ದಾವೋಸ್‌ನ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾದ ಸಚಿವ ಎಂ ಬಿ ಪಾಟೀಲ್ ನಿಯೋಗ

Date:

ರಾಜ್ಯದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರ ನೇತೃತ್ವದ ನಿಯೋಗವು ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ-24ರ ವಾರ್ಷಿಕ ಶೃಂಗಸಭೆಯಲ್ಲಿ ಸೋಮವಾರ ಮುಂಚೂಣಿ ಕಂಪನಿಗಳಾದ ಜಾನ್ಸನ್ ಅಂಡ್ ಜಾನ್ಸನ್, ಐಬಿಎಂ ಮತ್ತು ಸ್ಕ್ನೈಡರ್(SCHNEIDER) ಎಲೆಕ್ಟ್ರಿಕ್ ಕಂಪನಿಗಳ ಜೊತೆ ಮಹತ್ವದ ಮಾತುಕತೆ ನಡೆಸಿತು.

ಸಚಿವ ಪಾಟೀಲರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಪ್ರತಿನಿಧಿಗಳು ಕರ್ನಾಟಕದಲ್ಲಿ ಕಂಪನಿಯು ಗ್ಲೋಬಲ್ ಸರ್ವೀಸ್ ಸೆಂಟರ್ (ಜಾಗತಿಕ ಸೇವಾ ಕೇಂದ್ರ) ಆರಂಭಿಸುವ ಯೋಜನೆ ಹೊಂದಿದ್ದು, ಇದರಿಂದ 200 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

“ಕರ್ನಾಟಕದಲ್ಲಿ ತನ್ನ ತಯಾರಿಕಾ ಉಪಸ್ಥಿತಿ ಹೆಚ್ಚಿಸುವ ಗುರಿ ಸಹ ಇದ್ದು, ಮುಖ್ಯವಾಗಿ, ವೈದ್ಯಕೀಯ ತಂತ್ರಜ್ಞಾನ ಮತ್ತು ಜೀವ ವಿಜ್ಞಾನಗಳ ಕ್ಷೇತ್ರದ ಬಗ್ಗೆ ಒತ್ತುಕೊಡಲಾಗುವುದು. ಆರೋಗ್ಯಸೇವಾ ವಲಯದಲ್ಲಿನ ತನ್ನ ಆದ್ಯತೆಯನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ ಜಾನ್ಸನ್ ಅಂಡ್ ಜಾನ್ಸನ್ ಪ್ರತಿನಿಧಿಗಳು, ಕ್ಯಾನ್ಸರ್ ಮತ್ತು ಎಚ್ಐವಿ ಚಿಕಿತ್ಸೆ ಲಭ್ಯವಾಗಿಸಲು ಗಮನ ಕೇಂದ್ರೀಕರಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಐಬಿಎಂ ಕಂಪನಿ ಜೊತೆ ನಡೆದ ಸಮಾಲೋಚನೆಯಲ್ಲಿ, ಇ- ಆಡಳಿತದ ಬಗ್ಗೆ ವಿಚಾರ ವಿನಿಮಯ ನಡೆಯಿತು. ಇ-ಆಡಳಿತದ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ, ಕಂಪನಿಯು ಸರ್ಕಾರದ ಉಪಕ್ರಮಗಳಿಗೆ ಯಾವ ರೀತಿ ಬೆಂಬಲ ನೀಡಬಹುದು ಎಂಬುದರ ಬಗ್ಗೆ ಅವಲೋಕಿಸಲಾಯಿತು. ಕಂಪನಿಯು ಬೆಂಗಳೂರು ಉತ್ತರ ಭಾಗದ ಬಗೆಗೆ ಹೆಚ್ಚಿನ ಗಮನ ನೀಡಲಿದೆ ಎಂದು ಚರ್ಚೆಯ ವೇಳೆ ಅದರ ಪ್ರತಿನಿಧಿಗಳು ತಿಳಿಸಿದರು.

ನಂತರ, ಸ್ಕ್ನೈಡರ್ ಎಲೆಕ್ಟ್ರಿಕ್ ಕಂಪನಿ ಜೊತೆ ನಡೆದ ಚರ್ಚೆಯ ವೇಳೆ, ಆ ಕಂಪನಿಯ ಉನ್ನತಾಧಿಕಾರಿಗಳು ಅತ್ತಿಬೆಲೆಯಲ್ಲಿ ನಿರ್ಮಾಣವಾಗಲಿರುವ 5 ಕಾರ್ಖಾನೆಗಳಿರುವ ಘಟಕಕ್ಕೆ ಹೆಚ್ಚಿನ ಹೂಡಿಕೆ ಮಾಡುತ್ತಿರುವುದಾಗಿ ಹೇಳಿದರು.

ಎಲೆಕ್ಟ್ರೀಷಿಯನ್ ಗಳಿಗೆ ಸಿಎಸ್ಆರ್ ಕಾರ್ಯಕ್ರಮದಡಿ ಹೆಚ್ಚಿನ ತರಬೇತಿ ನೀಡುವ ಸಂಬಂಧವಾಗಿ ಆರು ಎನ್‌ಜಿಒಗಳ ಜೊತೆ ಮಾತುಕತೆ ನಡೆಸುತ್ತಿರುವುದಾಗಿಯೂ ಕಂಪನಿಯ ಪ್ರತಿನಿಧಿಗಳು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...