ಪಶ್ಚಿಮ ಬಂಗಾಳ, ಅಸ್ಸಾಂ ಚುನಾವಣೆಗೂ ಮುನ್ನ ಮತದಾರರ ಓಲೈಕೆ: ಶೀಘ್ರವೇ ವಂದೇ ಭಾರತ್ ಸ್ಲೀಪರ್ ಉದ್ಘಾಟನೆ!

Date:

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಪ್ರಸ್ತುತ ವಿಧಾನಸಭೆಯ ಅವಧಿ ಮೇ 7ಕ್ಕೆ ಕೊನೆಯಾಗಲಿದೆ. ಅಸ್ಸಾಂ ವಿಧಾನಸಭೆಯ ಅವಧಿಯು ಮೇ 20ಕ್ಕೆ ಕೊನೆಯಾಗಲಿದೆ. ಆದ್ದರಿಂದ ಉಭಯ ರಾಜ್ಯಗಳಲ್ಲಿ 2026ರ ಮಾರ್ಚ್-ಏಪ್ರಿಲ್ ನಡುವೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ಚುನಾವಣೆಗೂ ಮುನ್ನ ಮತದಾರರ ಓಲೈಕೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಳಿದಿದೆ. ಶೀಘ್ರವೇ ವಂದೇ ಭಾರತ್ ಸ್ಲೀಪರ್ ಸಂಚಾರ ಉದ್ಘಾಟನೆಗೆ ಸಜ್ಜುಗೊಳಿಸುತ್ತಿದೆ.

ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಡುವಿನ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2026ರ ಜನವರಿ 18 ಅಥವಾ 19ರಂದು ಉದ್ಘಾಟಿಸುವ ಸಾಧ್ಯತೆಯಿದೆ. ನಿಖರವಾದ ದಿನಾಂಕ ಇನ್ನೂ ಅಧಿಕೃತವಾಗಿಲ್ಲವಾದರೂ, ಚುನಾವಣೆಗೂ ಮುನ್ನವೇ ಉದ್ಘಾಟನೆ ಮಾಡುತ್ತಿರುವುದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿದ್ದೀರಾ? ಕೇರಳ | ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೈಲು ಪಶ್ಚಿಮ ಬಂಗಾಳದ ಹೌರಾ (ಕೋಲ್ಕತ್ತಾ) ಮತ್ತು ಅಸ್ಸಾಂನ ಗುವಾಹಟಿ (ಕಾಮಾಖ್ಯ) ನಡುವೆ ಸಂಚರಿಸಲಿದೆ. 11 ಎಸಿ 3-ಟೈರ್, 4 ಎಸಿ 2-ಟೈರ್ ಮತ್ತು 1 ಫಸ್ಟ್ ಕ್ಲಾಸ್ ಎಸಿ ಕೋಚ್‌ಗಳು ಸೇರಿದಂತೆ ಒಟ್ಟು 16 ಕೋಚ್‌ಗಳನ್ನು ಈ ವಂದೇ ಭಾರತ್ ಸ್ಲೀಪರ್ ರೈಲು ಹೊಂದಿದೆ. ಎಸಿ 3-ಟೈರ್ ಟಿಕೆಟ್ ದರ 2,300 ರೂಪಾಯಿ, ಎಸಿ 2-ಟೈರ್ ಟಿಕೆಟ್ ದರ 3,000 ರೂಪಾಯಿ ಮತ್ತು 1 ಫಸ್ಟ್ ಕ್ಲಾಸ್ ಎಸಿ ಕೋಚ್‌ ದರವು 3,600 ರೂಪಾಯಿ ಎಂದು ಅಂದಾಜಿಸಲಾಗಿದೆ. ಸುಮಾರು 966 ಕಿ.ಮೀ ದೂರವನ್ನು ಈ ರೈಲು 14 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದೆ

ಆದರೆ ಸದ್ಯ ಈ ಉದ್ಘಾಟನೆಯ ಸಮಯ ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವಂತೆ ಮಾಡಿದೆ. ಮಾರ್ಚ್‌-ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ವೇಳೆ ಈ ರೈಲು ಮಾರ್ಗವನ್ನು ಬಿಡುಗಡೆ ಮಾಡಿ ಮತದಾರರನ್ನು ಓಲೈಸುವ, ಮತ ಬ್ಯಾಂಕ್ ತುಂಬಿಕೊಳ್ಳುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಆದರೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾತ್ರ ಸಮರ್ಥನೆಗೆ ಇಳಿದಿದ್ದು, ಈ ಯೋಜನೆಯು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಮತ್ತು ಪ್ರಯಾಣಿಕರ ಅನುಭವವನ್ನು ಸುಧಾರಿಸುವ ಸರ್ಕಾರದ ವಿಶಾಲ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.

ಈ ನಡುವೆ ಸರ್ಕಾರವು ಕೇವಲ ಶ್ರೀಮಂತ ಮತ್ತು ಮೇಲ್ವರ್ಗದ ಪ್ರಯಾಣಿಕರಿಗಾಗಿ ಹೈ-ಪ್ರೊಫೈಲ್ ರೈಲುಗಳನ್ನು ಬಿಡುಗಡೆ ಮಾಡುತ್ತಿದೆ. ಆದರೆ ರೈಲ್ವೆಯ ಬಹುಪಾಲು ಬಳಕೆದಾರರಾದ ಸಾಮಾನ್ಯ ಮತ್ತು ಎಸಿ ಅಲ್ಲದ ಪ್ರಯಾಣಿಕರು ಎದುರಿಸುತ್ತಿರುವ ಜನದಟ್ಟಣೆ, ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸಲು ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದೂ ಸದ್ಯ ಟೀಕೆಗೆ ಗುರಿಯಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...