ಬಂಡವಾಳ ಆಕರ್ಷಿಸಲು ಮುಂಬೈಗೆ ತೆರಳಿದ ಸಚಿವ ಎಂ ಬಿ ಪಾಟೀಲ್ : ಉದ್ಯಮಿಗಳ ಜತೆ ಮಾತುಕತೆ

Date:

ಕರ್ನಾಟಕಕ್ಕೆ ಬಂಡವಾಳ ಆಕರ್ಷಿಸುವ ಉದ್ದೇಶದೊಂದಿಗೆ ಮುಂಬೈಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಮಂಗಳವಾರ ಹಲವು ದೈತ್ಯ ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಿದರು.

ತಮ್ಮ ಪ್ರವಾಸದ ಮೊದಲ ದಿನದಂದು ಅವರು ಮಹೀಂದ್ರ, ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್ ಡಬ್ಲ್ಯು), ಟಾಟಾ, ಬ್ಲ್ಯಾಕ್ ಸ್ಟೋನ್ ಮತ್ತು ಆರ್ ಪಿಜಿ ಗ್ರೂಪ್ ನ ಪ್ರಮುಖರನ್ನು ಭೇಟಿ ಮಾಡಿ, ರಾಜ್ಯದಲ್ಲಿರುವ ಹೂಡಿಕೆಗೆ ಪೂರಕವಾದ ನೀತಿ, ಉತ್ತೇಜನ, ಪ್ರೋತ್ಸಾಹಕ ಕ್ರಮಗಳು, ವಿಶೇಷ ರಿಯಾಯಿತಿಗಳು, ಸೌಲಭ್ಯಗಳೆಲ್ಲವನ್ನೂ ವಿವರಿಸಿದರು.

ಈ ಮಹತ್ವಾಕಾಂಕ್ಷಿ ಮಾತುಕತೆಯಲ್ಲಿ ಮಹೀಂದ್ರ ಸಮೂಹದ ಪರವಾಗಿ ಅದರ ಅಂಗಸಂಸ್ಥೆಗಳಾದ ಆಟೋ ಅಂಡ್ ಫಾರಂ ವಿಭಾಗದ ಅಧ್ಯಕ್ಷ ವಿನೋದ್ ಸಹಾಯ್, ಜಿಂದಾಲ್ ಸಮೂಹದ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಪಾರ್ಥ ಜಿಂದಾಲ್, ಟಾಟಾ ಸಮೂಹದ ಮುಖ್ಯಸ್ಥ ಎನ್. ಚಂದ್ರಶೇಖರನ್, ಆರ್ ಪಿಜಿ ಸಮೂಹದ ಉಪಾಧ್ಯಕ್ಷ ಅನಂತ್ ಗೋಯೆಂಕ ಪಾಲ್ಗೊಂಡಿದ್ದರು. ಸಚಿವರು ಬುಧವಾರ ಕೂಡ ಬಿರ್ಲಾ ಮತ್ತು ರಿಲಯನ್ಸ್ ಉದ್ಯಮ ಸಮೂಹ ಸೇರಿದಂತೆ ಹಲವು ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಪಾಟೀಲರು ಇತ್ತೀಚೆಗೆ ರಾಜ್ಯಕ್ಕೆ ಬಂಡವಾಳ ಆಕರ್ಷಿಸಬೇಕೆಂಬ ಉದ್ದೇಶದೊಂದಿಗೆ ಅಮೆರಿಕಕ್ಕೆ 12 ದಿನಗಳ ಭೇಟಿ ನೀಡಿ, 25ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದರು. ಈ ಉಪಕ್ರಮದಿಂದಾಗಿ ರಾಜ್ಯಕ್ಕೆ 25 ಸಾವಿರ ಕೋಟಿ ರೂ. ಮೊತ್ತದ ಹೂಡಿಕೆ ಖಾತ್ರಿಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

ಈ ಸುದ್ದಿ ಓದಿದ್ದೀರಾ? ಶರಾವತಿ ಸಂತ್ರಸ್ತರ ಬಾಕಿ ಪ್ರಕರಣ | ತ್ವರಿತ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

ಈ ಸಂದರ್ಭದಲ್ಲಿ ಉದ್ಯಮಿಗಳೊಂದಿಗೆ ಮಾತನಾಡಿದ ಅವರು, ‘ಕರ್ನಾಟಕವು ಅತ್ಯುತ್ತಮವಾದ ಕೈಗಾರಿಕಾ ನೀತಿಯನ್ನು ಹೊಂದಿದ್ದು, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿದ್ಯುನ್ಮಾನ, ಸೆಮಿ ಕಂಡಕ್ಟರ್ ಉತ್ಪಾದನೆ, ಆರೋಗ್ಯ ಸೇವೆಗಳು, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ, ಮಾನವ ಸಂಪನ್ಮೂಲ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲ ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ’ ಎಂದರು.

‘ನೇರ ವಿದೇಶಿ ಹೂಡಿಕೆ ಆಕರ್ಷಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಸಂಶೋಧನೆ, ಆವಿಷ್ಕಾರ ಮತ್ತು ನಾವೀನ್ಯತೆ ಸೂಚ್ಯಂಕದಲ್ಲಿ ಕೂಡ ಗಮನಾರ್ಹ ಜಾಲವನ್ನು ಹೊಂದಿದೆ. ಹೀಗಾಗಿ, ಈಗಾಗಲೇ ರಾಜ್ಯದಲ್ಲಿ ಹೂಡಿಕೆ ಮಾಡಿರುವ ಕಂಪನಿಗಳು ಮತ್ತಷ್ಟು ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಬೇಕು’ ಎಂದು ಕೋರಿದರು.

ಅಲ್ಲದೆ, ‘ರಾಜ್ಯ ಸರಕಾರವು ಬೆಂಗಳೂರಿನ ಸಮೀಪದಲ್ಲಿ ಅತ್ಯಾಧುನಿಕ ಮತ್ತು ವಿಶ್ವ ದರ್ಜೆಯ ಜ್ಞಾನ, ಆರೋಗ್ಯ, ಸಂಶೋಧನೆ ಮತ್ತು ನಾವೀನ್ಯ ಸಿಟಿ (ಕೆಎಚ್ಐಆರ್ ಸಿಟಿ)ಯನ್ನು 2,000 ಎಕರೆ ವಿಸ್ತೀರ್ಣದಲ್ಲಿ ಸ್ಥಾಪಿಸುತ್ತಿದೆ. ಇದರ ಜತೆಯಲ್ಲೇ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ಕೊಡುತ್ತಿದೆ. ಒಂಬತ್ತು ಉದ್ಯಮ ವಲಯಗಳನ್ನು ಗುರುತಿಸಿದ್ದು, ಅವುಗಳ ರಚನಾತ್ಮಕ ಅಭಿವೃದ್ಧಿಗೆ ವಿಷನ್ ಗ್ರೂಪ್ಸ್ ರಚಿಸಲಾಗಿದೆ’ ಎಂದು ಅವರು ವಿವರಿಸಿದರು.

ಬಿಯಾಂಡ್ ಬೆಂಗಳೂರು ಸೇರಿದಂತೆ ಹಲವು ಉಪಕ್ರಮಗಳ ಮೂಲಕ ರಾಜ್ಯದ ಎಲ್ಲ ಭಾಗಗಳಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕೆಂಬ ಗುರಿ ಇಟ್ಟುಕೊಂಡಿದೆ. ಜೊತೆಗೆ ಉದ್ಯಮಿಗಳಿಗೆ ಯಾವುದೇ ಅಡಚಣೆ ಇಲ್ಲದೆ ಏಕಗವಾಕ್ಷಿ ವಿಧಾನದಲ್ಲಿ ಅಗತ್ಯ ಅನುಮತಿಗಳನ್ನೆಲ್ಲ ನೀಡಲಾಗುತ್ತಿದೆ ಎಂದು ಅವರು ಮನದಟ್ಟು ಮಾಡಿಕೊಟ್ಟರು.

ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...