ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ: ಆಕ್ರೋಶ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2025-26ನೇ ಸಾಲಿನ ಬಜೆಟ್ ಮಂಡನೆಯ ಸಿದ್ಧತೆಗಳಲ್ಲಿ ತೊಡಗಿದ್ದು, ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ ಮಂಗಳವಾರ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳಳೊಂದಿಗೆ ಬಜೆಟ್ ಸಭೆಗಳು ನಿಗದಿಯಾಗಿದೆ.

ವಿಪರ್ಯಾಸವೆಂದರೆ ಅಲ್ಪಸಂಖ್ಯಾತ ಸಮುದಾಯ ಸಾಮಾಜಿಕ ಮುಖಂಡರು, ಸಂಘ-ಸಂಸ್ಥೆಗಳ ಮುಖಂಡರನ್ನು ಈ ಬಜೆಟ್ ಪೂರ್ವಭಾವಿ ಸಭೆಯಿಂದ ಹೊರಗಿಡಲಾಗಿದೆ. ಸರ್ಕಾರದ ಈ ನಡೆಗೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ದಲಿತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಮುದಾಯದ ಮುಖಂಡರನ್ನು ಬಜೆಟ್ ಪೂರ್ವಭಾವಿ ಸಭೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಸಂಜೆ 4 ಗಂಟೆಗೆ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಸಂಘ- ಸಂಸ್ಥೆಗಳ ಸಭೆ ಕರೆಯಲಾಗಿದೆ. ಸಂಜೆ 6 ಗಂಟೆಗೆ ಅಲ್ಪಸಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸಭೆ ಇದ್ದು, ಅದರಲ್ಲಿ ಅಲ್ಪಸಂಖ್ಯಾತ ಸಮುದಾಯದ ಸಚಿವರು ಮತ್ತು ಶಾಸಕರನ್ನು ಮಾತ್ರ ಆಹ್ವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
CM PROGRAMME
ಮುಖ್ಯಮಂತ್ರಿಗಳ ಮಂಗಳವಾರದ ಕಾರ್ಯಕಲಾಪ

ಇದು ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಹಾಗೂ ಸಂಘ-ಸಂಸ್ಥೆಗಳ ಸ್ಪಷ್ಟ ಕಡೆಗಣನೆಯಾಗಿದೆ. ಸಮುದಾಯದ ಮುಖಂಡರು ಹಾಗೂ ಸಂಘಸಂಸ್ಥೆಗಳನ್ನು ಹೊರಗಿಟ್ಟು ನಡೆಸುವ ಈ ಸಭೆ ಕೇವಲ ಕಾಟಾಚಾರದ ಸಭೆ ಆಗಲಿದೆ. ಸಮುದಾಯದ ಬೇಕು-ಬೇಡಗಳ ಕುರಿತು ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಅಭಿಪ್ರಾಯ, ಅಹವಾಲುಗಳನ್ನು ಕೇಳಬೇಕಾಗಿರುವುದು ಮುಖ್ಯಮಂತ್ರಿಯವರ ಆದ್ಯ ಕರ್ತವ್ಯ, ಉಳಿದೆಲ್ಲ ಸಮುದಾಯಗಳ ಮುಖಂಡರು, ಸಂಘ-ಸಂಸ್ಥೆಗಳನ್ನು ಆಹ್ವಾನಿಸಿ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಸಂಘ-ಸಂಸ್ಥೆಗಳನ್ನು ಕೈಬಿಟ್ಟಿರುವುದು ಸಮಾಜವಾದ, ಸಮಾನತೆಯ ಸಿದ್ದಾಂತದ ಪ್ರಬಲ ಪ್ರತಿಪಾದಕರಾಗಿರುವ ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಕಾಲ ಮಿಂಚಿಲ್ಲ ಸಭೆ ಸಂಜೆ ಇರುವುದರಿಂದ ಸಮುದಾಯದ ಮುಖಂಡರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಂಘದ ಮುಖಂಡ ನಸೀಮ್ ಅಹ್ಮದ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯ‌ – ಪರಮೇಶ್ವ‌ರ್‌ಗೆ ನಿಂದನೆ ಆರೋಪ, ಪದ್ಮನಾಭ ಅಲಿಯಾಸ್‌ ಪದ್ದು ವಿರುದ್ಧ ಎಫ್‌ಐಆರ್

ಇಲ್ಲದಿದ್ದರೆ ಬಜೆಟ್ ಪೂರ್ವಭಾವಿ ಸಭೆಗಳಿಗೆ ವಿವಿಧ ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳಿಗೆ ಆಹ್ವಾನಿಸುವ ಅರ್ಹತೆ ಅಥವಾ ಮಾನದಂಡಗಳೇನು ಎಂಬುದನ್ನು ಸಿಎಂ ಕಚೇರಿ ಸ್ಪಷ್ಟಪಡಿಸಬೇಕು. ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳನ್ನು ಹೊರಗಿಟ್ಟು ನಡೆಸಲಾಗುತ್ತಿರುವ ಈ ಸಭೆಯನ್ನು ಸಮುದಾಯದ ಸಚಿವರು, ಶಾಸಕರು‌ ಬಹಿಷ್ಕರಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಂಘ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...