ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ ‘ಭಾರೀ ಪ್ರಮಾಣದಲ್ಲಿ’ ಸೃಷ್ಟಿಸಿದೆ: ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, “ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ ‘ಭಾರೀ ಪ್ರಮಾಣದಲ್ಲಿ’ ಸೃಷ್ಟಿಸಿದೆ” ಎಂದು ಟೀಕಿಸಿದ್ದಾರೆ.

ಈ ಬಗ್ಗೆ ತನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದುವರಿಸಿದ್ದಾರೆ. ಅನ್ಯಾದಯ ತೆರಿಗೆಗಳನ್ನು ತೆಗೆದುಹಾಕುವಂತೆ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಹಣದುಬ್ಬರ ಹೆಚ್ಚಳ; ಆದರೆ ಬಂಡವಾಳಶಾಹಿಗಳ ಬೆಳೆಸುತ್ತಿರುವ ಮೋದಿ ಸರ್ಕಾರ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಸರ್ಕಾರದಡಿಯಲ್ಲಿ ಯಾವುದಾದರೂ ‘ಉತ್ಪಾದನೆ’ ಎಂಬುದು ಆಗಿದ್ದರೆ, ಅದು ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರ ಮತ್ತು ಸುಳ್ಳು ಮಾತ್ರ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಹಾಗೆಯೇ ಅನ್ಯಾಯದ ತೆರಿಗೆಯನ್ನು ರದ್ದುಪಡಿಸಿ, ಏಕಸ್ವಾಮ್ಯತ್ವವನ್ನು ಅಳಿಸುಹಾಕಿ, ಬ್ಯಾಂಕ್‌ಗಳಿಗೆ ಸಹಾಯದ ಬಾಗಿಲು ತೆರೆಯಿರಿ, ಕೌಶಲ್ಯ ಹೊಂದಿರುವವರಿಗೆ ಹಕ್ಕು ನೀಡಿ. ಹಾಗಾದರೆ ಮಾತ್ರ ಆರ್ಥಿಕತೆಯನ್ನು, ಉದ್ಯೋಗವನ್ನು ಮತ್ತು ಸದೃಢ ಭಾರತವನ್ನು ಬೆಳೆಸಲು ಸಾಧ್ಯವಾಗುತ್ತದೆ” ಎಂದು ರಾಹುಲ್ ಗಾಂಧಿ ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಉದ್ಯೋಗ ಸೃಷ್ಟಿಸುವ ಬದಲು ಮೋದಿ ಸರ್ಕಾರ ಗಮನ ಬೇರೆಡೆ ಸೆಳೆಯುತ್ತಿದೆ: ಕಾಂಗ್ರೆಸ್ ಆರೋಪ

2014ರಲ್ಲಿ ಪ್ರಧಾನಿಯಾಗುವುದಕ್ಕೂ ಮುನ್ನ ನರೇಂದ್ರ ಮೋದಿ ಅವರು ತಾನು ಪ್ರಧಾನಿಯಾದರೆ ದೇಶದಲ್ಲಿ ಎರಡು ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಮೂರು ಅವಧಿ ಕಳೆದರೂ ಒಂದು ಕೋಟಿ ಉದ್ಯೋಗವನ್ನು ಸೃಷ್ಟಿಸಲು ಕೂಡಾ ಮೋದಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಹಣದುಬ್ಬರವೂ ಕೂಡಾ ಹೆಚ್ಚಾಗುತ್ತಿದೆ, ಆರ್ಥಿಕ ಸ್ಥಿತಿಯೂ ಹದಗೆಡುತ್ತಿದೆ.

2024-25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನವು (ಜಿಡಿಪಿ) ಶೇಕಡ 6.2ರಷ್ಟು ಪ್ರಗತಿ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇಕಡ 9.5ರಷ್ಟು ದಾಖಲಾಗಿತ್ತು. ಇದಕ್ಕೆ ಹೋಲಿಸಿದರೆ ಶೇಕಡ 3.3ರಷ್ಟು ಇಳಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...