ರಾಜ್ಯ ಸರ್ಕಾರದಿಂದ ಎಸ್ಸಿ ಎಸ್ಟಿ ಹಣ ದುರ್ಬಳಕೆ: ಸಂಸದ ಬೊಮ್ಮಾಯಿ ಆರೋಪ

Date:

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಶಿಗ್ಗಾವಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿ, “ರಾಜ್ಯ ಸರ್ಕಾರ ದಿವಾಳಿ ಆಗಿರೋದು ಪ್ರತಿ ಹೆಜ್ಜೆಯಲ್ಲಿ ಪ್ರದರ್ಶನ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡುವುದರಿಂದ ಹಿಡಿದು ಎಲ್ಲ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ವರ್ಗಾಯಿಸುತ್ತಿದ್ದಾರೆ” ಎಂದರು.

“ಎಸ್ ಸಿ ಎಸ್ ಟಿ ಸಮುದಾಯಗಳಿಗೆ 14,000 ಕೋಟಿ ರೂಪಾಯಿ ಅನುದಾನ ಬಳಕೆ ಆಗಬೇಕಿತ್ತು. ಎಲ್ಲ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ. ಎಸ್ ಸಿ ಎಸ್ ಟಿ ಜನಕ್ಕೂ ಗ್ಯಾರಂಟಿ ಮೂಲಕ ಅನುಕೂಲ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ‌ನವರು ಹೇಳುತ್ತಾರೆ. ಆದರೆ, ಕಾನೂನಿನಲ್ಲಿ ಅನುದಾನ ಎಸ್ ಸಿ ಎಸ್ ಟಿ ಗಳಿಗೆ ಹೋಗಬೇಕು ಅಂತ ಇದೆ. ಆ ಕಾನೂನು ಉಲ್ಲಂಘನೆ ಆಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈಫಲ್ಯ ಮುಚ್ಚಿಕೊಳ್ಳಲು ಡೆಂಘೀ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ

“ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಡೆಂಘೀ ಸಾವಿನ ಸಂಖ್ಯೆ ಕಡಿಮೆ ತೋರಿಸುತ್ತಿದ್ದಾರೆ. ಡೆಂಘೀ ರೋಗಿಗಳ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ. ಹಾವೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಜನರು ದಾವಣಗೆರೆ ಹುಬ್ಬಳ್ಳಿಗೆ ಹೋಗಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದೇ ರೋಗಿಗಳು ಸಾವನ್ನಪ್ಪಿದರೂ ಮುಚ್ಚಿಡುತ್ತಿದ್ದಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...