ಎದೆಯೊಳಗೆ ರಾಡ್‌ | ಯುವಕನ ಜೀವ ಉಳಿಸಿದ ಕಿಮ್ಸ್ ವೈದ್ಯರಿಗೆ ಸಚಿವ ಸಂತೋಷ್‌ ಲಾಡ್‌ ಸೆಲ್ಯೂಟ್‌!

Date:

  • ಅಪಘಾತದಲ್ಲಿ ಕಬ್ಬಿಣದ ರಾಡ್‌ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು

ಅಪಘಾತದಲ್ಲಿ ಕಬ್ಬಿಣದ ರಾಡ್‌ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದು, ಜೀವನ್ಮರಣ ಹೋರಾಟ ನಡೆಸಿದ ಯುವಕನ ಜೀವ ಉಳಿಸುವಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ವೈದ್ಯರು ಸಫಲರಾಗಿದ್ದಾರೆ.

ಶಿರಸಿ ತಾಲೂಕಿನ ಜವಳಮಕ್ಕಿಯ 27 ವರ್ಷದ ದಯಾನಂದ ಎಂಬುವರು ಅಕ್ಟೋಬರ್‌ 2 ರಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಲಾರಿಯ ಚಾಲಕನ ಪಕ್ಕದ ಸೀಟಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಲಾರಿ ಮಗುಚಿಬಿದ್ದು ಸರ್ವಿಸ್‌ ರಸ್ತೆಯಲ್ಲಿ ಅಳವಡಿಸಿದ್ದ ಚೂಪಾದ ದೊಡ್ಡ ಕಬ್ಬಿಣದ ರಾಡ್‌ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು.

ರೋಗಿಯನ್ನು ಮೊದಲಿಗೆ ದಾವಣಗೆರೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಕಿಮ್ಸ್‌ಗೆ ತರಲಾಗಿತ್ತು. ಜೀವನ್ಮರಣ ಸ್ಥಿತಿಯಲ್ಲಿದ್ದ ರೋಗಿಗೆ ಕಠಿಣ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಜೀವ ಉಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

https://twitter.com/SantoshSLadINC/status/1848542324328174011?t=jEU0fFA7G8xXANSF7Sxw_Q&s=19

ಯುವಕನ ಜೀವ ಉಳಿಸಿದ ವೈದ್ಯರ ತಂಡಕ್ಕೆ ಸಚಿವ ಸಂತೋಷ್‌ ಲಾಡ್‌ ಅವರು ಹುಬ್ಬಳ್ಳಿಯಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು.

ಸಮಾರಂಭದಲ್ಲಿ ಮಾತನಾಡಿದ ಸಂತೋಷ್‌ ಲಾಡ್, “ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಯುವಕನ ಜೀವ ಉಳಿಸಿದ ಎಲ್ಲ ವೈದ್ಯಕೀಯ ತಂಡವನ್ನು ಅಭಿನಂದಿಸುವೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಸವಾಲಾಗಿ ಸ್ವೀಕರಿಸಿದ ಎಲ್ಲ ವೈದ್ಯರಿಗೆ ಶುಭಾಶಯ” ಎಂದು ತಿಳಿಸಿದರು.

ಇದೇ ವೇಳೆ ಆಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿ ಸಮರ್ಪಕವಾದ ವೈದ್ಯಕೀಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...