ಬಿಜೆಪಿ ಛಿದ್ರವಾಗಿದೆ, ಜೋಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಎಂ ಬಿ ಪಾಟೀಲ್ ಲೇವಡಿ

Date:

  • ‘ಬಿಜೆಪಿಯಲ್ಲಿ ಬರೋಬ್ಬರಿ ಇಪ್ಪತ್ತು ಗುಂಪುಗಳು ಹುಟ್ಟಿಕೊಂಡಿವೆ’
  • ‘ಬಿಜೆಪಿಯವರನ್ನು ಚುನಾವಣೆಯಲ್ಲಿ ರಾಜ್ಯದ ಜನ ತಿರಸ್ಕರಿಸಿದ್ದಾರೆ’

ಬಸವರಾಜ ಬೊಮ್ಮಾಯಿ ಅವರು ಖಾಲಿ ಕುರ್ಚಿಯಲ್ಲಿ ಕೂತಿದ್ದಾರೆ. ಬಿಜೆಪಿ ಛಿದ್ರವಾಗಿದೆ. ಒಂದಲ್ಲ, ಎರಡಲ್ಲ, ಬಿಜೆಪಿಯೊಳಗೆ ಬರೋಬ್ಬರಿ ಇಪ್ಪತ್ತು ಗುಂಪುಗಳು ಹುಟ್ಟಿಕೊಂಡಿವೆ. ಬಿಜೆಪಿಯನ್ನು ಜೋಡಿಸಲು ಯಾರಿಂದಲೂ ಸಾಧ್ಯವಿಲ್ಲ, ಅಷ್ಟು ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಬಿಜೆಪಿ ನಾಯಕರಲ್ಲಿ ಆಂತರಿಕ ಕಚ್ಚಾಟ ಶುರುವಾಗಿದೆ. ಸ್ವಪಕ್ಷದ ನಾಯಕರ ವಿರುದ್ದವೇ ಬಿಜೆಪಿ ನಾಯಕರು ಬಹಿರಂಗವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ” ಎಂದರು.

“ಬಿಜಾಪುರದಲ್ಲಿ ಒಬ್ಬೊಬ್ಬರದ್ದು ಒಂದೊಂದು ರೀತಿ ಹೊಡೆದಾಟ ಆಗುತ್ತಿದೆ. ಬಿಜೆಪಿ ಅಂತಿಮ ಘಟ್ಟ ತಲುಪಿದೆ. ಬಿಜೆಪಿಗೆ ಫೆವಿಕಲ್ ಹಚ್ಚಿದ್ರೂ ಅದು ಅಂಟಲ್ಲ” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ

“ಬಿಜೆಪಿಯವರನ್ನು ರಾಜ್ಯದ ಜನ ತಿರಸ್ಕರಿಸಿದ್ದಾರೆ. ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. 40% ಕಮಿಷನ್ ಹೊಡೆಯೋದು ಬಿಟ್ಟು ಬೇರೇನೂ ಇವರು ಮಾಡಿಲ್ಲ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಅಂದರೆ ಉದ್ಯಮಿಗಳು, ಐಟಿ ಬಿಟಿ ಶ್ರೀಮಂತರಷ್ಟೇ ಅಲ್ಲ!

“ಅಕ್ಕಿ ಇದ್ದರೂ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಅದಕ್ಕೆ ಅಕ್ಕಿ ಬದಲು ಹಣ ನೀಡುತ್ತೇವೆ. ಇದೇ ಸಿ.ಟಿ ರವಿ ಅಕ್ಕಿ ಇಲ್ಲ ಅಂದ್ರೆ ಹಣ ಕೊಡಿ ಎಂದು ಹೇಳಿದರು. ಈಗ ನಾವು ಹಣವನ್ನೇ ಕೊಡ್ತಿದ್ದೀವಿ” ಎಂದರು.

ಕಾಸಿಗಾಗಿ ವರ್ಗಾವಣೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, “ನಮ್ಮ ಸರ್ಕಾರದಲ್ಲಿ ಕಾಸಿಗಾಗಿ ವರ್ಗಾವಣೆ ನಡೆದಿಲ್ಲ. ಪಾರದರ್ಶಕವಾಗಿ ನಡೆಯುತ್ತಿದೆ. ಟೆಂಡರ್ ಕೂಡ ನಾವು ಇನ್ನೂ ಕರೆದಿಲ್ಲ. ಕುಮಾರಸ್ವಾಮಿ ಬಹಳ ಆತುರರಾಗಿದ್ದಾರೆ” ಎಂದರು.

“ಯತೀಂದ್ರ ಹೆಸರು ಯಾಕೆ ತರ್ತೀರಿ. ಯತೀಂದ್ರ ಎಂಎಲ್ ಎ ಆಗಿದ್ದಾರಾ? ಎಂಎಲ್‌ಎಗಳು ಹೋದಾಗ ಶಿಫಾರಸ್ಸು ಪತ್ರ ಕೊಟ್ಟಿರುತ್ತಾರೆ. ಅದಕ್ಕೆ ಹಣ ಲೇಪ ಕೊಡೋದು ಸರಿಯಲ್ಲ, ಕುಮಾರಸ್ವಾಮಿ ಎರಡೆರಡು ಲೆಟರ್ ಕೊಟ್ಟಿರಲಿಲ್ವಾ” ಎಂದರು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...