ್ಯವಸ್ಥೆಯ ವಿರುದ್ಧ ತಮ್ಮ ವೃತ್ತಿ ನಿರ್ವಹಿಸಿದ ಕಾರಣ ದ್ವೇಷವನ್ನು ಸಾಧಿಸಲಾಗುತ್ತಿದೆ. ಅಲ್ಲದೆ ಪ್ರತೀಕಾರವಾಗಿ ನಿರಂಕುಶವಾಗಿ ಬಂಧಿಸಲ್ಪಟ್ಟಿರುವ ಆರು ಪತ್ರಕರ್ತರನ್ನು ಬಿಡುಗಡೆ ಮಾಡಲು ಮೋದಿಯವರನ್ನು ಒತ್ತಾಯಿಸಲು ಸಿಪಿಜೆ ಅಧ್ಯಕ್ಷ ಬೈಡನ್‌ ಅವರಿಗೆ ತಿಳಿಸಲಾಗಿದೆ.

“2014 ರಿಂದ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ಭಾರತದ ಮಾಧ್ಯಮಗಳ ಮೇಲೆ ದಬ್ಬಾಳಿಕೆ ಹೆಚ್ಚಾಗುತ್ತಿದೆ. ದೈಹಿಕ ಹಿಂಸೆ, ಕಿರುಕುಳ, ಸುಳ್ಳು ಮೊಕದ್ದಮೆಗಳು ಮತ್ತು ಆನ್‌ಲೈನ್ ದ್ವೇಷದ ಪ್ರಚಾರಗಳು ಸೇರಿದಂತೆ ಭಾರತದಲ್ಲಿ ಪತ್ರಕರ್ತರು ಹೆಚ್ಚು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಮುಕ್ತ ಮತ್ತು ಸ್ವತಂತ್ರ ಮಾಧ್ಯಮವನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಪತ್ರಕರ್ತರು ಸ್ವತಂತ್ರವಾಗಿ ಹಾಗೂ ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಅಮೆರಿಕ ಅಧ್ಯಕ್ಷರು ಇದನ್ನು ಚರ್ಚೆಯ ಪ್ರಮುಖ ಅಂಶವನ್ನಾಗಿ ತೆಗೆದುಕೊಳ್ಳುತ್ತಾರೆಂದು ನಾವು ನಿರೀಕ್ಷಿಸುತ್ತೇವೆ” ಎಂದು ಸಿಪಿಜೆ ಅಧ್ಯಕ್ಷ ಜೋಡಿಯೆ ಗಿನ್ಸ್ಬರ್ಗ್ ತಿಳಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ? ನಾಳಿನ ವಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಭಾಗವಹಿಸದಿರಲು ಮಾಯಾವತಿ ನಿರ್ಧಾರ

ಅಕ್ರಮವಾಗಿ ಬಂಧಿಸಿರುವ ಆಸಿಫ್ ಸುಲ್ತಾನ್, ಗೌತಮ್ ನವ್ಲಾಖಾ, ಸಜಾದ್ ಗುಲ್, ಫಹಾದ್ ಷಾ, ರೂಪೇಶ್ ಕುಮಾರ್ ಸಿಂಗ್ ಮತ್ತು ಇರ್ಫಾನ್ ಮೆಹ್ರಾಜ್ ಎಂಬ ಆರು ಪತ್ರಕರ್ತರ ಛಾಯಾಚಿತ್ರಗಳನ್ನು ಜಾಹೀರಾತು ಪ್ರಮುಖವಾಗಿ ತೋರಿಸಲಾಗಿದೆ.

ಈ ವಾರದ ಆರಂಭದಲ್ಲಿ, ಅಮೆರಿಕದ ಸೆನೆಟರ್‌ಗಳು ಮತ್ತು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ಸದಸ್ಯರು ಸೇರಿದಂತೆ 75 ಡೆಮೋಕ್ರಾಟ್‌ಗಳ ಗುಂಪು ಅಧ್ಯಕ್ಷ ಬೈಡನ್‌ಗೆ ಪತ್ರ ಬರೆದು, ಪ್ರಧಾನಿಯೊಂದಿಗಿನ ಅವರ ಚರ್ಚೆಯ ಸಮಯದಲ್ಲಿ ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ, ಇಂಟರ್ನೆಟ್ ಪ್ರವೇಶ ಮತ್ತು ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದ ಕಳವಳಗಳನ್ನು ತಿಳಿಸುವಂತೆ ಒತ್ತಾಯಿಸಿತ್ತು.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 21 ರಿಂದ 24 ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದು, ಈ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭೇಟಿ ಸೇರಿದಂತೆ ಹಲವು ವಾಣಿಜ್ಯ ಒಪ್ಪಂದಗಳಲ್ಲಿ ಭಾಗಿಯಾಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...