ಮೈಕ್ರೋ ಫೈನಾನ್ಸ್‌ ಕಿರುಕುಳ: ಸರ್ಕಾರದ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

Date:

ರಾಜ್ಯದಲ್ಲಿ ಸಾಲಗಾರರ ಮೇಲೆ ಮೈಕ್ರೋ ಫೈನಾನ್ಸ್‌ ಸಾಲ ನೀಡಿದವರ ಕಿರುಕುಳವನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ತಿರಸ್ಕರಿಸಿದ್ದಾರೆ. ಮರುಪರಿಶೀಲನೆಗೆ ಸೂಚಿಸಿದ್ದಾರೆ.

ಇತ್ತೀಚೆಗೆ, ಮೈಕ್ರೋ ಫೈನಾನ್ಸ್‌ ಹಾವಳಿ, ಕಿರುಕುಳದಿಂದಾಗಿ ಹಲವಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಗಳಾಗಿವೆ. ಅಲ್ಲದೆ, ಹೆಚ್ಚಿನ ಮಂದಿ ಊರು ತೊರೆದು ಹೋಗುತ್ತಿದ್ದಾರೆ. ಇದೆಲ್ಲವನ್ನೂ ಗಂಭೀರವಾಗಿ ಪರಿಗಣಿಸಿದ್ದ ರಾಜ್ಯದ ಕಾಂಗ್ರೆಸ್ ಸರ್ಕಾರವು, ವಿಶೇಷ ಸಚಿವ ಸಂಪುಟ ಸಭೆ ಕರೆದು, ಹಲವಾರು ನಿಯಮಗಳೊಂದಿಗೆ ಸುಗ್ರೀವಾಜ್ಞೆ ಮಸೂದೆ ರಚಿಸಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳಿಸಿತ್ತು.

ಆದರೆ, ಇದೀಗ, ರಾಜ್ಯಪಾಲರು ಹಲವು ಕಾರಣಗಳನ್ನು ಉಲ್ಲೇಖಿಸಿ ಸುಗ್ರೀವಾಜ್ಞೆಯ ಮಸೂದೆಯನ್ನು ವಾಪಸ್‌ ಕಳಿಸಿದ್ದಾರೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆ ಮಸೂದೆಯಲ್ಲಿ ಸಾಲ ಕೊಟ್ಟವರ ಬಗ್ಗೆ ಯಾವುದೇ ಕಾಳಜಿಯನ್ನು ಉಲ್ಲೇಖಿಸಲಾಗಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ವರದಿಯಾಗಿದೆ.

10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ದಂಡ ಅತಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಳಸಬಹುದಿತ್ತು ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

“ಈ ಸುಗ್ರೀವಾಜ್ಞೆಯು ಮೈಕ್ರೋ ಫೈನಾನ್ಸ್ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಇದು ಬಡವರ ಮೇಲೆಯೂ ಪರಿಣಾಮ ಬೀರುತ್ತದೆ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. ಆ ಮಸೂದೆಯನ್ನು ತಿರಸ್ಕರಿಸುವ ಮೂಲಕ ಸರ್ಕಾರದ ನಡೆಗೆ ರಾಜ್ಯಪಾಲರು ತಣ್ಣೀರು ಎರಚಿದ್ದಾರೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ನ್ಯಾಯಾಲಯ

ಮುಂದಿನ ದಿನಗಳಲ್ಲಿ ಸುಗ್ರೀವಾಜ್ಞೆ ಮಸೂದೆಯಲ್ಲಿ ಯಾವ ರೀತಿಯ ಬದಲಾವಣೆಗಳು ಅಗಲಿವೆ. ಮುಂದೆ ಏನೆಲ್ಲ ಬೆಳವಣಿಗೆಗಳು ನಡೆಯಲಿವೆ ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...