ಬಿಜೆಪಿಯವರನ್ನು ದ್ವೇಷಿಸಬೇಡಿ; ಅವರು ನಮ್ಮ ಸಹೋದರರು: ಜೈಲಿನಿಂದ ಕೇಜ್ರಿವಾಲ್ ಸಂದೇಶ

Date:

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬಳಿಕ ಮೊದಲ ಬಾರಿಗೆ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ವಿಡಿಯೋ ಸಂದೇಶವನ್ನು ನೀಡಿದ್ದು, ಜೈಲಿನಿಂದಲೇ ಕೇಜ್ರಿವಾಲ್ ಬಹಿರಂಗ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ಪತಿ ಕೇಜ್ರಿವಾಲ್ ಅವರು ಜೈಲಿನಿಂದ ಕಳುಹಿಸಿದ್ದ ಸಂದೇಶವನ್ನು ಓದಿದ ಅವರು, ಈ ಸಂದೇಶದಲ್ಲಿ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

ಕೇಜ್ರಿವಾಲ್‌ ಅವರು ತಮ್ಮ ಪತ್ರದಲ್ಲಿ, “ಯಾವ ಕಂಬಿಯೂ ನನ್ನನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ. ನಾನು ಶೀಘ್ರದಲ್ಲೇ ಹೊರಗೆ ಬಂದು ನನ್ನ ಭರವಸೆಗಳನ್ನೆಲ್ಲ ಈಡೇರಿಸುತ್ತೇನೆ. ಜೊತೆಗೆ ಬಿಜೆಪಿಯವರನ್ನು ದ್ವೇಷಿಸಬೇಡಿ. ಅವರೆಲ್ಲರೂ ನಮ್ಮ ಸಹೋದರ-ಸಹೋದರಿಯರು ಎಂದು ಮನವಿ ಮಾಡಿಕೊಂಡಿದ್ದಾರೆ” ಎಂದು ಪತ್ನಿ ಸುನೀತಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಟ್ಯಂತರ ಜನರ ಪ್ರಾರ್ಥನೆ ಕೇಜ್ರಿವಾಲ್ ಜೊತೆಗಿದೆ. ದೆಹಲಿಯ ಜನರು ದೇವಸ್ಥಾನಕ್ಕೆ ಹೋಗಿ ಕೇಜ್ರಿವಾಲ್‌ಗಾಗಿ ಪ್ರಾರ್ಥಿಸಬೇಕು. ಕೇಜ್ರಿವಾಲ್ ಅವರು ನೀಡಿದ ಪ್ರತಿ ಭರವಸೆಯನ್ನು ಉಳಿಸಿಕೊಂಡಿದ್ದಾರೆ” ಎಂದು ಸಂದೇಶದಲ್ಲಿ ಸುನೀತಾ ಕೇಜ್ರಿವಾಲ್ ಓದಿದ್ದಾರೆ.

“ನಾನು ಜೈಲಿಗೆ ಹೋಗಿರುವುದರಿಂದ ಸಮಾಜ ಕಲ್ಯಾಣ ಮತ್ತು ಸಾರ್ವಜನಿಕ ಕಲ್ಯಾಣದ ಕೆಲಸಗಳು ನಿಲ್ಲಬಾರದು ಎಂದು ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿ ನಾನು ಮನವಿ ಮಾಡುತ್ತೇನೆ. ಬಿಜೆಪಿಯವರನ್ನು ದ್ವೇಷಿಸಬೇಡಿ. ಅವರು ನಮ್ಮ ಸಹೋದರ-ಸಹೋದರಿಯರು. ನಾನು ಶೀಘ್ರದಲ್ಲಿ ಮರಳುತ್ತೇನೆ” ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

“ಭಾರತದ ಒಳಗೆ ಮತ್ತು ಹೊರಗೆ ಅನೇಕ ಶಕ್ತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ. ನಾವು ಜಾಗರೂಕರಾಗಿರಬೇಕು. ಈ ಶಕ್ತಿಗಳನ್ನು ಗುರುತಿಸಬೇಕು ಮತ್ತು ಅವುಗಳನ್ನು ಸೋಲಿಸಬೇಕು. ಕೇಜ್ರಿವಾಲ್ ಕಂಬಿ ಹಿಂದೆ ಬಿದ್ದಿದ್ದಾರೆ ಎಂದು ದೆಹಲಿಯ ಮಹಿಳೆಯರು ಯೋಚಿಸುತ್ತಿರಬಹುದು. 1,000 ಸಿಗುತ್ತದೋ ಇಲ್ಲವೋ ಯಾರಿಗೆ ಗೊತ್ತು ಅಂತಾ ಹೇಳುತ್ತಿರಬಹುದು. ಆದರೆ ಅವರಿಗೆ ನಾನು ಈ ಮೂಲಕ ಹೇಳುತ್ತಿರುವುದೇನೆಂದರೆ ಅವರ ಸಹೋದರ, ಮಗನನ್ನು ನಂಬುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ. ಯಾವ ಕಂಬಿಯೂ ನನ್ನನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ. ನಾನು ಶೀಘ್ರದಲ್ಲೇ ಹೊರಗೆ ಬಂದು ನನ್ನ ಭರವಸೆಗಳನ್ನೆಲ್ಲ ಈಡೇರಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನದ ಪ್ರತಿ ಕ್ಷಣವೂ ದೇಶ ಸೇವೆಗೆ ಮುಡಿಪಾಗಿದೆ. ನನ್ನ ಪ್ರತಿಯೊಂದು ರಕ್ತದ ಹನಿಯೂ ದೇಶಕ್ಕಾಗಿ ಸಮರ್ಪಿತವಾಗಿದೆ. ಭಾರತವನ್ನು ವಿಶ್ವದ ಬಲಿಷ್ಠ ಮತ್ತು ಶ್ರೇಷ್ಠ ದೇಶವಾಗಿ ರೂಪಿಸಬೇಕಿದೆ. ದೇಶವನ್ನು ದುರ್ಬಲಗೊಳಿಸಲು ಆಂತರಿಕ ಮತ್ತು ಬಾಹ್ಯ ಶಕ್ತಿಗಳು ಪ್ರಯತ್ನಿಸುತ್ತಿದ್ದು, ಇವುಗಳ ವಿರುದ್ಧ ಹೋರಾಡಬೇಕಾಗಿದೆ” ಎಂದು ಕೇಜ್ರಿವಾಲ್ ತಮ್ಮ ಸಂದೇಶದಲ್ಲಿ ಕೇಜ್ರಿವಾಲ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾ.28ರವರೆಗೆ ED ಕಸ್ಟಡಿಗೆ

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ದೆಹಲಿ ಮುಖ್ಯಮಂತ್ರಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಅರವಿಂದ್‌ ಕೇಜ್ರಿವಾಲ್‌ ಹಿಂಪಡೆದಿದ್ದರು. ಅದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ 6 ದಿನಗಳ ಕಾಲ ಇ.ಡಿ ವಶಕ್ಕೆ ವಹಿಸಿ ಆದೇಶ ಹೊರಡಿಸಿದೆ. ಕೇಜ್ರಿವಾಲ್ ಅವರನ್ನು ಮಾರ್ಚ್ 28ರಂದು ಮಧ್ಯಾಹ್ನ 2 ಗಂಟೆಗೆ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...