ಸಚಿವ ಎಂ ಬಿ ಪಾಟೀಲ್‌ ಅವರು ಛಲವಾದಿ ನಾರಾಯಣ ಸ್ವಾಮಿ ಬಳಿ ಕ್ಷಮೆಯಾಚಿಸಲಿ: ವಿಜಯೇಂದ್ರ ಆಗ್ರಹ

Date:

ಸಚಿವ ಎಂ ಬಿ ಪಾಟೀಲ್‌ ಅವರ ವರ್ತನೆಯನ್ನು ನಮ್ಮ ಪಕ್ಷ ಖಂಡಿಸುತ್ತದೆ. ಈ ಕೂಡಲೇ ಸಚಿವರು ಛಲವಾದಿ ನಾರಾಯಣ ಸ್ವಾಮಿ ಹಾಗೂ ಪರಿಶಿಷ್ಟ ಸಮುದಾಯಗಳಲ್ಲಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಛಲುವಾದಿ ನಾರಾಯಣಸ್ವಾಮಿ ಅವರು ಪರಿಶಿಷ್ಟ ಸಮುದಾಯದವರು ಎಂಬುವ ಕಾರಣಕ್ಕೆ ಅವರು ಗೌರವಾನ್ವಿತ ವಿರೋಧ ಪಕ್ಷದ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ಅವರ ಸ್ಥಾನದ ಘನತೆಯನ್ನೂ ಲೆಕ್ಕಿಸದೇ, ಅವಹೇಳನಕಾರಿ ಹಾಗೂ ಕಚೋದ್ಯದ ಪದ ಉಪಯೋಗಿಸುವ ಎಂ ಬಿ ಪಾಟೀಲ್‌ ಅವರು ಪದ ಸಂಸ್ಕೃತಿ ಇಲ್ಲದ ವ್ಯಕ್ತಿತ್ವವನ್ನು ಅನಾವರಣ ಮಾಡಿಕೊಂಡಿದ್ದಾರೆ. ಆ ಮೂಲಕ ಪರಿಶಿಷ್ಟ ಸಮುದಾಯದವರೊಬ್ಬರು ಉನ್ನತ ಸ್ಥಾನ ಅಲಂಕರಿಸಿರುವುದನ್ನು ಸಹಿಸಲಾಗದ ಅಸೂಯೆ ಹೊರಹಾಕಿದ್ದಾರೆ” ಎಂದು ಟೀಕಿಸಿದ್ದಾರೆ.

“ಪರಿಶಿಷ್ಟ ಸಮುದಾಯದ ಹೋರಾಟಗಾರನೊಬ್ಬನನ್ನು ಗುರುತಿಸಿ ಬಿಜೆಪಿ ವಿರೋಧ ಪಕ್ಷ ಸ್ಥಾನದಲ್ಲಿ ಕುಳ್ಳಿರಿಸಿದೆ. ತಮ್ಮ ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಕೆಐಎಡಿಬಿಯಲ್ಲಿ ನಡೆದಿರುವ ಸಿಎ ನಿವೇಶನಗಳ ನಿಯಮಬಾಹಿರ ಹಾಗೂ ಅಕ್ರಮ ಮಂಜೂರಾತಿ ಕುರಿತು ಛಲವಾದಿಯವರು ಆರೋಪ ಮಾಡಿದ್ದಾರೆ. ಇದನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಿ ಮಾರುತ್ತರಿಸಬೇಕಾದ ಎಂ.ಬಿ ಪಾಟೀಲರು ಪ್ರತಿಕ್ರಿಯಿಸಿರುವ ಪರಿಯನ್ನು ನೋಡಿದರೆ ಅವರು ತಮ್ಮ ರಾಷ್ಟ್ರೀಯ ಅಧ್ಯಕ್ಷರನ್ನು ಓಲೈಸುವ ಭರದಲ್ಲಿ ತಳಮಟ್ಟದಿಂದ ಮೇಲೆದ್ದು ಬಂದು ಗೌರವಾನ್ವಿತ ಸ್ಥಾನ ಅಲಂಕರಿಸಿರುವ ಪರಿಶಿಷ್ಟ ಸಮುದಾಯದ ವ್ಯಕ್ತಿಯನ್ನು ಅಪಮಾನಿಸುವ ಮೂಲಕ ಪರಿಶಿಷ್ಟರ ಬಗ್ಗೆ ತಮಗಿರುವ ಗೌರವ ಯಾವ ಮಟ್ಟದ್ದು ಎನ್ನುವುದನ್ನು ಪ್ರದರ್ಶಿಸಿಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯದಲ್ಲಿ ಟೀಕೆ ಟಿಪ್ಪಣಿಗಳಿರಬೇಕು ಅದರಲ್ಲೂ ಆಡಳಿತ ಪಕ್ಷದಲ್ಲಿರುವವರು ವಿರೋಧ ಪಕ್ಷದ ಟೀಕೆಗಳನ್ನು ಸಕಾರಾತ್ಮಕ ಮನಸ್ಸಿನಿಂದ ಸ್ವೀಕರಿಸುವ ಔದಾರ್ಯ ತೋರಬೇಕು. ಆದರೆ ಹತಾಶೆ ಗೊಳಗಾದವರಂತೆ ವರ್ತಿಸುವುದು ಪ್ರಜಾತಂತ್ರ ವ್ಯವಸ್ಥೆಯನ್ನು ಅಪಮಾನಿಸಿದಂತೆ. ಈ ನಿಟ್ಟಿನಲ್ಲಿ ಎಂಬಿ ಪಾಟೀಲರು ಪ್ರಜಾತಂತ್ರ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ, ಶೋಷಿತ ಸಮುದಾಯದಿಂದ ಮೇಲೆದ್ದು ಬಂದ ವ್ಯಕ್ತಿತ್ವವನ್ನು ಅವಹೇಳನ ಮಾಡಿರುವುದು ಇಡೀ ಪರಿಶಿಷ್ಟ ಸಮುದಾಯವನ್ನು ಅಪಮಾನಿಸಿದಂತಾಗಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...