ಉದ್ಯೋಗ ಸೃಷ್ಟಿಸುವ ಬದಲು ಮೋದಿ ಸರ್ಕಾರ ಗಮನ ಬೇರೆಡೆ ಸೆಳೆಯುತ್ತಿದೆ: ಕಾಂಗ್ರೆಸ್ ಆರೋಪ

Date:

ನಿರುದ್ಯೋಗ ವಿಚಾರದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕೇಂದ್ರದ ಮೋದಿ ಸರ್ಕಾರವು ಉದ್ಯೋಗ ಸೃಷ್ಟಿ ಮಾಡುವ ಬದಲಾಗಿ ಗಮನ ಬೇರೆಡೆಗೆ ಸೆಳೆಯುತ್ತಿದೆ ಎಂದು ಆರೋಪಿಸಿದೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಸದ್ಯ ದೇಶದಲ್ಲಿ ಪರಿಸ್ಥಿತಿ ಅತೀ ಕೆಟ್ಟದಾಗಿದ್ದು, ಲಕ್ಷಾಂತರ ಜನರು ಉದ್ಯೋಗ ಹುಡುಕಿ ವಿದೇಶಕ್ಕೆ ಹೋಗುವಂತಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಚುನಾವಣಾ ಫಲಿತಾಂಶಕ್ಕೆ ನೀವೇ ಹೊಣೆಗಾರರಾಗುತ್ತೀರಿ: ಕಾಂಗ್ರೆಸ್ ಪದಾಧಿಕಾರಿಗಳಿಗೆ ಖರ್ಗೆ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಪದವಿ ಸೂಚ್ಯಂಕ 2025ರ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಜೈರಾಮ್ ರಮೇಶ್ ಅವರು ಮೋದಿ ಸರ್ಕಾರವು ಉದ್ಯೋಗ ಸೃಷ್ಟಿಸುವ ಬದಲಾಗಿ ಗಮನ ಬೇರೆಡೆ ಸೆಳೆಯುತ್ತಿದೆ ಎಂದು ದೂರಿದ್ದಾರೆ. ಪದವಿ ಪಡೆದ ಶೇಕಡ 42.6ರಷ್ಟು ಜನರು ಉದ್ಯೋಗ ಪಡೆಯುವ ಅರ್ಹತೆ ಹೊಂದಿದ್ದಾರೆ. ಆದರೆ ಶೇಕಡ 57.4ರಷ್ಟು ಪದವಿದರರು ಉದ್ಯೋಗ ಪಡೆಯುವ ಅರ್ಹತೆ ಹೊಂದಿಲ್ಲ ಎಂದು ಭಾರತದ ಪದವಿ ಸೂಚ್ಯಂಕ ವರದಿ ಹೇಳುತ್ತದೆ.

“ಪ್ರಸ್ತುತ ನಿರುದ್ಯೋಗ ಸಮಸ್ಯೆಯಿಂದಾಗಿ ಯುವಕರು ಹತಾಶೆಗೆ ಒಳಗಾಗಿದ್ದಾರೆ, ಒತ್ತಡಕ್ಕೆ ಒಳಗಾಗಿದ್ದಾರೆ. ಪರಿಸ್ಥಿತಿ ಎಷ್ಟು ಕೆಟ್ಟದಾಗಿದೆಯೆಂದರೆ ಲಕ್ಷಾಂತರ ಯುವಕರು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕಾದ ಸ್ಥಿತಿಯಿದೆ. ಆದರೆ ಮೋದಿ ಸರ್ಕಾರವು ಉದ್ಯೋಗ ಸೃಷ್ಟಿ ಮಾಡುವ ಬದಲಾಗಿ ನಿರಂತರವಾಗಿ ದೇಶದ ಗಮನವನ್ನು ಬೇರೆಡೆ ಸೆಳೆಯುವುದರಲ್ಲಿ ನಿರತವಾಗಿದೆ” ಎಂದು ಕಾಂಗ್ರೆಸ್ ನಾಯಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಸುಮಾರು ಶೇಕಡ 57.4ರಷ್ಟು ಪದವಿದರರಿಗೆ ಉದ್ಯೋಗವೇ ಇಲ್ಲ ಎಂದು ವರದಿ ಹೇಳುತ್ತದೆ. ಖಾಸಗಿ ಸಂಸ್ಥೆಗಳು ಮತ್ತು ಕಾರ್ಖಾನೆಗಳು ಈ ಪದವಿದರರನ್ನು ಉದ್ಯೋಗ ಪಡೆಯಲು ಅರ್ಹರೆಂದೇ ಪರಿಗಣಿಸುವುದಿಲ್ಲ. ಪದವಿ ಮತ್ತು ಕೌಶಲ್ಯದ ನಡುವೆ ವ್ಯತ್ಯಾಸವಿದೆ ಎಂಬುದು ಅವರ ಅಭಿಪ್ರಾಯವಾಗಿದೆ” ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

“ಮೋದಿ ಸರ್ಕಾರವು ತಮ್ಮ ಕೆಲವು ಸ್ನೇಹಿತರಿಗೆ ಲಾಭ ಉಂಟು ಮಾಡುವುದರೆಡೆಗೆ ಅಧಿಕ ಗಮನ ಹರಿಸಿದೆ. ಇದರಿಂದಾಗಿ ಭಾರತದಲ್ಲಿ ಅರ್ಧಕ್ಕಿಂತ ಅಧಿಕ ಭಾರತೀಯರಿಗೆ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಯುವಕರು ನಮ್ಮ ದೇಶದ ಭವಿಷ್ಯ. ಅವರಿಗೆ ಉದ್ಯೋಗವಿಲ್ಲ ಎಂದಾದರೆ ನಮ್ಮ ದೇಶದಲ್ಲಿ ಅಭಿವೃದ್ಧಿ ಹೇಗಾಗುತ್ತದೆ” ಎಂದು ರಮೇಶ್ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ನಿರುದ್ಯೋಗದಿಂದ ದೇಶ ತತ್ತರಿಸುತ್ತಿದೆ – ಡಾ ಪ್ರಕಾಶ್

“ಈ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಬೇಕು. ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಿರುವಂತೆ ಶಿಕ್ಷಣ ವ್ಯವಸ್ಥೆ ಯಾಕೆ ಬದಲಾಗಿಲ್ಲ? ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಕೇಂದ್ರಿತ ತರಬೇತಿಗಳನ್ನು ಮುಖ್ಯವಾಹಿನಿಗೆ ತರುವುದು ಯಾವಾಗ” ಎಂದು ಕೂಡಾ ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

2014ರಲ್ಲಿ ಅಧಿಕಾರ ಪಡೆಯುವ ಮುನ್ನ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ ಈವರೆಗೆ ಒಂದು ಕೋಟಿ ಉದ್ಯೋಗವನ್ನು ಕೂಡಾ ಸೃಷ್ಟಿಸಿಲ್ಲ. ಬದಲಾಗಿ ದೇಶದಲ್ಲಿ ನಿರುದ್ಯೋಗ ದರವು ಮೋದಿ ಆಡಳಿತದ ಬಳಿಕ ಏರಿಕೆಯಾಗುತ್ತಾ ಬಂದಿದೆ. ಈ ನಿರುದ್ಯೋಗದಿಂದಾಗಿ ಕಳ್ಳತನ ಮೊದಲಾದ ಅಪರಾಧಗಳು ಅಧಿಕವಾಗುತ್ತಿವೆ ಎಂದು ಹಲವು ತಜ್ಞರುಗಳು ಅಭಿಪ್ರಾಯಿಸಿದ್ದಾರೆ. ಆದರೆ ಮೋದಿ ಸರ್ಕಾರ ನಿರಂತರವಾಗಿ ನೈಜ ಸಮಸ್ಯೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಯತ್ನ ಮಾಡುತ್ತಲೇ ಬಂದಿದೆ. ಕೆಲವು ಬಾರಿ ಸಫಲವೂ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...