ಮೋದಿ ಜಿ7 ಭೇಟಿ ಯಾರದೋ ಮದುವೆಗೆ ಹೋಗಿ ನಾನೇ ವರನೆಂದಂತೆ: ಸುಬ್ರಮಣಿಯನ್ ಸ್ವಾಮಿ

Date:

ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಲೇವಡಿ ಮಾಡಿದ್ದಾರೆ. “ಪ್ರಧಾನಿ ಜಿ7 ಭೇಟಿಯು ಯಾರದೋ ಮದುವೆಗೆ ಹೋಗಿ ನಾನೇ ವರನೆಂದು ಹೇಳಿಕೊಂಡಂತೆ” ಎಂದು ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ನಾಯಕರಾದರೂ ಕೂಡಾ ಸದಾ ಬಿಜೆಪಿ ಮತ್ತು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುತ್ತಾ ಬಂದಿರುವ ಸುಬ್ರಮಣಿಯನ್ ಸ್ವಾಮಿ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಮೋದಿ ಭೇಟಿ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿ7 ಪ್ರಕ್ರಿಯೆಗಳನ್ನು ವೀಕ್ಷಿಸಲು ಮೋದಿ ಅವರನ್ನು ಆಹ್ವಾನಿಸಲಾಗಿದೆ. ಆದರೆ ಭಾರತವು ಪ್ರಮುಖ ರಾಷ್ಟ್ರಗಳ ಜಿ7 ಗುಂಪಿನ ಸದಸ್ಯರಾಗಿಲ್ಲದ ಕಾರಣ ಪ್ರಧಾನಿ ಮೋದಿ ಅವರನ್ನು ಭಾಷಣ ಮಾಡಲು ಆಹ್ವಾನಿಸಲಾಗಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸುಬ್ರಮಣಿಯನ್ ಸ್ವಾಮಿ

ಇದನ್ನು ಓದಿದ್ದೀರಾ?  ಮೋದಿ ಸೋಲಿನಿಂದ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ: ಸುಬ್ರಮಣಿಯನ್ ಸ್ವಾಮಿ

“ಬರೀ ಪ್ರಕ್ರಿಯೆ ವೀಕ್ಷಿಸಲು ಪ್ರಧಾನಿ ಮೋದಿ ಅಲ್ಲಿಗೆ ಹೋಗಿದ್ದು ಯಾಕೆ? ಅವರನ್ನು ಉನ್ನತ ಸಮ್ಮೇಳನಕ್ಕೆ ಆಹ್ವಾನಿಸಲಾಗಿದೆ ಎಂದು ನಮ್ಮಲ್ಲಿ ಬುರುಡೆ ಬಿಡಲು ಹೋಗಿದ್ದಾರೆ. ಇದು ಯಾರದೋ ಮದುವೆಗೆ ಹೋಗಿ ಆಮೇಲೆ ನಾನೇ ವರ ಎಂದು ಹೇಳಿಕೊಂಡಂತೆ” ಎಂದು ಬಿಜೆಪಿ ನಾಯಕ ಪ್ರಧಾನಿ ಮೋದಿಯನ್ನು ಕುಟುಕಿದ್ದಾರೆ.

ಈ ಹಿಂದೆ ಪ್ರಧಾನಿ ಮೋದಿ ರಾಮ ಮಂದಿರ ಉದ್ಘಾಟನಾ ಪೂಜೆ ಮಾಡುವುದನ್ನು ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದರು. “ಸೀತೆಯನ್ನು ರಕ್ಷಿಸಲು ರಾಮ ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ತನ್ನ ಪತ್ನಿಯನ್ನೇ ತೊರೆದ ಪ್ರಧಾನಿ ಮೋದಿ ರಾಮ ಮಂದಿರದ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ” ಎಂದು ಪ್ರಶ್ನಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...