ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲು

Date:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮುಂಜಾನೆ ಅಪಘಾತಕ್ಕೀಡಾಗಿದ್ದು, ಸಚಿವೆ, ಅವರ ಸಹೋದರ ಹಾಗೂ ಕಾರು ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಜಿ ಶಿವಪ್ರಸಾದ್ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿತ್ತು. ಇದೀಗ, ಶಿವಪ್ರಸಾದ್ ಅವರು ಟ್ರಕ್‌ ಚಾಲಕನೊಬ್ಬನ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಟ್ರಕ್ ಚಾಲಕನ ವಿರುದ್ಧವೂ ಕಿತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರಕ್‌ ಚಾಲಕನ ವಿರುದ್ದ ದೂರು ನೀಡಿರುವ ಶಿವಪ್ರಸಾದ್, “ಟ್ರಕ್ ಚಾಲಕ ತಮ್ಮ ಕಾರನ್ನು ಓವರ್​ಟೇಕ್ ಮಾಡುವ ಪ್ರಯತ್ನಸಿ, ಕಾರಿಗೆ ಗುದ್ದಿದ್ದಾರೆ. ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಗೆ ಟ್ರಕ್ ಚಾಲಕನ ಅಜಾಗರೂಕ ಚಾಲನೆಯೇ ಕಾರಣ. ಕಾರಿಗೆ ಟ್ರಕ್ ಗುದ್ದಿದ್ದರಿಂದ ತಮ್ಮ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯಿತು” ಎಂದು ಆರೋಪಿಸಿದ್ದಾರೆ.

“ನಾನು ಸಚಿವರ ಸರ್ಕಾರಿ ಕಾರನ್ನು ಚಲಾಯಿಸುತ್ತಿದ್ದೆ. ಕಿತ್ತೂರು ಬಳಿಯ ಅಂಬಡಗಟ್ಟಿ ಸಮೀಪ ನಮ್ಮ ಮುಂದೆ ಲೇನ್ 1ರಲ್ಲಿ ಕಂಟೇನರ್ ಟ್ರಕ್ ಹೋಗುತ್ತಿತ್ತು. ಅದರ ಚಾಲಕ ಯಾವುದೇ ಮುನ್ಸೂಚನೆ ಕೊಡದೆ ಎಡಬದಿಗೆ ಟ್ರಕ್‌ಅನ್ನು ತಿರುಗಿಸಿದರು. ಕಾರನ್ನು ರಕ್ಷಣವೇ ಎಡಬದಿಗೆ ತೆಗೆದುಕೊಂಡರೂ, ಕಾರಿನ ಬಲಬದಿಗೆ ಟ್ರಕ್‌ ತಾಗಿತು. ಹೀಗಾಗಿ, ಕಾರು ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆಯಿತು. ಅಪಘಾತ ಎಸಗಿದ ಟ್ರಕ್ ಚಾಲಕ, ಅಪಘಾತವಾಗಿದ್ದನ್ನು ಕಂಡರೂ ವಾಹನ ನಿಲ್ಲಿಸದೇ ಹೋಗಿದ್ದಾನೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ದೂರಿನ ಆಧಾರದ ಮೇಲೆ ಅಪರಿಚಿತ ಟ್ರಕ್ ಚಾಲಕನ ವಿರುದ್ದ ಬಿಎನ್​ಎಸ್ ಕಾಯ್ದೆಯ ಸೆಕ್ಷನ್ 281, 125ಎ, 125 ಬಿ ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ 134, 187 ಅಡಿ ಪ್ರಕರಣ ದಾಖಲಾಗಿದೆ. ಕಿತ್ತೂರು ಪೊಲೀಸ್‌ ಠಾಣೆಯ ಪೊಲೀಸರು ತನಿಖೆ ಆರಂಭಿದ್ದಾರೆ.

ಮಂಗಳವಾರ ಅಪಘಾತ ಸುದ್ದಿ ವರದಿಯಾದಾಗ, ರಸ್ತೆಯಲ್ಲಿ ನಾಯಿ ಅಡ್ಡ ಬಂದಿತ್ತು. ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಕಾರು ಚಾಲಕ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ, ಅವರು ಪೊಲೀಸರಿಗೆ ದೂರು ನೀಡಿದ್ದು, ಅಪಘಾತಕ್ಕೆ ಟ್ರಕ್‌ ಚಾಲಕನ ಅಜಾಗರೂಕ ಚಾಲನೆಯೇ ಕಾರಣವೆಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...