ಕೊಲೆಯಲ್ಲಿ ಹಿಂದುತ್ವ ಅಜೆಂಡ ಫಿಕ್ಸ್‌ ಮಾಡಲು ನನ್ನ ಪುತ್ರನ ವಿರುದ್ಧ ಆರೋಪ: ಎಚ್‌ ಸಿ ಮಹದೇವಪ್ಪ

Date:

  • ವೇಣುಗೋಪಾಲ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಕೊಡಿಸಲು ಯತ್ನಿಸುವೆ
  • 8 ಲಕ್ಷ ರೂ. ಪರಿಹಾರದಲ್ಲಿ ಮೊದಲ ಕಂತು 4.12 ಲಕ್ಷ ರೂ. ಕುಟುಂಬದವರಿಗೆ ನೀಡಿದ್ದೇವೆ

ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್‌ ಹತ್ಯೆ ಪ್ರಕರಣವು ಧರ್ಮ ಮತ್ತು ರಾಜಕೀಯದ ವ್ಯಾಪ್ತಿ ಎರಡಕ್ಕೂ ಬರುವುದಿಲ್ಲ. ಆದರೂ ಬಿಜೆಪಿಯವರು ನನ್ನ ಪುತ್ರ ಸುನೀಲ್ ಬೋಸ್ ಹೆಸರನ್ನು ವಿನಾಕಾರಣ ಎಳೆದು ತರುತ್ತಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಹೇಳಿದರು.

ಮೈಸೂರು ಜಿಲ್ಲೆಯ ತಿ. ನರಸೀಪುರದ ವೇಣುಗೋಪಾಲ್ ಮನೆಗೆ ಗುರುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಸಚಿವ ಎಚ್‌ ಸಿ ಮಹದೇವಪ್ಪ ಅವರು ಮಾತನಾಡಿದರು.

“ಪೊಲೀಸ್‌ ತನಿಖೆ ಸರಿ ದಾರಿಯಲ್ಲಿದೆ. ಘಟನೆಯಾದ ಕೆಲವೇ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಯವರು ಧರ್ಮದ ಬಣ್ಣ ಬಳಿಯಲು ಹೊರಟಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಲೆ ಪ್ರಕರಣದಲ್ಲಿ ಹಿಂದುತ್ವದ ಕಾರ್ಯಸೂಚಿಯನ್ನು ಹಬ್ಬಿಸುವ ಸಂಚನ್ನು ಬಿಜೆಪಿ ಮಾಡುತ್ತಿದೆ. ಈ ಆಟ ಬಹಳ ಕಾಲ ನಡೆಯುವುದಿಲ್ಲ. ಎಲ್ಲದಕ್ಕೂ ಹಿಂದುತ್ವದ ಕಾರ್ಯಸೂಚಿ ಮುಂದು ಮಾಡುವುದು ಆ ಪಕ್ಷದವರ ಚಾಳಿ. ಸುಳ್ಳನ್ನು ಸತ್ಯ ಮಾಡಲು ಆ ಪಕ್ಷದವರು ಹೊರಟಿದ್ದಾರೆ. ನನ್ನ ಮಗನ ಮೇಲೆ ಹೀಗೆ ಹಿಂದೆಯೂ ವಿನಾಕಾರಣ ಆರೋಪ ಮಾಡಿದ್ದರು” ಎಂದು ಆರೋಪಿಸಿದರು.

“ಯುವ ಬ್ರಿಗೇಡ್ ಸಂಘಟನೆ ಕಟ್ಟಿಕೊಂಡು ಹನುಮ ಜಯಂತಿಯನ್ನು ಚೆನ್ನಾಗಿಯೇ ಮಾಡಿದ್ದಾರೆ. ಅದಕ್ಕೆ ಯಾರ ಅಡ್ಡಿ ಅಥವಾ ತಕಾರರು ಇರಲಿಲ್ಲ. ಆ ಸಂಘಟನೆಯವರೇ ಬೈಕ್‌ ನಿಲುಗಡೆ ಮತ್ತು ಫೋಟೊ ಹಾಕುವ ವಿಚಾರದಲ್ಲಿ ಜಗಳವಾಡಿದ್ದಾರೆ. ಕಾರ್ಯಕ್ರಮ ಮುಗಿದ ನಂತರವೂ ಗಲಾಟೆ ಮಾಡಿಕೊಂಡಿದ್ದಾರೆ. ಆ ವೇಳೆ ಕೊಲೆಯಾಗಿದೆ” ಎಂದು ತಿಳಿಸಿದರು.

ಈ ಸುದ್ದಿಓದಿದ್ದೀರಾ? ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ: ಬಿಜೆಪಿ ವಾಗ್ದಾಳಿ

“ಇದು ದೌರ್ಜನ್ಯದ ಪ್ರಕರಣವಲ್ಲ. ಆದರೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಯಾರಾದರೂ ಈ ರೀತಿ ಕೊಲೆಯಾದರೆ 8 ಲಕ್ಷ ರೂ. ಪರಿಹಾರ ಕೊಡಬಹುದು. ಮೊದಲ ಕಂತಾಗಿ 4.12 ಲಕ್ಷ ರೂ.ಗಳನ್ನು ಈಗ ಕುಟುಂಬದವರಿಗೆ ನೀಡಿದ್ದೇವೆ. ಪ್ರಕರಣದ ದೋಷಾರೋಪ ಪಟ್ಟಿ ಸಿದ್ಧವಾದ ಮೇಲೆ ಉಳಿದ ಹಣ ನೀಡುತ್ತೇವೆ. ವೇಣುಗೋಪಾಲ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಕೊಡಿಸಲು ಪ್ರಯತ್ನಿಸುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...