ಕಲಬುರಗಿ | ಅಕ್ರಮ ಮರಳು ದಂಧೆ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Date:

  • ಅಕ್ರಮ ಮರುಳು ಸಾಗಾಣಿಕೆ ಟ್ರಾಕ್ಟರ್ ಹರಿದು ಪೊಲೀಸ್ ಪೇದೆ ಸಾವು
  • ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾಂತ್ವನ, ಪರಿಹಾರ ಕೊಡಿಸುವ ಭರವಸೆ

ಕಲಬುರಗಿ ಜಿಲ್ಲೆಯಲ್ಲಿನ ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, “ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಹೀಗಿದ್ದರೂ ಮರಳು ಸಾಗಣೆ ಟ್ರಾಕ್ಟರ್ ಹರಿದು ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದು ನಿಜಕ್ಕೂ ಬೇಸರದ ಸಂಗತಿ” ಎಂದರು.

ಈ ಘಟನೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಬಂಧಿಸಿದವರಿಗೆ ಹಾಗೂ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಆದೇಶ ನೀಡಿ ಈ ಕೂಡಲೇ ಅಕ್ರಮ ಮರುಳು ಸಾಕಾಣಿಕೆ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೇವರ್ಗಿ ತಾಲೂಕು ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಅಕ್ರಮ ಮರುಳುಸಾಗಾಣಿಕೆ ಮಾಡುತ್ತಿದ್ದ ಟ್ರಾಕ್ಟರ್ ಹರಿದು ಸಾವನ್ನಪ್ಪಿದ್ದರು. ಮೃತ ಪೊಲೀಸ್ ಸಿಬ್ಬಂದಿ ಕುಟುಂಬದೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವನ ಹೇಳಿ, ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗೆ ಎಸ್ಐಟಿ ರಚನೆ; ವಾರದ ಬಳಿಕ ನಿರ್ಧಾರ

ಜೊತೆಗೆ ಸಾವನ್ನಪ್ಪಿದ್ದ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ ಭೀಮು ಚವ್ಹಾಣ (51) ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಮಾತುಕತೆ ನಡೆಸಿದ ಸಚಿವರು, ತನಿಖೆಗೆ ಆದೇಶಿಸಿರುವುದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...