ಬೆಂಗಳೂರು ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಲು ಸಚಿವ ಖಂಡ್ರೆ ಸೂಚನೆ

Date:

  • ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು
  • ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲು ಸೂಚನೆ

ಬೆಂಗಳೂರು ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೆ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಬರಗಾಲ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಸಹಜವಾಗಿಯೇ ಜನರಲ್ಲಿ ಆತಂಕ ಮೂಡಿದೆ. ಹೀಗಾಗಿ ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...