ಮಣಿಪುರ ಸಿಎಂ ನಿವಾಸಕ್ಕೆ ದಾಳಿ ಯತ್ನ; ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು!

Date:

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತೆ ಹೆಚ್ಚಾಗಿದ್ದು, ನಿರಂತರ ಸಾವು ನೋವುಗಳು ಸಂಭವಿಸುತ್ತಿದೆ. ಶನಿವಾರ ಸಿಎಂ ಬಿರೇನ್ ಸಿಂಗ್ ನಿವಾಸಕ್ಕೆ ಪ್ರತಿಭಟನಕಾರರು ದಾಳಿ ನಡೆಸಲು ಯತ್ನಿಸಿದ್ದಾರೆ. ಬಳಿಕ ಮಣಿಪುರದಲ್ಲಿ ಬಂಡುಕೋರರ ವಿರುದ್ದ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು ನೀಡಿದ್ದಾರೆ.

ಇತ್ತೀಚೆಗೆ ಬಂಡುಕೋರರು ಸಿಆರ್‌ಪಿಎಫ್ ಶಿಬಿರ ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿತ್ತು. 10 ಕುಕಿ ಬಂಡುಕೋರರ ಹತ್ಯೆಯಾಗಿತ್ತು. ಈ ವೇಳೆ ನಿರಾಶ್ರಿತರ ಕೇಂದ್ರದಿಂದ ಆರು ಮಂದಿ ನಾಪತ್ತೆಯಾಗಿದ್ದರು.

ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಆರು ಜನರ ಮೃತದೇಹಗಳು ಜೀರಿ ನದಿಯಲ್ಲಿ ಪತ್ತೆಯಾಗಿದೆ. ಇದಾದ ಬಳಿಕ ಮಣಿಪುರದಲ್ಲಿ ಹಿಂಸಾಚಾರ, ಪ್ರತಿಭಟನೆಗಳು ಮತ್ತಷ್ಟು ಹೆಚ್ಚಾಗಿದೆ. ಪ್ರತಿಭಟನಾಕಾರರು ಸಿಎಂ ಸಿವಾಸ ಸೇರಿದಂತೆ ಹಲವು ಸಚಿವರುಗಳು, ಶಾಸಕರಗಳ ನಿವಾಸಕ್ಕೆ ದಾಳಿ ಯತ್ನ ಮಾಡಿದ್ದಾರೆ. ಇದಾದ ಬಳಿಕ ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಶನಿವಾರ ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿಂಗ್ ಅವರ ಅಳಿಯ, ಬಿಜೆಪಿ ಶಾಸಕ ಆರ್‌ಕೆ ಇಮೋ ಸಿಂಗ್ ಮನೆಗೂ ದಾಳಿ ನಡೆದಿದೆ. ಪ್ರತಿಭಟನಾಕಾರರು ಶಾಸಕರ ಮನೆಯನ್ನು ಧ್ವಂಸಗೊಳಿಸಿದ್ದು, ಬೆಂಕಿ ಹಚ್ಚಿದ್ದಾರೆ.

ಪೌರಾಡಳಿತ ಸಚಿವ ವೈ ಖೇಮಚಂದ್ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಎಲ್ ಸುಸಿಂದ್ರೋ ಸಿಂಗ್ ಅವರ ಮನೆಗಳ ಮೇಲೆ ಇದೇ ರೀತಿಯ ದಾಳಿಗಳು ನಡೆದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಪಂ ರಂಜನ್ ಅವರ ನಿವಾಸಕ್ಕೂ ಮುತ್ತಿಗೆ ಹಾಕಲಾಗಿದೆ. ರಾಜ್ಯ ಸರ್ಕಾರ ಬೇಡಿಕೆ ಪೂರೈಸದಿದ್ದರೆ ರಾಜೀನಾಮೆ ನೀಡುವುದಾಗಿ ರಂಜನ್ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಈಗಾಗಲೇ ಮಣಿಪುರದ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಹಾಗೆಯೇ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...