ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ: ಹೆಚ್ ಡಿ ಕುಮಾರಸ್ವಾಮಿ ಆಗ್ರಹ

Date:

ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್‌ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಬೆಂಗಳೂರಲ್ಲಿ ಈ ಬಗ್ಗೆ ಗುರುವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ನಾಗರಿಕ ಸರಕಾರ ಎನ್ನುವುದು, ಗೃಹ ಸಚಿವರು ಎನ್ನುವವರು ಇದ್ದಾರೆಯೇ?” ಎಂದು ಕಿಡಿಕಾರಿದರು.

“2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಕಿಡಿಗೇಡಿ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನನ್ನ ಸರಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು. ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರೋಪಾಯ ಏನು? ಎಂಬ ಬಗ್ಗೆ ನಾನು ಆಗ ಆಲೋಚನೆ ಮಾಡಿದ್ದೆ. ಆ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಆ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದೆ. ಆಮೇಲೆ ಅದು ಏನಾಯಿತು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಸರಕಾರ ಹೋದ ನಂತರ ಬಂದ ಸರ್ಕಾರಗಳು ಈ ಕಾಯ್ದೆಯ ಮಹತ್ವವನ್ನೇ ಅರಿತುಕೊಳ್ಳಲಿಲ್ಲ. ಅದರ ಪರಿಣಾಮವೇ ಮೈಕ್ರೋ ಫೈನಾನ್ಸ್ ಗಳ ಉಪಟಳ ಜಾಸ್ತಿ ಆಗಿರುವುದು. ಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಪರವಾನಗಿ ಅಥವಾ ಅನುಮತಿಯನ್ನೇ ಪಡೆಯದೇ ಕಾನೂನುಬಾಹಿರವಾಗಿ ಈ ರೀತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡಿ ಹೋಗುವ ದುಸ್ಥಿತಿ ಸೃಷ್ಟಿಯಾಗಿದೆ” ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

“ಚಾಮರಾಜನಗರ ಜಿಲ್ಲೆಯಲ್ಲಿ ಜನರು ಹಳ್ಳಿಗಳನ್ನು ಬಿಟ್ಟಿದ್ದರು. ಮನೆಗಳಿಗೆ ಬೀಗ ಹಾಕಿ ಸಾಲಗಾರರಿಂದ ತಪ್ಪಿಸಿಕೊಂಡರೆ ಸಾಕು ಎನ್ನುವ ಭೀತಿಗೆ ಸಿಲುಕಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇಪದೆ ಹೇಳುತ್ತಾರೆ, ನಾನು ಇಪ್ಪತ್ತು ಸಲವೋ ಮೂವತ್ತು ಸಲವೋ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ. ನನ್ನ ಅಧಿಕಾರ ಹೋಗಿಲ್ಲ, ಗಟ್ಟಿಯಾಗಿದ್ದೇನೆ ಎಂದು ಹೇಳುತ್ತಾರೆ. ಅವರೇನೋ ಗಟ್ಟಿಯಾಗಿದ್ದಾರೆ. ಆದರೆ, ನಿಮ್ಮನ್ನು ಮುಖ್ಯಮಂತ್ರಿ ಜಾಗದಲ್ಲಿ ಕೂರಿಸಿರುವ ಆ ಜನ ಏನಾಗಿದ್ದಾರೆ? ಅವರನ್ನು ಗಟ್ಟಿ ಮಾಡಲಿಕ್ಕೆ ಏನು ಮಾಡಿದ್ದೀರಿ?” ಎಂದು ಹರಿಹಾಯ್ದರು.

“ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಹಾಡಹಗಲೇ ಬ್ಯಾಂಕ್ ಗಳಿಗೆ ನುಗ್ಗಿ ಲೂಟಿ ಮಾಡಲಾಗುತ್ತಿದೆ. ಎಟಿಎಂ ಗಳಿಗೆ ಹಣ ತುಂಬುವ ಸಿಬ್ಬಂದಿಯನ್ನು ಗುಂಡಿಟ್ಟು ಕೊಂದು ಹಗಲಲ್ಲೇ ಹಣ ದೋಚಿ ನೆರೆ ರಾಜ್ಯಕ್ಕೆ ಪರಾರಿ ಆಗುವುದು.. ಹೀಗೆ ಅಪರಾಧ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ನನಗೇನು ಸಂಬಂಧ ಇಲ್ಲವೆಂದು ಗೃಹ ಸಚಿವರು ಹೇಳಿದರೆ ಅರ್ಥವೇನು?” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

“ಕಾನೂನುಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲಿಕ್ಕೆ ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು? ಸರಕಾರ ಅನುಮತಿ ಕೊಟ್ಟಿದೆಯಾ? ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಸರಿಯಾದ ರೀತಿಯಲ್ಲಿ ಸಾಲ ಸೌಲಭ್ಯ ನೀಡಿದರೆ ಮೈಕ್ರೋ ಫೈನಾನ್ಸ್ ಗಳ ಬಳಿಗೆ ಸಾಲಕ್ಕೆ ಏತಕ್ಕೆ ಹೋಗುತ್ತಾರೆ?” ಎಂದು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...