ಅಕ್ರಮವಾಗಿ ಮರ ಕಡಿದರೆ ಹತ್ತು ಪಟ್ಟು ದಂಡ, ಶಿಕ್ಷೆ ಪ್ರಮಾಣ ಹೆಚ್ಚಳ: ಸಚಿವ ಈಶ್ವರ ಖಂಡ್ರೆ ಸೂಚನೆ

Date:

ಅಕ್ರಮವಾಗಿ ಮರ ಕಡಿದರೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.

ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...