ಸಿಗದ ಸಚಿವ ಸ್ಥಾನ: ಮೋದಿ ನೇತೃತ್ವದ ಮೊದಲ ಮೈತ್ರಿ ಸರ್ಕಾರದಲ್ಲಿ ಅಜಿತ್ ಪವಾರ್ ಬಣಕ್ಕೆ ಹಿನ್ನಡೆ

Date:

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿದೆ. ಇಂದು(ಜೂನ್ 9)ರ ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಈ ನಡುವೆ ಸಚಿವ ಸ್ಥಾನಕ್ಕೆ ಮೈತ್ರಿಕೂಟದ ಪಕ್ಷಗಳಲ್ಲಿ ಲಾಭಿ ನಡೆಯುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಬಣಕ್ಕೆ ಕೊನೆಯ ಕ್ಷಣದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಕೈ ತಪ್ಪಿದೆ.

ಈ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್, “ಎನ್‌ಸಿಪಿಯ ಪ್ರಫುಲ್ ಪಟೇಲ್ ಅವರು ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಸಚಿವರ ಆಫರ್ ಬಂದಿತ್ತಾದರೂ ಅದನ್ನು ವಹಿಸಿಕೊಳ್ಳುವುದು ನಮಗೆ ಸರಿ ಕಂಡಿಲ್ಲ. ಹಾಗಾಗಿ, ನಮಗೆ ಕ್ಯಾಬಿನೆಟ್ ಮಂತ್ರಿಗಿರಿ ಬೇಕು. ಇದನ್ನು ಸ್ಪಷ್ಟವಾಗಿ ಬಿಜೆಪಿಯವರಿಗೆ ತಿಳಿಸಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ದಿನ ಕಾಯುತ್ತೇವೆ ಎಂದು ನಾವು ಅವರಿಗೆ (ಬಿಜೆಪಿ) ತಿಳಿಸಿದ್ದೇವೆ. ಆದರೆ ನಮಗೆ ಕ್ಯಾಬಿನೆಟ್ ಮಂತ್ರಿಗಿರಿ ಬೇಕು. ನಾವು ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇವೆ. ನಮಗೆ ಇಂದು ಒಬ್ಬ ಲೋಕಸಭೆ ಮತ್ತು ಒಬ್ಬ ರಾಜ್ಯಸಭಾ ಸಂಸದರಿದ್ದಾರೆ. ಆದರೆ ಮುಂದಿನ ಎರಡು ಮೂರು ತಿಂಗಳಲ್ಲಿ ನಾವು ರಾಜ್ಯಸಭೆಯಲ್ಲಿ ಒಟ್ಟು 3 ಸದಸ್ಯರನ್ನು ಹೊಂದಿಲಿದ್ದೇವೆ ಮತ್ತು ಸಂಸತ್ತಿನಲ್ಲಿ ನಮ್ಮ ಸಂಸದರ ಸಂಖ್ಯೆ 4 ಆಗಿರಲಿತ್ತದೆ. ಹಾಗಾಗಿ ನಮಗೆ ಒಂದು ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ನೀಡಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದೇವೆ” ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? UFC ಫೈನಲ್ : ಚೊಚ್ಚಲ ಪ್ರಯತ್ನದಲ್ಲೇ ಫೈನಲ್‌ನಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್

ಇದೇ ವಿಚಾರವಾಗಿ ಮಾತನಾಡಿರುವ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ “ನಮ್ಮ ಪಕ್ಷಕ್ಕೆ ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವ ಸ್ಥಾನ ಸಿಗಲಿದೆ ಎಂದು ನಿನ್ನೆ ರಾತ್ರಿ ನಮಗೆ ತಿಳಿಸಲಾಗಿತ್ತು. ನಾನು ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ. ಆದ್ದರಿಂದ ಇದು ನನಗೆ ಸ್ವಲ್ಪ ಹಿನ್ನಡೆಯಾಗಿದೆ. ನಾವು ಬಿಜೆಪಿ ನಾಯಕತ್ವಕ್ಕೆ ತಿಳಿಸಿದ್ದೇವೆ ಮತ್ತು ಅವರು ಈಗಾಗಲೇ ನಮಗೆ ಕೆಲವು ದಿನ ಕಾಯುವಂತೆ ಹೇಳಿದ್ದಾರೆ. ಇದು ಮೈತ್ರಿ ಸರ್ಕಾರವಾಗಿರುವುದರಿಂದ ಅವರು ಸೂಕ್ತ ನಿರ್ಧಾರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ಭರವಸೆ ಇದೆ” ಎಂದು ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...