ಮೈಕ್ರೋ ಫೈನಾನ್ಸ್ ಹಾವಳಿ, ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ

Date:

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಅತಿಯಾಗಿದ್ದು, ಮೈಕ್ರೊ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಹೊಸದಾದ ಮಸೂದೆ ತರಲು ಒಪ್ಪಿಗೆ ಪಡೆಯಲಾಗಿದ್ದು, ಅದನ್ನು ಸುಗ್ರೀವಾಜ್ಞೆಯಾಗಿ ಜಾರಿಗೊಳಿಸಲು ರಾಜ್ಯಪಾಲರ ಬಳಿ ಅಂಕಿತ ಪಡೆಯಲು ಸಂಪುಟ ಸಭೆ ನಿರ್ಧರಿಸಿದೆ.

ಕೆಲವು ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ಮೈಕ್ರೋ ಫೈನಾನ್ಸ್ ವಿಚಾರವಾಗಿ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ಮುಖ್ಯಮಂತ್ರಿಗಳಿಗೆ ನಿರ್ಣಯ ಕೈಗೊಳ್ಳುವ ಪರಮಾಧಿಕಾರ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೈನಾನ್ಸ್​​​ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಅಮಾನವೀಯವಾಗಿ ಮೈಕ್ರೋ ಪೈನಾನ್ಸ್​ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶ ಚರ್ಚಿಸಿದ್ದೇವೆ. ಇಂದು ಸಂಜೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಆಗ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ” ಎಂದು ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ತಿಳಿಸಿದರು.

“ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ. ಕೆಲವು ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ. ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...