ನಾವಿಕನಿಲ್ಲದ ದೋಣಿಯಂತಿರುವ ಬಿಜೆಪಿಯವರ ವರ್ತನೆ ಸದನ ಯೋಗ್ಯವಲ್ಲ: ಪ್ರಿಯಾಂಕ್‌ ಖರ್ಗೆ

Date:

16ನೇ ವಿಧಾನಸಭೆಯ ಎರಡನೇ ದಿನದ ಅಧಿವೇಶನ ಕಲಾಪ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸಿದ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದ್ದನ್ನು ಖಂಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ, “ಜನವಿರೋಧಿ ರಾಜಕಾರಣ ಬಿಜೆಪಿಯನ್ನು ಈಗಾಗಲೇ 63 ಮತ್ತೊಂದಕ್ಕೆ ತಂದು ನಿಲ್ಲಿಸಿದೆ. ಆದರೂ ಇವರು ಪಾಠ ಕಲಿತಿಲ್ಲ” ಎಂದು ಕಿಡಿಕಾರಿದ್ದಾರೆ.

“ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಿಕೊಳ್ಳಗಾಗದವರು ಇಂದು ಸದನದ ನಿಯಮಾವಳಿ ಗಾಳಿಗೆ ತೂರಿ ‘ಮೊಂಡಾಟ’ ನಡೆಸಿದ್ದು ಅಕ್ಷಮ್ಯ ಅಪರಾಧ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ ಬಿಜೆಪಿ, ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಾಗ ಒಂದು ತಿಂಗಳ ಕಾಲ ಸಂಪುಟವನ್ನೇ ರಚಿಸಿರಲಿಲ್ಲ. ಆದರೆ, ನಾವು ಸಂಪೂರ್ಣ ಸರ್ಕಾರದೊಂದಿಗೆ ಜನರಿಗೆ ನೀಡಿದ್ದ ವಾಗ್ದಾನ ಈಡೇರಿಸುತ್ತಿದ್ದೇವೆ” ಎಂದು ತಿರುಗೇಟು ನೀಡಿದ್ದಾರೆ.

“ನಾವಿಕನಿಲ್ಲದ ದೋಣಿಯಂತಿರುವ ಬಿಜೆಪಿ ಪಕ್ಷದವರ ಅನುಚಿತ ವರ್ತನೆ ಯಾವುದೇ ರೀತಿಯಲ್ಲೂ ಸದನ ಯೋಗ್ಯವಲ್ಲ” ಎಂದು ಟೀಕಿಸಿದ್ದಾರೆ.

“ರಾಜ್ಯದ ಜನತೆ ಹುಷಾರಾಗಿದ್ದು, ಈ ನಾಟಕಗಳಿಗೆ ಬಲಿಪಶುವಾಗುವುದಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ಬೇಗ ಅರ್ಥವಾಗುವಂತಾಗಲಿ” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಧಿವೇಶನ 2023 | ಪ್ರಶ್ನೋತ್ತರ ಕಲಾಪಕ್ಕೆ ಬಿಜೆಪಿ ಸದಸ್ಯರಿಂದ ಅಡ್ಡಿ, 15 ನಿಮಿಷ ಸದನ ಮುಂದೂಡಿಕೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...