ಅಜ್ಞಾನದಿಂದಲೇ ಅಧಿಕಾರ ಕಳೆದುಕೊಂಡಿದ್ದೀರ; ಕಟೀಲ್‌ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

Date:

  • ವಿಫಲ ಆಡಳಿತಗಾರರಿಂದ ಆಡಳಿತಾತ್ಮಕ ಪಾಠ ಕಲಿಯುವ ಅಗತ್ಯವಿಲ್ಲ
  • ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ

ಗೃಹ ಸಚಿವ ಪರಮೇಶ್ವರ್‌ ಅವರು ಗೃಹಖಾತೆಯ ಕೆಲಸಗಳನ್ನು ಮರಿ ಖರ್ಗೆಗೆ ಲೀಸ್‌ಗೆ ಕೊಟ್ಟಿದ್ದಾರೋ? ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಹೇಳಿಕೆಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ, “ಶಾಸಕಾಂಗದ ಕಾರ್ಯವ್ಯಾಪ್ತಿಯ ಅರಿವಿಲ್ಲದ ನಳೀನ್‌ ಕುಮಾರ್‌ ಕಟೀಲ್‌ ಅವರೇ, ನೀವು ಅಧಿಕಾರ ಕಳೆದುಕೊಂಡಿದ್ದೇ ಇಂತಹ ಅಜ್ಞಾನಕ್ಕೋಸ್ಕರ. ಸಂಸದರಾಗಿರುವ ನಿಮಗೆ ನಿಮ್ಮ ಸ್ಥಾನದ ಹೊಣೆಯ ಅರಿವಿಲ್ಲದಿರಬಹುದು, ನನಗೆ ನನ್ನ ಹೊಣೆಯ ಅರಿವಿದೆ” ಎಂದು ಟೀಕಿಸಿದ್ದಾರೆ.

“ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವನಾದ ನಾನು ಜಿಲ್ಲೆಯ ಎಲ್ಲ ಇಲಾಖೆಗಳ ಆಗುಹೋಗುಗಳಿಗೂ ಹೊಣೆಯಾಗಿರುತ್ತೇನೆ, ನನ್ನ ಜಿಲ್ಲೆಯ ಗೃಹ ಇಲಾಖೆಯನ್ನೂ ನಾನೇ ನಿಯಂತ್ರಿಸಬೇಕಿರುವುದು ನನ್ನ ಕರ್ತವ್ಯ. ನಿಮ್ಮ ಪಕ್ಷದವರಿಗೆ ಇಂತಹ ಸಾಮಾನ್ಯ ಜ್ಞಾನ ಇಲ್ಲದಿರುವುದಕ್ಕಾಗಿಯೇ ಜನತೆ ನಿಮ್ಮನ್ನು ಮನೆಯಲ್ಲಿ ಕೂರಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ 40% ಸರ್ಕಾರ ಈ ರಾಜ್ಯವನ್ನು ಕೊಳ್ಳೆ ಹೊಡೆದಿದ್ದು, ರೈತರು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿದ್ದನ್ನು ರಾಜ್ಯ ಕಂಡಿದೆ. ನಿಮ್ಮಂತ ವಿಫಲ ಆಡಳಿತಗಾರರಿಂದ ನಾವು ಆಡಳಿತಾತ್ಮಕ ಪಾಠ ಕಲಿಯುವ ಅಗತ್ಯವಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಧಾನಸೌಧದಲ್ಲೇ ‘ಮೌಢ್ಯ’ಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ

“ಅಧ್ಯಕ್ಷಗಿರಿಗೆ ರಾಜೀನಾಮೆ ಕೊಟ್ಟೆ ಎಂದು ಯೂ ಟರ್ನ್ ಹೊಡೆದಿದ್ದೇಕೆ ಎಂಬುದನ್ನು ಸ್ಪಷ್ಟಪಡಿಸಿ, ನಿಮ್ಮ ಕ್ಷೇತ್ರದಲ್ಲಿ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ, ಒಮ್ಮೆ ಆ ಕಡೆ ಗಮನ ಹರಿಸಿ ನಿಮ್ಮ ಟಿಕೆಟ್ ಭದ್ರಪಡಿಸಿಕೊಳ್ಳಿ!

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...