ಜನರ ನಿರೀಕ್ಷೆಗೆ ತಕ್ಕಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ; ಲಕ್ಷ್ಮೀ ಹೆಬ್ಬಾಳ್ಕರ್‌

Date:

  • ಸಚಿವರಾದ ನಂತರ ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ
  • ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೂ ತೆರಳಿ ಪ್ರಗತಿ ಪರಿಶೀಲನೆ ನಡೆಸಲಾಗುವುದು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ರಾಜ್ಯಕ್ಕೆ ಹಾಗೂ ಸರ್ಕಾರಕ್ಕೆ ಉತ್ತಮ ಹೆಸರು ತರುವ ದಿಸೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಚಿವರಾದ ನಂತರ ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಜನರು ಬಹಳ ನಿರೀಕ್ಷೆ ಇಟ್ಟು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮ ಕರ್ತವ್ಯ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಜವಾಬ್ದಾರಿ ಮತ್ತು ಸೂಕ್ಷ್ಮವಾದ ಇಲಾಖೆ ಕೂಡ ಹೌದು. ಇಲಾಖೆಯಲ್ಲಿ ಸಣ್ಣ ಲೋಪವನ್ನೂ ಸಹಿಸಲು ಸಾಧ್ಯವಿಲ್ಲ. ನಮ್ಮ ನಿರೀಕ್ಷೆ ಮತ್ತು ವೇಗಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಹೊಸದಾಗಿ ಘೋಷಣೆಯಾಗಿರುವ ಗೃಹಲಕ್ಷ್ಮೀ ಸೇರಿದಂತೆ ಇಲಾಖೆಯ ಪ್ರತಿಯೊಂದು ಯೋಜನೆಗಳನ್ನೂ ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಸಬೇಕು. ಯಾವುದೇ ರೀತಿಯ ದೂರುಗಳಿಗೆ ಅವಕಾಶವಿರಬಾರದು. ಇಲಾಖೆ ಉತ್ತಮವಾಗಿ ಕೆಲಸ ನಿರ್ವಹಿಸಿದರೆ ಸರಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ದಿನಗಳಲ್ಲಿ ವಿಸ್ತೃತವಾಗಿ ಇಲಾಖೆಗೆ ಸಂಬಂಧಿಸಿದ ಚರ್ಚೆ ನಡೆಸಲಾಗುವುದು. ಜೊತೆಗೆ ಪ್ರತಿ ಜಿಲ್ಲೆಗೂ ತೆರಳಿ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಹಾಗಾಗಿ ಹೊಸ ಸರ್ಕಾರದ ನಿರೀಕ್ಷೆಗೆ ತಕ್ಕಂತೆ ನಿಮ್ಮ ಕಾರ್ಯನಿರ್ವಹಣೆ ಇರಲಿ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ; ಬೆಂಗಳೂರಿಗೆ ಕರೆ ತರಲು ವಿಮಾನ ವ್ಯವಸ್ಥೆ

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ. ಎನ್ ಮಂಜುಳಾ, ನಿರ್ದೇಶಕಿ ಡಾ. ಕೆ ಎನ್ ಅನುರಾಧಾ, ಮಕ್ಕಳ ರಕ್ಷಣಾ ನಿರ್ದೇಶಕ ಚಂದ್ರಕಾಂತ, ಮಹಿಳಾ ಆಯೋಗದ ಕಾರ್ಯದರ್ಶಿ ಕವಿತಾ ಮಣ್ಣಿಕೇರಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ, ವಿಕಲಚೇತನರ ಇಲಾಖೆಯ ಜಂಟಿ ನಿರ್ದೇಶಕ ಶೇಷಪ್ಪ, ಬಾಲವಿಕಾಸ ಅಕಾಡೆಮಿ ಕಾರ್ಯದರ್ಶಿ ಭಾರತಿ ಶೆಟ್ಟರ್, ಬಾಲಭವನದ ಕಾರ್ಯದರ್ಶಿ ರಾಜಮೂರ್ತಿ, ಇಲಾಖೆಯ ಎಲ್ಲ ಜಂಟಿ ನಿರ್ದೇಶಕರು, ಉಪನಿರ್ದೇಶಕರು ಮತ್ತಿತರ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...