ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲು ಮೋದಿಗೆ ಪ್ರಧಾನಿ ಹುದ್ದೆಯ ಅತಿಯಾಸೆ: ಉದ್ಧವ್ ಠಾಕ್ರೆ

Date:

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲಾಗಿ ಪ್ರಧಾನಿ ಹುದ್ದೆಯನ್ನು ಮತ್ತೆ ತನ್ನದಾಗಿಸಿಕೊಳ್ಳುವ ಅತಿಯಾಸೆಯನ್ನು ಹೊಂದಿದ್ದಾರೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದರು.

ಥಾಣೆಯಲ್ಲಿ ಹಾಲಿ ಸಂಸದ ಮತ್ತು ತಮ್ಮ ಪಕ್ಷದ ಅಭ್ಯರ್ಥಿ ರಾಜನ್ ವಿಚಾರೆ ಅವರ ಪರವಾಗಿ ಪ್ರಚಾರ ನಡೆಸಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ಅವರು ತನ್ನನ್ನು ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಪದೇ ಪದೇ ಗುರಿಯಾಗಿಸುತ್ತಿರುವ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಓದಿದ್ದೀರಾ?   ನಮ್ಮ ಹಿಂದುತ್ವ ಮನೆ ಒಲೆ ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ: ಉದ್ಧವ್ ಠಾಕ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೋಕಸಭೆ ಚುನಾವಣೆಯನ್ನು ನಿಷ್ಠೆ ಮತ್ತು ದ್ರೋಹದ ನಡುವಿನ ಘರ್ಷಣೆ ಎಂದು ಕರೆದಿರುವ ಉದ್ಧವ್ ಠಾಕ್ರೆ ಅವರು ಶಿವಸೇನೆ ಮತ್ತು ಥಾಣೆ ನಗರದ ನಡುವಿನ ನಂಟಿನ ಬಗ್ಗೆ ಪ್ರಸ್ತಾಪ ಮಾಡಿ ಜನರಲ್ಲಿ ಮತಯಾಚನೆ ಮಾಡಿದ್ದಾರೆ.

“ಮೋದಿ ಅವರು ತಮ್ಮ ವಾಕ್ಚಾತುರ್ಯದ ಮೂಲಕ ವಿವಾದ ಹುಟ್ಟುಹಾಕುತ್ತಿದ್ದಾರೆ. ಬಹುಮತ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ರಾಜವಂಶದ ರಾಜಕೀಯದ ಆರೋಪ ಮಾಡುತ್ತಿದೆ” ಎಂದು ಠಾಕ್ರೆ ಆರೋಪಿಸಿದರು.

ಇತ್ತೀಚೆಗೆ ಪ್ರಧಾನಿ ಮೋದಿ ತನ್ನ ಭಾಷಣಗಳಲ್ಲಿ ಠಾಕ್ರೆಯವರ ಶಿವಸೇನೆ ಬಣವನ್ನು ‘ನಕಲಿ ಸೇನೆ’ ಎಂದು ಕರೆದಿದ್ದಾರೆ ಮತ್ತು ಶರದ್ ಪವಾರ್ ಅವರನ್ನು ಅಲೆದಾಡುವ ಆತ್ಮ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಬಿಜೆಪಿ ಬಾಗಿಲು ತೆರೆದರೂ ಹಿಂದಿರುಗಿ ಹೋಗಲ್ಲ: ಉದ್ಧವ್ ಠಾಕ್ರೆ

ಇದಕ್ಕೆ ತಿರುಗೇಟು ನೀಡಿದ ಉದ್ಧವ್ ಠಾಕ್ರೆ, “ಪ್ರಧಾನಿ ಮೋದಿ ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲು ಪ್ರಧಾನಿ ಹುದ್ದೆಯನ್ನು ತಾನೇ ಮರಳಿ ಪಡೆಯಲು ಉತ್ಸುಕರಾಗಿದ್ದಾರೆ” ಎಂದು ಟೀಕಿಸಿದರು.

ಇನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆಯು ಥಾಣೆ ಲೋಕಸಭಾ ಕ್ಷೇತ್ರಕ್ಕೆ ನರೇಶ್ ಮ್ಹಾಸ್ಕೆ ಅವರನ್ನು ಕಣಕ್ಕಿಳಿಸಿದೆ. ಮುಂಬೈನ ಆರು ಸ್ಥಾನಗಳು ಸೇರಿದಂತೆ 12 ಇತರ ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

2022ರಲ್ಲಿ ಮೂಲ ಶಿವಸೇನೆಯನ್ನು ವಿಭಜಿಸಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಶಿವಸೇನೆಯ ನಾಯಕ ಏಕನಾಥ್ ಶಿಂದೆಗೆ ಥಾಣೆಯಲ್ಲಿನ ಸ್ಪರ್ಧೆಯು ಪ್ರತಿಷ್ಠೆಯ ಯುದ್ಧವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...